Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಮೇಕೆದಾಟು, ಕೃಷ್ಣಾ ಮೇಲ್ದಂಡೆ, ಭದ್ರಾ...

ಮೇಕೆದಾಟು, ಕೃಷ್ಣಾ ಮೇಲ್ದಂಡೆ, ಭದ್ರಾ ಮೇಲ್ದಂಡೆ, ಮಹದಾಯಿ ಯೋಜನೆಗಳಿಗೆ ಅನುಮತಿ, ಅನುದಾನ ನೀಡಿ: ಸಿಎಂ ಡಿಕೆಶಿ ಮನವಿ

ವಾರ್ತಾಭಾರತಿವಾರ್ತಾಭಾರತಿ12 Jun 2026 3:52 PM IST
share
ಮೇಕೆದಾಟು, ಕೃಷ್ಣಾ ಮೇಲ್ದಂಡೆ, ಭದ್ರಾ ಮೇಲ್ದಂಡೆ, ಮಹದಾಯಿ ಯೋಜನೆಗಳಿಗೆ ಅನುಮತಿ, ಅನುದಾನ ನೀಡಿ: ಸಿಎಂ ಡಿಕೆಶಿ ಮನವಿ
ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿಯಾಗಿ ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಚರ್ಚೆ

ಹೊಸದಿಲ್ಲಿ, ಜೂ.12: ಕರ್ನಾಟಕ ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಾದ ಮೇಕೆದಾಟು, ಕೃಷ್ಣಾ ಮೇಲ್ದಂಡೆ, ಭದ್ರಾ ಮೇಲ್ದಂಡೆ, ಮಹದಾಯಿ ಯೋಜನೆಗಳಿಗೆ ಅನುಮತಿ, ಅನುದಾನ ನೀಡಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ಜಲಶಕ್ತಿ ಸಚಿವರಿಗೆ ಮನವಿ ಮಾಡಿದ್ದಾರೆ.

ಹೊಸದಿಲ್ಲಿಯಲ್ಲಿ ಮುಖ್ಯಮಂತ್ರಿ ಗುರುವಾರ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದು, ಶುಕ್ರವಾರ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್.ಪಾಟೀಲ್ ರನ್ನು ಭೇಟಿಯಾಗಿ ನೀರಾವರಿ ಯೋಜನೆಗಳ ಜಾರಿಗೆ ಸಹಕಾರ ಕೋರಿದರು.

ಮುಖ್ಯಮಂತ್ರಿ ಪ್ರಸ್ತಾಪಿಸಿದ ಪ್ರಮುಖ ಅಂಶಗಳು ಹೀಗಿವೆ:

ಮೇಕೆದಾಟು ಯೋಜನೆ:

ಸುಪ್ರೀಂ ಕೋರ್ಟ್ 13.11.2025 ರಂದು ತಮಿಳುನಾಡು ರಾಜ್ಯದ ವಿವಿಧ ಅರ್ಜಿಗಳನ್ನು ವಜಾಗೊಳಿಸಿದೆ ಮತ್ತು ಮೇಕೆದಾಟು ಯೋಜನೆಯ ಅನುಮತಿಯ ಬಗ್ಗೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಮತ್ತು ಕೇಂದ್ರ ಜಲ ಆಯೋಗ (CWC) ನಿರ್ಧಾರ ತೆಗೆದುಕೊಳ್ಳಬೇಕು ಎಂದು ಅಭಿಪ್ರಾಯಪಟ್ಟಿದೆ. CWMA ಈಗಾಗಲೇ ಯೋಜನೆಯನ್ನು ಮೌಲ್ಯಮಾಪನ ಮಾಡಲು CWC ಗೆ ಸೂಚಿಸಿರುವುದರಿಂದ, ಈ ಯೋಜನೆಗೆ ಶೀಘ್ರ ಅನುಮತಿ ಸಿಗುವಂತೆ ನೋಡಿಕೊಳ್ಳಬೇಕು.

ಕೃಷ್ಣಾ ನೀರು ವಿವಾದ ನ್ಯಾಯಾಧೀಕರಣ (KWDT-II) ತೀರ್ಪಿನ ಗೆಜೆಟ್ ಅಧಿಸೂಚನೆ:

ಕೃಷ್ಣಾ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ, ಕೃಷ್ಣಾ ನೀರು ವಿವಾದ ನ್ಯಾಯಾಧೀಕರಣ-II (KWDT-II) ತೀರ್ಪು ನೀಡಿ ಒಂದು ದಶಕಕ್ಕೂ ಹೆಚ್ಚು ಕಾಲ ಕಳೆದಿದ್ದರೂ, ಕೇಂದ್ರ ಸರಕಾರ ಇನ್ನೂ ಈ ತೀರ್ಪನ್ನು ಗೆಜೆಟ್ ನಲ್ಲಿ ಅಧಿಸೂಚಿಸಿಲ್ಲ. ಕರ್ನಾಟಕ ರಾಜ್ಯವು ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-III ರ ಅನುಷ್ಠಾನದಲ್ಲಿ ಭಾರಿ ಮೊತ್ತವನ್ನು ಹೂಡಿಕೆ ಮಾಡಿದೆ ಮತ್ತು ನಮ್ಮ ಯೋಜನೆ ಮುಂದುವರಿಸಲು ಹಾಗೂ ನಮ್ಮ ಪಾಲಿನ ನೀರನ್ನು ಬಳಸಿಕೊಳ್ಳಲು ಕೇಂದ್ರದ ಬೆಂಬಲದ ಅಗತ್ಯವಿದೆ.

ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದ ನೆರವು:

ಭದ್ರಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದಂತೆ, ಕೇಂದ್ರ ಸರಕಾರವು 2023-24ರ ಕೇಂದ್ರ ಬಜೆಟ್ನಲ್ಲಿ 5,300 ಕೋಟಿ ರೂ.ಗಳ ನೆರವನ್ನು ಘೋಷಿಸಿತ್ತು. ಆದರೆ, 3 ವರ್ಷಗಳು ಕಳೆದರೂ ರಾಜ್ಯಕ್ಕೆ ಈ ಹಣಕಾಸಿನ ನೆರವು ಬಿಡುಗಡೆಯಾಗಿಲ್ಲ. ಈ ಯೋಜನೆಯ 21,167.93 ಕೋಟಿ ರೂ.ಗಳ ಪರಿಷ್ಕೃತ ವೆಚ್ಚದ ಅಂದಾಜಿನ ಪ್ರಸಕ್ತ ಪ್ರಸ್ತಾವವನ್ನು ಮೌಲ್ಯಮಾಪನ ಮಾಡಿದೆ. PMKSY-AIBP ಯೋಜನೆಯಡಿ ಈ ಯೋಜನೆಗೆ ಕೇಂದ್ರದ ನೆರವನ್ನು ಶೀಘ್ರ ಬಿಡುಗಡೆ ಮಾಡಬೇಕು.

ಮಹದಾಯಿ ಕಣಿವೆಯ ಕಳಸಾ ಮತ್ತು ಬಂಡೂರಿ ನಾಲಾ ಯೋಜನೆಗಳು:

ಮಹದಾಯಿ ಕಣಿವೆಯಡಿ ಬರುವ ಕಳಸಾ ಮತ್ತು ಬಂಡೂರಿ ನಾಲಾ ಯೋಜನೆಗಳನ್ನು ಹುಬ್ಬಳ್ಳಿ-ಧಾರವಾಡದ ಕುಡಿಯುವ ನೀರಿನ ಅಗತ್ಯಗಳನ್ನು ಪೂರೈಸಲು ಉದ್ದೇಶಿಸಲಾಗಿದೆ. ಅವುಗಳಿಗೆ ಡಿಸೆಂಬರ್ 2022 ರಲ್ಲಿ CWC/ಜಲಶಕ್ತಿ ಸಚಿವಾಲಯವು ಅನುಮತಿ ನೀಡಿದ್ದರೂ, ಈ ಯೋಜನೆಗೆ ಯಾವುದೇ ಕಾನೂನು ಅಡಚಣೆಗಳಿಲ್ಲದಿದ್ದರೂ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದಿಂದ (MoEF & CC) ಅರಣ್ಯ/ವನ್ಯಜೀವಿ ಅನುಮತಿ ಇನ್ನೂ ಸಿಕ್ಕಿಲ್ಲ. ಇದರಿಂದಾಗಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕುಡಿಯುವ ನೀರಿನ ಅಗತ್ಯಗಳನ್ನು ಪೂರೈಸಲು ತೀರ್ಪಿನ ಅನ್ವಯ ಹಂಚಿಕೆಯಾದ ನೀರನ್ನು ಬಳಸಿಕೊಳ್ಳಲು ನಮಗೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಆದಷ್ಟು ಬೇಗ ಈ ಯೋಜನೆಗಳಿಗೆ ಅನುಮತಿ ಕೊಡಿಸಬೇಕು.

ಏತ ನೀರಾವರಿ, ಕಾಲುವೆ ಕಾಮಗಾರಿಗಳಿಗೆ AIBP-PMKSY ಮತ್ತು FMBAP ಯೋಜನೆಗಳಡಿ ಕೇಂದ್ರದ ನೆರವು:

ಭಾರತ ಸರಕಾರದ AIBP-PMKSY ಮತ್ತು FMBAP ಯೋಜನೆಗಳಡಿ ಕೇಂದ್ರದ ನೆರವು ಕೋರಿ ಕರ್ನಾಟಕ ರಾಜ್ಯವು ಫೆಬ್ರವರಿ 2025ರಲ್ಲಿ ಈ ಕೆಳಗಿನ ಯೋಜನೆಗಳ PFR / DPR ಗಳನ್ನು ಕೇಂದ್ರ ಸರಕಾರಕ್ಕೆ ಸಲ್ಲಿಸಿದೆ.

ಸೊಂತಿ ಏತ ನೀರಾವರಿ, ಇಂಡಿ ಶಾಖಾ ಕಾಲುವೆ, ಮಲಪ್ರಭಾ ಕಾಲುವೆ ಬಾಕಿ ಕಾಮಗಾರಿ, ಘಟಪ್ರಭಾ ಬಲದಂಡೆ ಕಾಲುವೆ ಮತ್ತು ಚಿಕ್ಕೋಡಿ ಶಾಖಾ ಕಾಲುವೆ, ತುಂಗಭದ್ರಾ ಎಡದಂಡೆ ಕಾಲುವೆ ಬಾಕಿ ಕಾಮಗಾರಿ, ಬೆಣ್ಣಿಹಳ್ಳ ನದಿಯ ಪ್ರವಾಹ ನಿಯಂತ್ರಣ ಮತ್ತು ಪ್ರವಾಹ ನಿರ್ವಹಣೆ ಯೋಜನೆಗಳಿಗೆ ಕೇಂದ್ರ ಸರಕಾರ ನೆರವು ನೀಡಬೇಕು.

ನದಿ ಜೋಡಣೆ ಯೋಜನೆಯಲ್ಲಿ ರಾಜ್ಯಕ್ಕೆ ನ್ಯಾಯಯುತ ಪಾಲು ಹಂಚಿಕೆ:

ಕೇಂದ್ರ ಸರಕಾರದ ನದಿಗಳ ಜೋಡಣೆಯ ಪ್ರಸ್ತಾವಗಳ ಅಡಿಯಲ್ಲಿ, ನದಿ ಜೋಡಣೆ (ILR) ಯೋಜನೆಗಳಿಂದ "ಸಮತೆ ಮತ್ತು ಸಮಾನ ಹಂಚಿಕೆಯ ತತ್ವದ" ಮೇಲೆ ಕರ್ನಾಟಕ ರಾಜ್ಯಕ್ಕೆ ನ್ಯಾಯಸಮ್ಮತವಾದ ಪಾಲನ್ನು ಹಂಚಿಕೆ ಮಾಡಬೇಕು.

Tags

DK ShivakumarCR Patil
share
ವಾರ್ತಾಭಾರತಿ
ವಾರ್ತಾಭಾರತಿ
Next Story
X