Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಮಧ್ಯಪ್ರಾಚ್ಯ ಉದ್ವಿಗ್ನ | ಅನಿವಾಸಿ...

ಮಧ್ಯಪ್ರಾಚ್ಯ ಉದ್ವಿಗ್ನ | ಅನಿವಾಸಿ ಕನ್ನಡಿಗರ ಸಹಾಯಕ್ಕೆ 24x7 ಸಹಾಯವಾಣಿ ಸಕ್ರಿಯ: ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ2 March 2026 3:51 PM IST
share
ಮಧ್ಯಪ್ರಾಚ್ಯ ಉದ್ವಿಗ್ನ | ಅನಿವಾಸಿ ಕನ್ನಡಿಗರ ಸಹಾಯಕ್ಕೆ 24x7 ಸಹಾಯವಾಣಿ ಸಕ್ರಿಯ: ಸಿದ್ದರಾಮಯ್ಯ
"ವಿದೇಶದಲ್ಲಿರುವ ಕನ್ನಡಿಗರ ಸುರಕ್ಷತೆ, ಯೋಗಕ್ಷೇಮ ನಮ್ಮ ಪ್ರಮುಖ ಆದ್ಯತೆಯಾಗಿದೆ"

ಬೆಂಗಳೂರು : ಮಧ್ಯಪ್ರಾಚ್ಯದ ಕೆಲವು ಭಾಗಗಳಲ್ಲಿ ನಡೆಯುತ್ತಿರುವ ಬೆಳವಣಿಗೆಯನ್ನು ನಾನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ವಿದೇಶದಲ್ಲಿರುವ ಪ್ರತಿಯೊಬ್ಬ ಕನ್ನಡಿಗರ ಸುರಕ್ಷತೆ ಮತ್ತು ಯೋಗಕ್ಷೇಮ ನಮ್ಮ ಪ್ರಮುಖ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮುಖ್ಯಮಂತ್ರಿ, ಇಲ್ಲಿಯವರೆಗೆ ಸ್ವೀಕರಿಸಿದ ಮಾಹಿತಿಯ ಪ್ರಕಾರ, ವಾಯುಪ್ರದೇಶ ನಿರ್ಬಂಧ, ವಿಮಾನ ರದ್ದತಿ ಕಾರಣದಿಂದ ಸುಮಾರು 100 ಕನ್ನಡಿಗರು ಯುಎಇಯಲ್ಲಿ ಮತ್ತು 9 ಮಂದಿ ಬಹರೈನ್ನಲ್ಲಿ ಸಿಲುಕಿಕೊಂಡಿದ್ದಾರೆ. ಅವರ ವಿವರಗಳನ್ನು ಪರಿಶೀಲಿಸಿ ಅಗತ್ಯ ಸಹಾಯವನ್ನು ನೀಡಲು ನಮ್ಮ ತಂಡಗಳು ನಿರಂತರ ಸಂಪರ್ಕದಲ್ಲಿವೆ ಎಂದು ಹೇಳಿದ್ದಾರೆ.

ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ (SEOC) ಮತ್ತು ಎಲ್ಲಾ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರಗಳು (DEOCs) ದಿನದ 24 ಗಂಟೆಯೂ ಸಕ್ರಿಯವಾಗಿವೆ. ನಾವು ವಿದೇಶಾಂಗ ಸಚಿವಾಲಯ, ನಾಗರಿಕ ವಿಮಾನಯಾನ ಸಚಿವಾಲಯ, ಭಾರತೀಯ ರಾಯಭಾರ ಕಚೇರಿ ಮತ್ತು ದೂತಾವಾಸಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ ಎಂದು ಹೇಳಿದ್ದಾರೆ.

ಕನ್ನಡಿಗರ ಸುರಕ್ಷತೆ, ಅಗತ್ಯ ನೆರವು ಮತ್ತು ಸಾಧ್ಯವಾದಷ್ಟು ಬೇಗ ಅವರನ್ನು ತಾಯ್ನಾಡಿಗೆ ವಾಪಸ್ಸು ಕರೆತರುವ ಕುರಿತು ತುರ್ತು ಕ್ರಮ ಕೈಗೊಳ್ಳುವಂತೆ ನಮ್ಮ ಮುಖ್ಯ ಕಾರ್ಯದರ್ಶಿಗಳು ಭಾರತ ಸರಕಾರಕ್ಕೆ ಪತ್ರ ಬರೆದಿದ್ದಾರೆ. ಜೊತೆಗೆ, ವಿಮಾನಯಾನ ಸಂಸ್ಥೆಗಳೊಂದಿಗೆ ಸಮನ್ವಯ ಸಾಧಿಸಿ ಅಗತ್ಯ ನೆರವು ಒದಗಿಸುವುದು, ಟಿಕೆಟ್ ಮರುನಿಗದಿಗೆ ಸೌಕರ್ಯ ಕಲ್ಪಿಸುವುದು ಮತ್ತು ಶೀಘ್ರದಲ್ಲೇ ವಿಮಾನಗಳ ವ್ಯವಸ್ಥೆ ಮಾಡುವಂತೆ ಪ್ರತ್ಯೇಕ ಮನವಿ ಕೂಡ ಸಲ್ಲಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಉದ್ವಿಗ್ನತೆ ಉಂಟಾಗಿರುವ ಪ್ರದೇಶದಲ್ಲಿರುವ ನಮ್ಮ ಸಹೋದರರು ಹಾಗೂ ಸಹೋದರಿಯರು ದಯವಿಟ್ಟು ಶಾಂತವಾಗಿರಬೇಕು. ಸ್ಥಳೀಯ ಅಧಿಕಾರಿಗಳು ಹಾಗೂ ಭಾರತೀಯ ರಾಯಭಾರಿ ಕಚೇರಿಗಳು ನೀಡಿರುವ ಸೂಚನೆಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು.

ಸಂಕಷ್ಟದಲ್ಲಿರುವವರು ಸಹಾಯವಾಣಿ ಮೂಲಕ ಸಂಬಂಧಿತ ರಾಯಭಾರ ಕಚೇರಿ ಅಥವಾ ಕಾನ್ಸುಲೇಟ್ ನಲ್ಲಿ ನೋಂದಾಯಿಸಿಕೊಳ್ಳಿ. ನಮ್ಮ ತಂಡಗಳು ಎಲ್ಲ ಮನವಿಗಳನ್ನು ಸಂಗ್ರಹಿಸಿ ಸಾಧ್ಯವಾದ ಎಲ್ಲಾ ರೀತಿಯ ಬೆಂಬಲವನ್ನು ನೀಡುತ್ತಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಕೆಳಗೆ ಹಂಚಿಕೊಳ್ಳಲಾದ ಸಹಾಯವಾಣಿ ಸಂಖ್ಯೆಗಳ ಮೂಲಕ ಸಂಬಂಧಪಟ್ಟ ರಾಯಭಾರ ಕಚೇರಿ ಅಥವಾ ದೂತಾವಾಸದಲ್ಲಿ ನೋಂದಾಯಿಸಿ. ನಮ್ಮ ತಂಡಗಳು ಮನವಿಗಳನ್ನು ಸ್ವೀಕರಿಸಿ ಸಾಧ್ಯವಿರುವ ಎಲ್ಲ ಬೆಂಬಲವನ್ನು ನೀಡುತ್ತಿವೆ. ಕರ್ನಾಟಕ ಸರಕಾರ ನಿಮ್ಮೊಂದಿಗೆ ದೃಢವಾಗಿ ನಿಲ್ಲುತ್ತದೆ. ನಿಮ್ಮ ಸುರಕ್ಷತೆ ಮತ್ತು ಸುರಕ್ಷಿತವಾಗಿ ವಾಪಾಸ್ಸಾಗುವುದನ್ನು ಖಚಿತಪಡಿಸಿಕೊಳ್ಳಲು ನಾವು ಅಗತ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುವುದನ್ನು ಮುಂದುವರಿಸುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ತುರ್ತು ಸಹಾಯವಾಣಿ ಸಂಖ್ಯೆ :

ಇಸ್ರೇಲ್

+972-54-7520711

ಇರಾನ್

+98 912 810 9115, +98 912 810 9109, +98 912 810 9102, +98 993 217 9359

ಸೌದಿ ಅರಬಿಯಾ

ರಿಯಾದ್: 00-966-11-4884697 | 00-966-542126748 (WhatsApp) 800 247 1234 (Toll-Free)

ಜಿದ್ದಾ: WhatsApp: +966 536209704

Landline: 00 966 126648660/00 966 12 2614093

Mobile: +966 556122301 | Toll-Free: 800 244 0003

ಯುಎಇ

Toll-Free: 800-46342 | WhatsApp: +971 5430 90571

ಖತರ್

00974-55647502

ಬಹರೈನ್

00973-39418071

ಜೋರ್ಡಾನ್

00962-770 422 276

ಒಮಾನ್

Toll-Free: 8007 1234 |

WhatsApp: +9689828 2270

ಇರಾಕ್

+964 771 651 1185 +964 770 444 4899 (Arabic)

ಕುವೈತ್

+965 65501946

ಫೆಲೆಸ್ತೀನ್

+970 592916418




Tags

Iran Israel US WarSiddaramaiahhelpline
share
ವಾರ್ತಾಭಾರತಿ
ವಾರ್ತಾಭಾರತಿ
Next Story
X