Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ‘ಹಾಲಿನ ದರ ಏರಿಕೆ’ ಪ್ರಸ್ತಾವ ಹಿಂಪಡೆಯಲು...

‘ಹಾಲಿನ ದರ ಏರಿಕೆ’ ಪ್ರಸ್ತಾವ ಹಿಂಪಡೆಯಲು ವಿಪಕ್ಷಗಳ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ27 March 2025 6:58 PM IST
share
‘ಹಾಲಿನ ದರ ಏರಿಕೆ’ ಪ್ರಸ್ತಾವ ಹಿಂಪಡೆಯಲು ವಿಪಕ್ಷಗಳ ಒತ್ತಾಯ

ಬೆಂಗಳೂರು : ನಂದಿನಿ ಹಾಲಿನ ಬೆಲೆ ಪ್ರತಿ ಲೀಟರ್‌ಗೆ 4 ರೂಪಾಯಿಗಳಷ್ಟು ಹೆಚ್ಚಳಕ್ಕೆ ಮುಂದಾಗಿರುವ ರಾಜ್ಯ ಸರಕಾರದ ವಿರುದ್ಧ ಜನಸಾಮಾನ್ಯರು ಸೇರಿದಂತೆ ಪ್ರತಿಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಹಾಲಿನ ದರ ಏರಿಕೆ ಪ್ರಸ್ತಾವವನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಲಾಗಿದೆ.

ಜೇಬಿಗೆ ಕತ್ತರಿ: ಗ್ಯಾರಂಟಿ ಯೋಜನೆಗಳನ್ನು ನಿರ್ವಹಿಸಲು ಹೆಣಗಾಡುತ್ತಿದ್ದು, ಸರಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಜನರಿಗೆ ಬೆಲೆ ಏರಿಕೆಯ ದೌರ್ಭಾಗ್ಯವನ್ನು ನಿರಂತರ ಹೇರುತ್ತಲೇ ಬರುತ್ತಿದೆ. ಕುಡಿಯುವ ನೀರು, ವಿದ್ಯುತ್ ಬಿಲ್, ಸಾರಿಗೆ, ಅಗತ್ಯ ವಸ್ತುಗಳು ಹೀಗೆ ಒಂದರ ಮೇಲೊಂದರಂತೆ ಬೆಲೆ ಏರಿಕೆಯ ಬಿಸಿಯನ್ನು ಜನ ಅನುಭವಿಸುತ್ತಿರುವ ಹೊತ್ತಿನಲ್ಲೇ, ಈ ಸರಕಾರ 2ನೇ ಬಾರಿ ಹಾಲಿನ ದರ ಏರಿಕೆ ಮಾಡುವ ಮೂಲಕ ಬೆಲೆ ಏರಿಕೆ ಬರೆ ಎಳೆಯುವಲ್ಲಿ ಪೈಪೋಟಿಗೆ ಬಿದ್ದಂತೆ ಕಾಣುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

ಗುರುವಾರ ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಅವರು, ‘ಸದ್ಯ ಹಾಲಿನ ದರ 4ರೂ ಹೆಚ್ಚಳ ಮಾಡಿ ಜನಸಾಮಾನ್ಯರ ಜೇಬಿಗೆ ಕತ್ತರಿ ಪ್ರಯೋಗ ಮಾಡುತ್ತಿರುವ ನಿರ್ಧಾರ ಹಗಲು ದರೋಡೆಯಲ್ಲದೇ ಬೇರೇನೂ ಅಲ್ಲ. ಹೈನುಗಾರಿಕೆ ಅವಲಂಬಿಸಿರುವ ರೈತ ಸಮುದಾಯಕ್ಕೆ ಹೆಚ್ಚಿನ ದರ ಹಾಗೂ ಪ್ರೋತ್ಸಾಹ ಧನವನ್ನು ಕೊಡುವುದು ಸರಕಾರದ ಆದ್ಯ ಕರ್ತವ್ಯವಾಗಬೇಕೇ ಹೊರತು, ಈ ಕಾರಣವನ್ನು ಮುಂದಿಟ್ಟುಕೊಂಡು ಜನರ ಮೇಲೆ ಬೆಲೆ ಏರಿಕೆಯ ಬಿಸಿ ತಟ್ಟಿಸಲು ಹೊರಟಿರುವುದು ‘ಒಂದು ಕೈಯಲ್ಲಿ ಕೊಟ್ಟು ಮತ್ತೊಂದು ಕೈಯಲ್ಲಿ ಕಿತ್ತುಕೊಳ್ಳುವ ನಡೆಯಾಗುತ್ತದೆ' ಎಂದು ಟೀಕಿಸಿದ್ದಾರೆ.

‘ರೈತರನ್ನೂ ಉತ್ತೇಜಿಸಬೇಕು ಜನಸಾಮಾನ್ಯರ ಹಿತಾಸಕ್ತಿಯನ್ನೂ ಕಾಪಾಡಬೇಕು, ಇದು ಸಮರ್ಥ ಜನಪರ ಹಾಗೂ ಯೋಗ್ಯ ಸರಕಾರದಿಂದ ಮಾತ್ರ ಸಾಧ್ಯವಾಗುತ್ತದೆ. ಇಂತಹ ಯಾವ ಅರ್ಹತೆಗಳೂ ಕಾಂಗ್ರೆಸ್ ಸರಕಾರಕ್ಕೆ ಇಲ್ಲವೇ ಇಲ್ಲ. ಸರಕಾರದ ಜನವಿರೋಧಿ ಧೋರಣೆಯನ್ನು ಬಿಜೆಪಿ ನಿರಂತರ ಪ್ರತಿಭಟಿಸುತ್ತಲೇ ಬರುತ್ತಿದ್ದರೂ ಈ ಸರಕಾರ ಜನಾಕ್ರೋಶಕ್ಕೆ ಕ್ಯಾರೇ ಎನ್ನುತ್ತಿಲ್ಲ, ಅಧಿಕಾರಕ್ಕಾಗಿ ಕಚ್ಚಾಡುವುದನ್ನು ಬಿಟ್ಟರೆ ಕಾಂಗ್ರೆಸ್ ಸರಕಾರದ ಅಂಗಳದಲ್ಲಿ ಏನೇನು ಈಗ ಉಳಿದಿಲ್ಲ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

‘ಬರಿದಾಗಿರುವ ಬೊಕ್ಕಸ ತುಂಬಿಸಿಕೊಳ್ಳಲು ಬೆಲೆ ಏರಿಸುವುದನ್ನು ಬಿಟ್ಟರೆ ಅನ್ಯಮಾರ್ಗವಿಲ್ಲ ಎಂಬ ಪರಿಸ್ಥಿತಿ ಇರುವುದನ್ನು ಸರಕಾರ ಅನಾವರಣಗೊಳಿಸಿಕೊಳ್ಳುತ್ತಿದೆ. ಪ್ರತಿಯೊಂದು ಕುಟುಂಬವೂ ಬಳಸುವ ಹಾಲಿನ ದರವನ್ನು ಏರಿಸಲು ಸಂಪುಟ ನಿರ್ಧರಿಸಿರುವ ಸರಕಾರ ಈ ನಿರ್ಧಾರದಿಂದ ಹಿಂದೆ ಸರಿಯಲಿ’ ಎಂದು ವಿಜಯೇಂದ್ರ ಆಗ್ರಹಿಸಿದ್ದಾರೆ.

ಯುಗಾದಿ ಉಡುಗೊರೆ: ‘ಅಭಿವೃದ್ಧಿ ಶೂನ್ಯ ಕಾಂಗ್ರೆಸ್ ಸರಕಾರ, ಬೆಲೆ ಏರಿಸುವುದನ್ನೇ ನಿತ್ಯ ಕಾಯಕವಾಗಿಸಿಕೊಂಡು ಜನಸಾಮಾನ್ಯರನ್ನು ದಿನೇ ದಿನೇ ಸುಲಿಗೆ ಮಾಡುತ್ತಿದೆ. ನಂದಿನ ಹಾಲಿನ ದರ 4 ರೂ.ಹೆಚ್ಚಿಸಿ ರಾಜ್ಯದ ಜನರಿಗೆ ಯುಗಾದಿಗೆ ಉಡುಗೊರೆ ನೀಡಿದೆ ಎಂದು ಜೆಡಿಎಸ್ ಲೇವಡಿ ಮಾಡಿದೆ.

ಗುರುವಾರ ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಜೆಡಿಎಸ್, 2 ವರ್ಷದಲ್ಲಿ 3 ಬಾರಿ ಹಾಲಿನ ದರ ಏರಿಕೆ ಮಾಡಿದ್ದು, ಲೀ.ಗೆ 9 ರೂ.ಗಳಷ್ಟು ಹೆಚ್ಚಳ ಮಾಡಿದೆ. ವಚನ ಭ್ರಷ್ಟ ಕಾಂಗ್ರೆಸ್ ಸರಕಾರ, ಹಾಲು ಉತ್ಪಾದಕರಿಗೆ ಹಾಲಿನ ದರ ಕಡಿತಗೊಳಿಸಿದೆ, ಜೊತೆಗೆ ಹಾಲಿನ ಪ್ರೋತ್ಸಾಹ ಧನವನ್ನು ರೈತರಿಗೆ ಸರಿಯಾಗಿ ಕೊಡುತ್ತಿಲ್ಲ. ಸಿದ್ದರಾಮಯ್ಯ ಸರಕಾರ 2 ವರ್ಷದಲ್ಲಿ 3ನೇ ಬಾರಿಗೆ ಹಾಲಿನ ಬೆಲೆ ಏರಿಸಿ ಸಂಗ್ರಹಿಸುತ್ತಿರುವ ಸಾವಿರಾರು ಕೋಟಿ ರೂ.ಹಣ ಎಲ್ಲಿಗೆ ಹೋಗುತ್ತಿದೆ, ಯಾರ ಜೇಬು ಸೇರುತ್ತಿದೆ?’ ಎಂದು ಟೀಕಿಸಿದೆ.

ಅಭಿವೃದ್ಧಿ ಶೂನ್ಯ @INCKarnataka ಸರ್ಕಾರ, ಬೆಲೆ ಏರಿಸುವುದನ್ನೇ ನಿತ್ಯ ಕಾಯಕವಾಗಿಸಿಕೊಂಡು ಜನಸಾಮಾನ್ಯರನ್ನು ದಿನೇ ದಿನೇ ಸುಲಿಗೆ ಮಾಡುತ್ತಿದೆ. ನಂದಿನ ಹಾಲಿನ ದರ ₹4 ಹೆಚ್ಚಿಸಿ ರಾಜ್ಯದ ಜನರಿಗೆ ಯುಗಾದಿಗೆ ಉಡುಗೊರೆ ನೀಡಿದೆ. 2 ವರ್ಷದಲ್ಲಿ 3 ಬಾರಿ ಹಾಲಿನ ದರ ಏರಿಕೆ; ಲೀ. 9 ಹೆಚ್ಚಳ * 2023 ಆಗಸ್ಟ್‌ನಲ್ಲಿ ಹಾಲಿನ ದರ ಲೀ. ₹3… pic.twitter.com/CdeUIXOjxl

— Janata Dal Secular (@JanataDal_S) March 27, 2025

"ರಾಜ್ಯದ ಜನಸಾಮಾನ್ಯರ ಮೇಲೆ ಬೆಲೆ ಏರಿಕೆಯ ಬರೆ ಮುಂದುವರೆಸಿದೆ ಕಾಂಗ್ರೆಸ್ ಸರ್ಕಾರ"ಪಂಚ ಭಾಗ್ಯಗಳನ್ನು ನಿರ್ವಹಿಸಲು ಹೆಣಗಾಡುತ್ತಿರುವ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಜನಸಾಮಾನ್ಯರಿಗೆ ಬೆಲೆ ಏರಿಕೆಯ ದೌರ್ಭಾಗ್ಯವನ್ನು ನಿರಂತರ ಹೇರುತ್ತಲೇ ಬರುತ್ತಿದೆ. ಕುಡಿಯುವ ನೀರು, ವಿದ್ಯುತ್ ಬಿಲ್, ಸಾರಿಗೆ, ಅಗತ್ಯ ವಸ್ತುಗಳು ಹೀಗೆ… pic.twitter.com/moaKVkBp2n

— Vijayendra Yediyurappa (@BYVijayendra) March 27, 2025

share
ವಾರ್ತಾಭಾರತಿ
ವಾರ್ತಾಭಾರತಿ
Next Story
X