Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೂಡಿಕೆಗೆ...

ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೂಡಿಕೆಗೆ ಕರ್ನಾಟಕ ಮುಕ್ತ : ಸಚಿವ ಕೆ.ಜೆ.ಜಾರ್ಜ್

ವಾರ್ತಾಭಾರತಿವಾರ್ತಾಭಾರತಿ23 July 2026 7:06 PM IST
share
ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೂಡಿಕೆಗೆ ಕರ್ನಾಟಕ ಮುಕ್ತ : ಸಚಿವ ಕೆ.ಜೆ.ಜಾರ್ಜ್

ಬೆಂಗಳೂರು : ಕರ್ನಾಟಕವನ್ನು ದೇಶದ ಹೂಡಿಕೆ ಸ್ನೇಹಿ ಪ್ರವಾಸೋದ್ಯಮ ರಾಜ್ಯವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಸರಕಾರ ಪ್ರವಾಸೋದ್ಯಮ ನೀತಿಗಳನ್ನು ಮತ್ತಷ್ಟು ಸರಳೀಕರಿಸುತ್ತಿದ್ದು, ಖಾಸಗಿ ಹೂಡಿಕೆದಾರರಿಗೆ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಇಂಧನ ಹಾಗೂ ಪ್ರವಾಸೋದ್ಯಮ ಸಚಿವ ಕೆ.ಜೆ.ಜಾರ್ಜ್ ಹೇಳಿದರು.

ಗುರುವಾರ ನಗರದಲ್ಲಿ ಆರಂಭವಾದ ಮೂರು ದಿನಗಳ 26ನೇ ಇಂಡಿಯನ್ ಇಂಟರ್‍ನ್ಯಾಷನಲ್ ಟ್ರಾವೆಲ್ ಮಾರ್ಟ್(ಐಐಟಿಎಂ-2026) ಉದ್ಘಾಟಿಸಿ ಮಾತನಾಡಿದ ಅವರು, ಈ ಬಾರಿ ಐಐಟಿಎಂನಲ್ಲಿ 850ಕ್ಕೂ ಹೆಚ್ಚು ಪ್ರವಾಸೋದ್ಯಮ ವಲಯದ ಪ್ರತಿನಿಧಿಗಳು, 16 ರಾಜ್ಯಗಳಿಂದ ಆಗಮಿಸಿದ ಪ್ರವಾಸೋದ್ಯಮ ಸಂಸ್ಥೆಗಳು ಹಾಗೂ 26ಕ್ಕೂ ಹೆಚ್ಚು ವಿದೇಶಿ ಪ್ರವಾಸೋದ್ಯಮ ಸಂಸ್ಥೆಗಳು ಭಾಗವಹಿಸಿವೆ ಎಂದು ತಿಳಿಸಿದರು.

ದೇಶೀಯ ಹಾಗೂ ಜಾಗತಿಕ ಪ್ರವಾಸೋದ್ಯಮ ಕ್ಷೇತ್ರದ ನಡುವೆ ಬೃಹತ್ ಬಿ2ಬಿ ಸಭೆಗಳು ನಡೆಯುತ್ತಿವೆ. ಇಂತಹ ವೇದಿಕೆಗಳು ಕರ್ನಾಟಕದ ಪ್ರವಾಸೋದ್ಯಮ ಸಾಮಥ್ರ್ಯವನ್ನು ಜಗತ್ತಿನ ಮುಂದೆ ಪರಿಚಯಿಸುವುದರ ಜೊತೆಗೆ ಹೊಸ ಹೂಡಿಕೆ ಹಾಗೂ ಉದ್ಯಮ ಸಹಭಾಗಿತ್ವಕ್ಕೆ ದಾರಿ ಮಾಡಿಕೊಡಲಿವೆ ಎಂದು ಅವರು ಅಭಿಪ್ರಾಯಪಟ್ಟರು.

ಕರ್ನಾಟಕದಲ್ಲಿ ಪ್ರವಾಸೋದ್ಯಮ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಖಾಸಗಿ ಹೂಡಿಕೆ ಅಗತ್ಯವಿದೆ. ಅದಕ್ಕಾಗಿ ಸರಕಾರ ಪ್ರವಾಸೋದ್ಯಮ ನೀತಿಗಳನ್ನು ಮತ್ತಷ್ಟು ಸರಳೀಕರಿಸುತ್ತಿದೆ. ಸಬ್ಸಿಡಿಗಳು, ಏಕಗವಾಕ್ಷಿ ಮಂಜೂರಾತಿ ವ್ಯವಸ್ಥೆ ಹಾಗೂ ವಿವಿಧ ಪ್ರೋತ್ಸಾಹಕಗಳ ಮೂಲಕ ಹೂಡಿಕೆದಾರರಿಗೆ ಅನುಕೂಲಕರ ವಾತಾವರಣ ನಿರ್ಮಿಸಲಾಗುತ್ತಿದೆ ಎಂದು ಜಾರ್ಜ್ ಹೇಳಿದರು.

ನೀವು ರೆಸಾರ್ಟ್ ನಿರ್ಮಿಸಲು ಬಯಸಿದರೂ, ಸಾಹಸ ಕ್ರೀಡಾ ಸೌಲಭ್ಯ ಸ್ಥಾಪಿಸಲು ಮುಂದಾದರೂ ಅಥವಾ ಕ್ರೂಸ್ ಸೇವೆ ಆರಂಭಿಸಲು ಉದ್ದೇಶಿಸಿದ್ದರೂ ಸರಕಾರ ನಿಮ್ಮೊಂದಿಗೆ ನಿಲ್ಲಲಿದೆ. ಅನಗತ್ಯ ಆಡಳಿತಾತ್ಮಕ ಅಡೆತಡೆಗಳಿಲ್ಲದೆ ಕರ್ನಾಟಕದಲ್ಲಿ ಹೂಡಿಕೆ ಮಾಡಿ ಉದ್ಯಮ ನಡೆಸುವ ಅವಕಾಶವನ್ನು ಕಲ್ಪಿಸುವುದು ನಮ್ಮ ಬದ್ಧತೆಯಾಗಿದೆ ಎಂದು ಅವರು ತಿಳಿಸಿದರು.

ಕರ್ನಾಟಕವು ಪರಂಪರೆ, ಪ್ರಕೃತಿ, ವನ್ಯಜೀವಿ, ಕರಾವಳಿ, ಆಧ್ಯಾತ್ಮಿಕ, ವೆಲ್‍ನೆಸ್ ಹಾಗೂ ಸಾಹಸ ಪ್ರವಾಸೋದ್ಯಮ ಸೇರಿದಂತೆ ವೈವಿಧ್ಯಮಯ ಪ್ರವಾಸೋದ್ಯಮ ಸಂಪನ್ಮೂಲಗಳನ್ನು ಹೊಂದಿರುವ ರಾಜ್ಯವಾಗಿದೆ. ಈ ಸಾಮಥ್ರ್ಯವನ್ನು ಜಾಗತಿಕ ಮಾರುಕಟ್ಟೆಯಲ್ಲಿ ಪರಿಣಾಮಕಾರಿಯಾಗಿ ಪರಿಚಯಿಸಲು ಸರಕಾರ ನಿರಂತರವಾಗಿ ರಾಷ್ಟ್ರೀಯ ಹಾಗೂ ಅಂತರ್‍ರಾಷ್ಟ್ರೀಯ ಮಟ್ಟದಲ್ಲಿ ರೋಡ್‍ಶೋಗಳು, ಟ್ರಾವೆಲ್ ಮಾರ್ಟ್‍ಗಳು ಹಾಗೂ ಹೂಡಿಕೆದಾರರ ಸಮಾವೇಶಗಳನ್ನು ಆಯೋಜಿಸುತ್ತಿದೆ ಎಂದು ಜಾರ್ಜ್ ಮಾಹಿತಿ ನೀಡಿದರು.

ಪ್ರವಾಸೋದ್ಯಮ ಕ್ಷೇತ್ರದಲ್ಲಿ ಮೂಲಸೌಕರ್ಯ ಅಭಿವೃದ್ಧಿ, ಸಂಪರ್ಕ ವ್ಯವಸ್ಥೆ ಸುಧಾರಣೆ, ಪ್ರವಾಸಿಗರಿಗೆ ಗುಣಮಟ್ಟದ ಸೇವೆ ಹಾಗೂ ಹೂಡಿಕೆ ಸ್ನೇಹಿ ಪರಿಸರ ನಿರ್ಮಾಣಕ್ಕೆ ಸರಕಾರ ಆದ್ಯತೆ ನೀಡುತ್ತಿದ್ದು, ‘ಬ್ರ್ಯಾಂಡ್ ಕರ್ನಾಟಕ' ಹಾಗೂ ‘ಒನ್ ಸ್ಟೇಟ್, ಮೆನಿ ವಲ್ಡ್ರ್ಸ್'(ಒಂದು ರಾಜ್ಯ ಹಲವು ಜಗತ್ತುಗಳು) ಪರಿಕಲ್ಪನೆಯನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ಅವರು ಹೇಳಿದರು.

ಸರಕಾರ ಮತ್ತು ಖಾಸಗಿ ವಲಯದ ಸಹಯೋಗವೆ ಕರ್ನಾಟಕದ ಪ್ರವಾಸೋದ್ಯಮ ಬೆಳವಣಿಗೆಯ ಪ್ರಮುಖ ಶಕ್ತಿಯಾಗಿದ್ದು, ಹೂಡಿಕೆದಾರರು, ಪ್ರವಾಸೋದ್ಯಮ ಉದ್ಯಮಿಗಳು ಹಾಗೂ ಪ್ರವಾಸ ಸಂಸ್ಥೆಗಳು ರಾಜ್ಯದ ಬೆಳವಣಿಗೆಯ ಪಾಲುದಾರರಾಗುವಂತೆ ಜಾರ್ಜ್ ಕರೆ ನೀಡಿದರು.

ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ ಡಾ.ರಾಮ್ ಪ್ರಸಾತ್ ಮನೋಹರ್ ಮಾತನಾಡಿ, ಪ್ರವಾಸೋದ್ಯಮವು ಕೇವಲ ಪ್ರವಾಸಿಗರ ಸಂಖ್ಯೆಯನ್ನು ಹೆಚ್ಚಿಸುವ ಕ್ಷೇತ್ರವಲ್ಲ, ಅದು ಉದ್ಯೋಗ, ಹೂಡಿಕೆ ಮತ್ತು ಸ್ಥಳೀಯ ಆರ್ಥಿಕ ಅಭಿವೃದ್ಧಿಗೆ ಪ್ರಮುಖ ಚಾಲಕವಾಗಿದೆ. ಆದುದರಿಂದ, ಹೂಡಿಕೆದಾರರು, ಪ್ರವಾಸೋದ್ಯಮ ಉದ್ಯಮ ಮತ್ತು ಸರಕಾರದ ನಡುವೆ ಬಲವಾದ ಸಹಭಾಗಿತ್ವ ನಿರ್ಮಿಸುವ ಮೂಲಕ ಕರ್ನಾಟಕವನ್ನು ದೇಶದ ಅತ್ಯಂತ ಆಕರ್ಷಕ ಪ್ರವಾಸೋದ್ಯಮ ತಾಣವನ್ನಾಗಿ ರೂಪಿಸುವುದು ನಮ್ಮ ಗುರಿಯಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕೆಎಸ್‍ಟಿಡಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಪ್ರಸಾದ್ ಪಿ.ಆರ್., ಜಂಗಲ್ ಲಾಡ್ಜ್ಸ್ ಅಂಡ್ ರೆಸಾಟ್ರ್ಸ್ ವ್ಯವಸ್ಥಾಪಕ ನಿರ್ದೇಶಕ ಶಿವರಾಂ ಬಾಬು, ಕರ್ನಾಟಕ ಪ್ರವಾಸೋದ್ಯಮ ಸೊಸೈಟಿಯ ಅಧ್ಯಕ್ಷ ಕೆ.ಶ್ಯಾಮರಾಜು ಸೇರಿದಂತೆ ಪ್ರವಾಸೋದ್ಯಮ ವಲಯದ ಗಣ್ಯರು ಉಪಸ್ಥಿತರಿದ್ದರು.

Tags

Minister K.J. George
share
ವಾರ್ತಾಭಾರತಿ
ವಾರ್ತಾಭಾರತಿ
Next Story
X