Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಸವಳು-ಜವಳು ಭೂಮಿಗೆ ಶೀಘ್ರದಲ್ಲಿ ಅನುದಾನ...

ಸವಳು-ಜವಳು ಭೂಮಿಗೆ ಶೀಘ್ರದಲ್ಲಿ ಅನುದಾನ ಬಿಡುಗಡೆ: ಸಚಿವ ಚೆಲುವರಾಯಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ28 Jan 2026 9:51 PM IST
share
ಸವಳು-ಜವಳು ಭೂಮಿಗೆ ಶೀಘ್ರದಲ್ಲಿ ಅನುದಾನ ಬಿಡುಗಡೆ: ಸಚಿವ ಚೆಲುವರಾಯಸ್ವಾಮಿ

ಬೆಂಗಳೂರು, ಜ.28: ಸವಳು-ಜವಳು ಬಾಧಿತ ಭೂಪ್ರದೇಶ ಅಭಿವೃದ್ಧಿಗೆ ಶೀಘ್ರದಲ್ಲಿಯೇ ಅನುದಾನ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ.

ಬುಧವಾರ ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಭರಮಗೌಡ ಕಾಗೆ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿತ ಕೇಂದ್ರದಲ್ಲಿರುವ ದತ್ತಾಂಶದನ್ವಯ ಸುಮಾರು 77646.6 ಹೆಕ್ಟೇರ್ ಮಳೆಯಾಶ್ರಿತ ಪ್ರದೇಶವು ಸವಳು-ಜವಳು ಬಾದಿತವಾಗಿದೆ. ಇದರಲ್ಲಿ ಉತ್ತರ ಕರ್ನಾಟಕದ ಒಟ್ಟು 13 ಜಿಲ್ಲೆಗಳಲ್ಲಿ ಸವಳು-ಜವಳು ಬಾಧಿತ ಪ್ರದೇಶ 56621.34 ಹೆಕ್ಟೇರ್‌ಗಳಿದೆ ಎಂದರು.

ಜಲಾನಯನ ಅಭಿವೃದ್ಧಿ ಇಲಾಖೆ ವತಿಯಿಂದ ಮಳೆಯಾಶ್ರಿತ ಪ್ರದೇಶದಲ್ಲಿ(ಅಚ್ಚುಕಟ್ಟು ಪ್ರದೇಶವನ್ನು ಹೊರತುಪಡಿಸಿ) ಕೇಂದ್ರ ಪುರಸ್ಕೃತ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ-ಸಮಸ್ಯಾತ್ಮಕ ಮಣ್ಣುಗಳ ಸುಧಾರಣೆ ಕಾರ್ಯಕ್ರಮದಡಿ 2016-17ನೆ ಸಾಲಿನಿಂದ 2025-26ನೆ ಸಾಲಿನವರೆಗೆ ಒಟ್ಟು 31.43 ಕೋಟಿ ರೂ.,ಗಳ ವೆಚ್ಚದಲ್ಲಿ ಸವಳು-ಜವಳು ಬಾಧಿತ ಪ್ರದೇಶಗಳಲ್ಲಿ ಬಸಿ ಕಾಲುವೆ ನಿರ್ಮಾಣ ಮೂಲಕ ಮಣ್ಣಿನ ಸುಧಾರಣೆಗೆ ಒಟ್ಟು 4208.19 ಹೆಕ್ಟೇರ್ ಪ್ರದೇಶದಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

2024-25ನೇ ಸಾಲಿನ ರಾಜ್ಯ ಆಯವ್ಯಯದಲ್ಲಿ ಘೋಷಿಸಿದ್ದಂತೆ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜಲಾನಯನ ಅಭಿವೃದ್ಧಿ ಇಲಾಖೆ ವತಿಯಿಂದ ಒಟ್ಟು 53.98 ಹೆಕ್ಟೇರ್ ಸವಳು-ಜವಳು ಪ್ರದೇಶವನ್ನು 20.03 ಲಕ್ಷ ರೂ., ವೆಚ್ಚದೊಂದಿಗೆ ಉಪಚರಿಸಿದ್ದು, 5,992 ಮಾನವ ದಿನಗಳನ್ನು ಸೃಜಿಸಲಾಗಿರುತ್ತದೆ ಎಂದು ಉಲ್ಲೇಖಿಸಿದರು.

2025-26ನೆ ಸಾಲಿನಲ್ಲಿ ಕೇಂದ್ರ ಪುರಸ್ಕೃತ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ-ಸಮಸ್ಯಾತ್ಮಕ ಮಣ್ಣುಗಳ ಸುಧಾರಣೆ ಕಾರ್ಯಕ್ರಮಕ್ಕೆ ಈಗಾಗಲೇ ಕೇಂದ್ರ ಸಚಿವರನ್ನು ಸಹ ಭೇಟಿ ಮಾಡಿ ಅನುದಾನ ಕೋರಲಾಗಿದೆ. 4.18 ಕೋಟಿ ರೂ. ಹೆಚ್ಚುವರಿ ಅನುದಾನಕ್ಕೆ ಅನುಮೋದನೆ ದೊರೆತಿದ್ದು, ಅನುದಾನವನ್ನು ನಿರೀಕ್ಷಿಸಲಾಗಿದೆ ಎಂದು ಮಾಹಿತಿ ನೀಡಿದರು.


Tags

MinisterCheluvarayaswamy
share
ವಾರ್ತಾಭಾರತಿ
ವಾರ್ತಾಭಾರತಿ
Next Story
X