50 ಅಂಗನವಾಡಿ ಕಾರ್ಯಕರ್ತರಿಗೆ ಟ್ಯಾಬ್‍ಗಳನ್ನು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು, ಅ.8: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬುಧವಾರ ವಿಧಾನಸೌಧದಲ್ಲಿರುವ ತಮ್ಮ ಕಚೇರಿಯಲ್ಲಿ ಬೆಂಗಳೂರು ನಗರದ 50 ಅಂಗನವಾಡಿ ಕಾರ್ಯಕರ್ತರಿಗೆ ಸುತಾರ ಲರ್ನಿಂಗ್ ಫೌಂಡೇಶನ್ ವತಿಯಿಂದ ಟ್ಯಾಬ್ ಗಳನ್ನು ವಿತರಿಸಿದರು.
ಈ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಶಾಮ್ಲಾ ಇಕ್ಬಾಲ್, ಇಲಾಖೆಯ ನಿರ್ದೇಶಕ ಮಹೇಶ್ ಬಾಬು, ಬೆಂಗಳೂರು ನಗರದ ಉಪ ನಿರ್ದೇಶಕಿ ಸುಮಂಗಲಾ ಮಳಾಪುರ್, ಸುತಾರ ಲರ್ನಿಂಗ್ ಫೌಂಡೇಶನ್‍ನ ಶಂಕರ್ ಸಿಂಗ್, ನವೀನ್ ಎಂ.ಎಲ್, ಕಾರ್ತಿಕ್ ಸ್ವಾಮಿ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.
Next Story





