Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಸೂಕ್ಷ್ಮಾಣುಜೀವಿ ನಿರೋಧಕತೆಯನ್ನು...

ಸೂಕ್ಷ್ಮಾಣುಜೀವಿ ನಿರೋಧಕತೆಯನ್ನು ತಡೆಗಟ್ಟುವಲ್ಲಿ ಸಂಘಟಿತ ಪ್ರಯತ್ನ ಅಗತ್ಯ : ಸಚಿವ ಭೋಸರಾಜು

ವಾರ್ತಾಭಾರತಿವಾರ್ತಾಭಾರತಿ14 May 2025 6:23 PM IST
share
ಸೂಕ್ಷ್ಮಾಣುಜೀವಿ ನಿರೋಧಕತೆಯನ್ನು ತಡೆಗಟ್ಟುವಲ್ಲಿ ಸಂಘಟಿತ ಪ್ರಯತ್ನ ಅಗತ್ಯ : ಸಚಿವ ಭೋಸರಾಜು

ಬೆಂಗಳೂರು : ಸೂಕ್ಷ್ಮಾಣುಜೀವಿ ನಿರೋಧಕತೆ ವಿಶ್ವದಲ್ಲಿ ನಿಶ್ಯಬ್ದ ಸಾಂಕ್ರಾಮಿಕ ರೋಗವಾಗಿ ಹರಡುತ್ತಿರುವ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಕಳವಳವ್ಯಕ್ತಪಡಿಸಿದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಂಘಟಿತ ಪ್ರಯತ್ನ ಅಗತ್ಯವಾಗಿದೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಭೋಸರಾಜು ತಿಳಿಸಿದರು.

ಬುಧವಾರ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡಮೆ ಆಯೋಜಿಸಿರುವ ‘ಸೂಕ್ಷ್ಮಾಣುಜೀವಿ ನಿರೋಧಕತೆ: ತಡೆಗಟ್ಟುವ ಕಾರ್ಯತಂತ್ರಗಳು ಮತ್ತು ಪರ್ಯಾಯಗಳು’ ಎನ್ನುವ ಮೂರು ದಿನಗಳ ರಾಷ್ಟ್ರೀಯ ಸಮ್ಮೇಳನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಭಾರತದಲ್ಲಿ, India AMR Innovation Hub ಈ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದು, ಸಂಶೋಧಕರು, ವೈದ್ಯರು ಮತ್ತು ನೀತಿ ರೂಪಿಸುವ ತಜ್ಞರು ತಾವು ಅನುಭವಿಸುತ್ತಿರುವ ಸನ್ನಿವೇಶಗಳಿಗೆ ತಕ್ಕ ಪರಿಹಾರಗಳನ್ನು ಹುಡುಕಲು ಒಟ್ಟಾಗಿ ಕೆಲಸ ಮಾಡುವಂತೆ ಪ್ರೋತ್ಸಾಹಿಸುತ್ತಿದೆ. ಎಎಂಆರ್ ವಿರುದ್ಧ ಹೋರಾಟದಲ್ಲಿ ಕೇಂದ್ರ-ರಾಜ್ಯ ಸರಕಾರಗಳು ಮಹತ್ವದ ಕ್ರಮಗಳನ್ನು ಕೈಗೊಂಡಿದ್ದು, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಕಾರ್ಯಯೋಜನೆಗಳ ಮೂಲಕ ಜನಜಾಗೃತಿ ಮೂಡಿಸುತ್ತಿದೆ ಎಂದರು.

ಔಷಧ ಬಳಕೆಯ ಮೇಲ್ವಿಚಾರಣೆ, ಮಾರಾಟದ ನಿಯಂತ್ರಣ ಮತ್ತು ಮಾನವರು ಹಾಗೂ ಪ್ರಾಣಿಗಳಲ್ಲಿ ಆಂಟಿಬಯೋಟಿಕ್‍ಗಳ ಸಮರ್ಪಕ ಬಳಕೆಗಾಗಿ ಕಾರ್ಯನಿರ್ವಹಿಸುತ್ತಿವೆ. ನಮ್ಮ ಕರ್ನಾಟಕವು ಈ ಸಂಬಂಧ ಸಂಶೋಧನೆಯಲ್ಲಿ ಮುಂಚೂಣಿಯಲ್ಲಿದ್ದು, ಬೆಂಗಳೂರು ಸೇರಿದಂತೆ ಅನೇಕ ಪ್ರಸಿದ್ಧ ಸಂಶೋಧನಾ ಸಂಸ್ಥೆಗಳು ಎಎಂಆರ್‍ಗೆ ಪ್ರತಿಕ್ರಿಯಿಸಲು ಹೊಸಪದ್ಧತಿಗಳನ್ನು ಅಭಿವೃದ್ಧಿಪಡಿಸುತ್ತಿವೆ ಎಂದರು.

ಎಎಂಆರ್ ವಿರುದ್ಧ ಹೋರಾಟವು ಕೇವಲ ವೈಜ್ಞಾನಿಕ ಸವಾಲು ಮಾತ್ರವಲ್ಲ, ಅದು ನೈತಿಕ ಬದ್ಧತೆಯೂ ಹೌದು. ನಾವು ನಮ್ಮ ಸಂಘಟಿತ ಜ್ಞಾನ ಹಾಗೂ ಬದ್ಧತೆಯಿಂದ ಈ ಸವಾಲನ್ನು ಸಮರ್ಥವಾಗಿ ಎದುರಿಸಬೇಕಾಗಿದೆ. ಈ ಮೂಲಕ ನಾವು ಸಾರ್ವಜನಿಕ ಆರೋಗ್ಯ ರಕ್ಷಣೆ, ಆಹಾರ ಭದ್ರತೆ ಹಾಗೂ ಶಾಶ್ವತ ಅಭಿವೃದ್ಧಿಗೆ ನಮ್ಮ ಬದ್ದತೆಯನ್ನು ತೋರಿಸಬಹುದಾಗಿದೆ ಎಂದು ಅವರು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ಉಪ ಮಹಾನಿರ್ದೇಶಕ ಡಾ. ರಾಘವೇಂದ್ರ ಭಟ್ಟ, ನಿಟ್ಟೆ ವಿವಿ ಸಲಹೆಗಾರ ಡಾ.ಕರುಣಾ ಸಾಗರ್, ಸೆಂಟ್ರಲ್ ಇನ್ಸಿಟ್ಯೂಟ್ ಆಫ್ ಫಿಷರೀಸ್ ಎಜುಕೇಷನ್ ಸಂಸ್ಥೆಯ ವಿಶ್ರಾಂತ ಕುಲಪತಿ ಡಾ.ಸಿ.ಎನ್.ರವಿಶಂಕರ್, ನಿಟ್ಟೆ ವಿವಿ ನಿರ್ದೇಶಕಿ ಪ್ರೊ.ಇಂದ್ರಾಣಿ ಕರುಣಾ ಸಾಗರ್, ಅಕಾಡೆಮಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎ. ಎಂ.ರಮೇಶ್ ಮತ್ತು ಹಿರಿಯ ವೈಜ್ಞಾನಿಕಾಧಿಕಾರಿ ಡಾ.ಆರ್.ಆನಂದ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X