Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಕ್ವಾಂಟಮ್ ಇಂಡಿಯಾ ಬೆಂಗಳೂರು ಸಮಾವೇಶ |...

ಕ್ವಾಂಟಮ್ ಇಂಡಿಯಾ ಬೆಂಗಳೂರು ಸಮಾವೇಶ | ವಾರ್ಷಿಕ ಕಾರ್ಯಕ್ರಮವಾಗಿ ಆಯೋಜಿಸಲು ಚಿಂತನೆ : ಸಚಿವ ಭೋಸರಾಜು

ವಾರ್ತಾಭಾರತಿವಾರ್ತಾಭಾರತಿ1 Aug 2025 7:44 PM IST
share
ಕ್ವಾಂಟಮ್ ಇಂಡಿಯಾ ಬೆಂಗಳೂರು ಸಮಾವೇಶ | ವಾರ್ಷಿಕ ಕಾರ್ಯಕ್ರಮವಾಗಿ ಆಯೋಜಿಸಲು ಚಿಂತನೆ : ಸಚಿವ ಭೋಸರಾಜು

ಬೆಂಗಳೂರು : ವಿಶ್ವ ಕ್ವಾಂಟಮ್ ಭೂಪಟದಲ್ಲಿ ವಿಶಿಷ್ಟ ಮೈಲುಗಲ್ಲು ನೆಡುವಲ್ಲಿ ‘ಕ್ವಾಂಟಮ್ ಇಂಡಿಯಾ ಬೆಂಗಳೂರು ಸಮಾವೇಶ-2025’ ಯಶಸ್ವಿಯಾಗಿದೆ. ಪ್ರಥಮ ಆವೃತ್ತಿಯ ಯಶಸ್ಸು ಹಾಗೂ ಪರಿಣಾಮಗಳನ್ನು ಕಂಡು, ಮುಂದಿನ ವರ್ಷಗಳಲ್ಲಿ ಈ ಸಮಾವೇಶವನ್ನು ವಾರ್ಷಿಕ ಕಾರ್ಯಕ್ರಮವಾಗಿ ಆಯೋಜಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಭೋಸರಾಜು ತಿಳಿಸಿದರು.

ಶುಕ್ರವಾರ ನಗರದ ಖಾಸಗಿ ಹೊಟೇಲ್‍ನಲ್ಲಿ ಜರುಗಿದ ‘ಕ್ವಾಂಟಮ್ ಇಂಡಿಯಾ ಬೆಂಗಳೂರು ಸಮಾವೇಶ-2025’ರ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಎರಡು ದಿನಗಳ ಈ ಸಮಾವೇಶಕ್ಕೆ ಅಭೂತಪೂರ್ವ ಪ್ರತಿಕ್ರಿಯೆ ದೊರೆತಿದೆ. 1,951 ಕ್ಕೂ ಹೆಚ್ಚು ಪ್ರತಿನಿಧಿಗಳೂ ದೇಶ ಹಾಗೂ ವಿದೇಶದ ವಿವಿಧ ಭಾಗಗಳಿಂದ ಆಗಮಿಸಿದ್ದಾರೆ ಎಂದು ಹೇಳಿದರು.

ನೊಬೆಲ್ ಪ್ರಶಸ್ತಿ ಪುರಸ್ಕೃತರು ಕ್ವಾಂಟಮ್ ಕ್ಷೇತ್ರದಲ್ಲಿರುವ ಅವಕಾಶಗಳು, ಅವುಗಳನ್ನು ಉಪಯೋಗಿಸಿಕೊಳ್ಳುವ ನಿಟ್ಟಿನಲ್ಲಿ ಸಲಹೆಗಳನ್ನು ನೀಡಿದ್ದಾರೆ. ರಾಷ್ಟ್ರೀಯ ಕ್ವಾಂಟಮ್ ಮಿಷನ್‍ನ ಅಧ್ಯಕ್ಷರು ಸಮಾವೇಶದಲ್ಲಿ ಭಾಗಿಯಾಗುವ ಮೂಲಕ, ಕರ್ನಾಟಕ ರಾಜ್ಯ ಈ ಕ್ಷೇತ್ರದಲ್ಲಿ ಮುಂಚೂಣಿ ಸ್ಥಾನಪಡೆದುಕೊಳ್ಳುವ ಎಲ್ಲ ರೀತಿಯ ಅರ್ಹತೆಗಳನ್ನು ಹೊಂದಿರುವುದನ್ನು ಸಾರಿ ಹೇಳಿದ್ದಾರೆ ಎಂದು ಭೋಸರಾಜು ತಿಳಿಸಿದರು.

ರಾಜ್ಯದಲ್ಲಿ ಕ್ವಾಂಟಮ್ ಕ್ಷೇತ್ರವನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ಈಗಾಗಲೇ ಅಗತ್ಯ ಭೂಮಿ, ಕೌಶಲ್ಯಾಭಿವೃದ್ದಿಗೆ ಅಗತ್ಯವಾಗಿರುವ ಪಠ್ಯಕ್ರಮಗಳ ಅಳವಡಿಕೆ ಹಾಗೂ ಎಲ್ಲ ರೀತಿಯ ಸಹಕಾರ ನೀಡಲು ಸಿದ್ದವಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ ಎಂದು ಅವರು ಹೇಳಿದರು.

ಅಲ್ಲದೇ, 2035 ವೇಳೆಗೆ ಕ್ವಾಂಟಮ್ ಆಧಾರಿತ ಆರ್ಥಿಕತೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ, ಬೇಕಾದ ಕೌಶಲ್ಯ, ಮೂಲಸೌಕರ್ಯ ಮತ್ತು ಸ್ಟಾರ್ಪ್‍ಗಳಿಗೆ 1 ಸಾವಿರ ಕೋಟಿ ರೂ. ನಿಧಿಯನ್ನು ಮೀಸಲಿರಿಸಿ ಕರ್ನಾಟಕ ಕ್ವಾಂಟಮ್ ಮಿಷಯ್ ಪ್ರಾರಂಭಿಸಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ಅವರು ತಿಳಿಸಿದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಡೆದ ದುಂಡು ಮೇಜಿನ ಸಭೆಯಲ್ಲಿ, ಆಸ್ಟ್ರೇಲಿಯ, ಆಸ್ಟ್ರಿಯಾ, ಬಾಂಗ್ಲಾದೇಶ, ಕೆನಡಾ, ಡೆನ್ಮಾರ್ಕ್, ಫಿನ್‍ಲ್ಯಾಂಡ್, ಫ್ರಾನ್ಸ್, ಜೆರ್ಮನಿ, ಇಸ್ರೇಲ್, ಇಟಲಿ, ಜಪಾನ್, ನೇಪಾಳ, ನೆದರ್‍ಲ್ಯಾಂಡ್, ಓಮನ್, ಸೌದಿ ಅರೇಬಿಯಾ, ಸಿಂಗಾಪೂರ್, ಸ್ವಿರ್ಜಲೆಂಡ್, ಯುನೈಟೆಡ್ ಕಿಂಗ್ಡಮ್, ಅಮೇರಿಕಾ ಸೇರಿದಂತೆ ವಿವಿಧ ದೇಶಗಳ ಪ್ರತಿನಿಧಿಗಳು, ಕ್ವಾಂಟಮ್ ಕ್ಷೇತ್ರದಲ್ಲಿ ತೊಡಗಿಕೊಂಡಿರುವ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿ ತಮ್ಮ ಸಲಹೆಗಳನ್ನು ನೀಡಿದ್ದಾರೆ ಎಂದು ಭೊಸರಾಜು ಹೇಳಿದರು.

ಅಲ್ಲದೇ, ರಾಜ್ಯದಲ್ಲಿ ಕ್ವಾಂಟಮ್ ಕ್ಷೇತ್ರದ ಅಭಿವೃದ್ದಿಗೆ ಅಗತ್ಯವಿರುವ ಕ್ರಮಗಳ ಅಳವಡಿಕೆಯ ಬಗ್ಗೆ ವಿಸ್ತೃತವಾಗಿ ಚರ್ಚಿಸಲಾಗಿದೆ. ಹಾಗೆಯೇ, ಹಲವಾರು ದೇಶಗಳ ಪ್ರತಿನಿಧಿಗಳು ನಮ್ಮ ರಾಜ್ಯದ ಜೊತೆ ಕೈಜೋಡಿಸಲು ಹಾಗೂ ಉದ್ದಿಮೆಗಳನ್ನು ಸ್ಥಾಪಿಸಲು, ಹಲವಾರು ಸಂಸ್ಥೆಗಳು ರಾಜ್ಯದಲ್ಲಿ ಹೂಡಿಕೆಗೂ ಒಲವು ತೋರಿಸಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಜಾಗತಿಕ ಕ್ವಾಂಟಮ್ ಪವರ್‍ಹೌಸ್ ಆಗಿ ಕರ್ನಾಟಕವನ್ನು ಕೊಂಡೊಯ್ಯಲು ಹಿರಿಯ ಪ್ರಾಥಮಿಕ ಶಾಲಾ ಮಟ್ಟದಲ್ಲಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸ್ಟ್ರೀಮ್ ಲ್ಯಾಬ್ಸ್ ಯೋಜನೆಯ ಮೂಲಕ ಕ್ವಾಂಟಮ್ ಪಠ್ಯಕ್ರಮ ಪರಿಚಯಿಸಲಾಗುವುದು. ವಿದ್ಯಾರ್ಥಿಗಳಿಗೆ ಮೀಸಲಾದ ಡಿಎಸ್‍ಟಿ, ಪಿಎಚ್‍ಡಿ ಫೆಲೋಶಿಪ್‍ಗಳನ್ನು ವಿಸ್ತರಿಸಲಾಗುವುದು. ಈ ಫೆಲೋಶಿಪ್ ಗಳು ಕ್ವಾಂಟಮ್ ಕಂಪ್ಯೂಟಿಂಗ್, ಕ್ವಾಂಟಮ್ ಸಂವಹನ ಮತ್ತು ಕ್ವಾಂಟಮ್ ಸೆನ್ಸಿಂಗ್, ಕ್ವಾಂಟಮ್ ಸಾಧನಗಳಂತಹ ಪ್ರಮುಖ ಕ್ಷೇತ್ರಗಳಲ್ಲಿ ಸಾಮರ್ಥ್ಯ ವೃದ್ಧಿಗೆ ಸಹಕಾರಿಯಾಗಲಿದೆ ಎಂದು ಅವರು ಹೇಳಿದರು.

ದೇಶದ ವಿವಿಧ ರಾಜ್ಯಗಳಿಗೆ ತೆರಳಿ ನಮ್ಮ ರಾಜ್ಯದಲ್ಲಿರುವ ಅವಕಾಶಗಳ ಬಗ್ಗೆ ಅಲ್ಲಿನ ಉದ್ಯಮಿಗಳಿಗೆ ಮಾಹಿತಿ ನೀಡುವ ಕಾರ್ಯವನ್ನು ಮಾಡಲಿದ್ದೇವೆ. ಈ ಸಮಾವೇಶವು ಸ್ಟಾರ್ಟ್‍ಅಪ್ಸ್, ಕಾರ್ಪೊ ರೇಟ್ಸ್, ಕೈಗಾರಿಕೆಗಳು ಮತ್ತು ಅಕಾಡೆಮಿಕ್ ಕ್ಷೇತ್ರಗಳಿಗೆ ಜಾಗತಿಕ ಕ್ವಾಂಟಮ್ ತಂತ್ರಜ್ಞಾನಗಳ ಮುಂಚೂಣಿ ನಾಯಕರೊಂದಿಗೆ ನೇರವಾಗಿ ಸಂವಾದ ನಡೆಸಿ, ತಂತ್ರಜ್ಞಾನ ವಿನಿಮಯ, ತಂತ್ರಾತ್ಮಕ ಸಹಕಾರ ಮತ್ತು ಭವಿಷ್ಯದ ದೃಷ್ಟಿಕೋನಗಳನ್ನು ಹಂಚಿಕೊಳ್ಳಲು ಪ್ರಮುಖ ವೇದಿಕೆಯಾಗಿ ಕಾರ್ಯನಿರ್ವಹಿಸಿದೆ ಎಂದು ಅವರು ತಿಳಿಸಿದರು.

ಐಐಐಟಿ ಧಾರವಾಡ ಹಾಗೂ ರಾಯಚೂರು ಸಂಸ್ಥೆಗಳ ಜೊತೆ ಒಪ್ಪಂದ: ಸಮಾವೇಶದಲ್ಲಿ ಐಐಐಟಿ ಧಾರವಾಡ ಹಾಗೂ ರಾಯಚೂರು ಸಂಸ್ಥೆಗಳು ಕ್ಯೂಪೈಎಐ ಜೊತೆ ಕಿ-ವಿದ್ಯಾ 8 ಕ್ಯೂಬಿಟ್ ಕ್ವಾಂಟಮ್ ಕಂಪ್ಯೂಟರ್ ಸ್ಥಾಪನೆ ಒಪ್ಪಂದಕ್ಕೆ ಸಹಿ ಮಾಡಿದವು. ಈ ಯೋಜನೆಯು ಟ್ರೇನ್-ದಿ-ಟ್ರೈನರ್ಸ್ ಕಾರ್ಯಕ್ರಮಗಳನ್ನು ಆರಂಭಿಸಿ, ಕ್ವಾಂಟಮ್ ಸಂಶೋಧಕರನ್ನು ಶಕ್ತಿಪಡಿಸಿ, ಕ್ವಾಂಟಮ್ ತಂತ್ರಜ್ಞಾನಗಳ ಸಾಮರ್ಥ್ಯ ವೃದ್ಧಿಗೆ ನೆರವಾಗುವ ಉದ್ದೇಶ ಹೊಂದಿದೆ ಎಂದು ಭೋಸರಾಜು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X