Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಕರಾವಳಿ–ಮಲೆನಾಡು ಪ್ರವಾಸೋದ್ಯಮಕ್ಕೆ ಹೊಸ...

ಕರಾವಳಿ–ಮಲೆನಾಡು ಪ್ರವಾಸೋದ್ಯಮಕ್ಕೆ ಹೊಸ ನೀತಿ; ಕ್ರೂಸ್, ಬೀಚ್ ಪ್ರವಾಸೋದ್ಯಮಕ್ಕೆ ಒತ್ತು: ಕೆ.ಜೆ. ಜಾರ್ಜ್

ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ

ವಾರ್ತಾಭಾರತಿವಾರ್ತಾಭಾರತಿ3 July 2026 12:14 PM IST
share
ಕರಾವಳಿ–ಮಲೆನಾಡು ಪ್ರವಾಸೋದ್ಯಮಕ್ಕೆ ಹೊಸ ನೀತಿ; ಕ್ರೂಸ್, ಬೀಚ್ ಪ್ರವಾಸೋದ್ಯಮಕ್ಕೆ ಒತ್ತು: ಕೆ.ಜೆ. ಜಾರ್ಜ್

ಬೆಂಗಳೂರು, ಜು.3: ಕರ್ನಾಟಕವನ್ನು ದೇಶದ ಪ್ರಮುಖ ಪ್ರವಾಸೋದ್ಯಮ ತಾಣವನ್ನಾಗಿ ರೂಪಿಸುವ ನಿಟ್ಟಿನಲ್ಲಿ, ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ ನೀಡುವ *'ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026'ಯನ್ನು ರೂಪಿಸಲಾಗುತ್ತಿದೆ. ಈ ನೀತಿಯಲ್ಲಿ ಕ್ರೂಸ್ ಪ್ರವಾಸೋದ್ಯಮ, ಬೀಚ್ ಪ್ರವಾಸೋದ್ಯಮ ಹಾಗೂ ವಿಶ್ವದರ್ಜೆಯ ಪ್ರವಾಸಿ ಸೌಲಭ್ಯಗಳಿಗೆ ವಿಶೇಷ ಆದ್ಯತೆ ನೀಡಬೇಕು ಎಂದು ಇಂಧನ ಮತ್ತು ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ಅಧಿಕಾರಿಗಳಿಗೆ ಸೂಚನೆ ನೀಡಿದರು .

ಇಂದು ಇಂಧನ ಭವನದಲ್ಲಿ ಪ್ರವಾಸೋದ್ಯಮ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು, ರಾಜ್ಯದ ಪ್ರವಾಸೋದ್ಯಮವನ್ನು ಮೇಲ್ದರ್ಜೆಗೇರಿಸುವ ದೂರದೃಷ್ಟಿಯ ಕಾರ್ಯತಂತ್ರಗಳ ಕುರಿತು ಸುದೀರ್ಘ ಚರ್ಚೆ ನಡೆಸಿದರು.

ರಾಜ್ಯದ ಕರಾವಳಿ ಹಾಗೂ ಮಲೆನಾಡು ವ್ಯಾಪ್ತಿಯ ಆರು ಜಿಲ್ಲೆಗಳ ಪ್ರವಾಸೋದ್ಯಮ ಸಾಮರ್ಥ್ಯವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ಸಿದ್ಧವಾಗುತ್ತಿರುವ ಹೊಸ ಪ್ರವಾಸೋದ್ಯಮ ನೀತಿಯಲ್ಲಿ, ವಿಷಯಾಧಾರಿತ (Theme-based) ಪ್ರವಾಸೋದ್ಯಮ ಸರ್ಕೀಟ್ಗಳು, ಕಡಲತೀರ ಪ್ರವಾಸೋದ್ಯಮ, ಕ್ರೂಸ್ ಪ್ರವಾಸೋದ್ಯಮ, ಸಾಹಸ ಕ್ರೀಡೆಗಳು ಹಾಗೂ ಸ್ಥಳೀಯ ಆರ್ಥಿಕತೆಯನ್ನು ಉತ್ತೇಜಿಸುವ ಕಾರ್ಯಕ್ರಮಗಳಿಗೆ ಆದ್ಯತೆ ನೀಡಬೇಕು ಎಂದು ಸಚಿವರು ತಿಳಿಸಿದರು.

ಅಂತಾರಾಷ್ಟ್ರೀಯ ಕ್ರೂಸ್ ಹಡಗುಗಳು ಮಂಗಳೂರು ಸೇರಿದಂತೆ ರಾಜ್ಯದ ವಿವಿಧ ಬಂದರುಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಸಮಗ್ರ ಕಾರ್ಯತಂತ್ರ ರೂಪಿಸಬೇಕಿದೆ. ಕ್ರೂಸ್ ಪ್ರವಾಸಿಗರು ಕರ್ನಾಟಕದಲ್ಲಿ ಹೆಚ್ಚು ದಿನ ಉಳಿಯುವಂತೆ ಆಕರ್ಷಕ ಪ್ರವಾಸೋದ್ಯಮ ಪ್ಯಾಕೇಜ್ ಗಳು ಮತ್ತು ಸರ್ಕೀಟ್ ಗಳನ್ನು ಅಭಿವೃದ್ಧಿಪಡಿಸಬೇಕು. ಈ ನಿಟ್ಟಿನಲ್ಲಿ ಪ್ರಮುಖ ಕ್ರೂಸ್ ಆಪರೇಟರ್ ಗಳೊಂದಿಗೆ ಸಭೆ ನಡೆಸಿ, ಅವರ ಹಾಗೂ ಪ್ರವಾಸಿಗರ ನಿರೀಕ್ಷೆಗಳನ್ನು ಆಧರಿಸಿ ನೀತಿಯಲ್ಲಿ ಅಗತ್ಯ ಬದಲಾವಣೆಗಳನ್ನು ಅಳವಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸಚಿವ ಕೆ.ಜೆ.ಜಾರ್ಜ್ ಸೂಚಿಸಿದರು.

ಬೀಚ್ ಪ್ರವಾಸೋದ್ಯಮವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ, ಬ್ಲೂ ಫ್ಲಾಗ್ ಬೀಚ್ಗಳ ಅಭಿವೃದ್ಧಿ, ಸ್ವಚ್ಛತೆ, ಸುರಕ್ಷತೆ, ಪ್ರವಾಸಿಗರ ಅನುಕೂಲಕ್ಕಾಗಿ ಅಗತ್ಯ ಮೂಲಸೌಕರ್ಯ, ಜಲಕ್ರೀಡೆಗಳು (Water Sports), ಸಾಹಸ ಚಟುವಟಿಕೆಗಳು ಹಾಗೂ ಸಮುದ್ರತೀರದಲ್ಲಿ ಗುಣಮಟ್ಟದ ಪ್ರವಾಸಿ ಅನುಭವ ಕಲ್ಪಿಸುವ ಯೋಜನೆಗಳನ್ನು ಹೊಸ ನೀತಿಯಲ್ಲಿ ಸೇರಿಸಬೇಕು ಎಂದು ಅವರು ತಿಳಿಸಿದರು.

ಇದರ ಜೊತೆಗೆ, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (KSTDC) ಮತ್ತು ಜಂಗಲ್ ಲಾಡ್ಜಸ್ ಆಂಡ್ ರೆಸಾರ್ಟ್ಸ್ (JLR) ವ್ಯಾಪ್ತಿಯ ಪ್ರವಾಸಿ ತಾಣಗಳಲ್ಲಿ ಗುಣಮಟ್ಟದ ವಸತಿ, ಮೂಲಭೂತ ಸೌಕರ್ಯ, ಸ್ವಚ್ಛತೆ, ಮಾಹಿತಿ ವ್ಯವಸ್ಥೆ ಹಾಗೂ ಪ್ರವಾಸಿಗರಿಗೆ ಅಗತ್ಯವಾದ ಸೇವೆಗಳನ್ನು ಮತ್ತಷ್ಟು ವಿಸ್ತರಿಸುವ ಮೂಲಕ ಪ್ರವಾಸಿಗರ ಅನುಭವವನ್ನು ಉತ್ತಮಗೊಳಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

"ಪ್ರವಾಸೋದ್ಯಮ ಎಂದರೆ ಕೇವಲ ಪ್ರವಾಸಿ ತಾಣಗಳ ಅಭಿವೃದ್ಧಿಯಲ್ಲ; ಪ್ರವಾಸಿಗರಿಗೆ ವಿಶ್ವದರ್ಜೆಯ ಅನುಭವವನ್ನು ನೀಡುವ ಸಮಗ್ರ ಪರಿಸರ ವ್ಯವಸ್ಥೆಯನ್ನು ನಿರ್ಮಿಸುವುದು. ಉತ್ತಮ ಮೂಲಸೌಕರ್ಯ, ಸುಲಭ ಸಂಪರ್ಕ, ಸುರಕ್ಷತೆ ಮತ್ತು ಗುಣಮಟ್ಟದ ಸೇವೆಗಳ ಮೂಲಕವೇ ಕರ್ನಾಟಕವನ್ನು ಜಾಗತಿಕ ಪ್ರವಾಸೋದ್ಯಮ ನಕ್ಷೆಯಲ್ಲಿ ಉತ್ತಮ ಸ್ಥಾನ ಪಡೆಯಬಹುದಾಗಿದೆ'' ಎಂದು ಸಚಿವ ಕೆ.ಜೆ. ಜಾರ್ಜ್ ಹೇಳಿದರು .

ಸಭೆಯಲ್ಲಿ ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ತ್ರಿಲೋಕ್ ಚಂದ್ರ, ಪ್ರವಾಸೋದ್ಯಮ ಇಲಾಖೆಯ ಆಯುಕ್ತ ಡಾ. ವಿ. ರಾಮ್ ಪ್ರಸಾತ್ ಮನೋಹರ್, ಕೆಎಸ್ಟಿಡಿಸಿ ಹಾಗೂ ಜೆಎಲ್ಆರ್ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Tags

K.J.GeorgeCoastal–Malnad Karnataka Tourism Policy
share
ವಾರ್ತಾಭಾರತಿ
ವಾರ್ತಾಭಾರತಿ
Next Story
X