Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ‘ರಾಜ್ಯದಲ್ಲಿ ಉರ್ದು ಮಾಧ್ಯಮ ಶಿಕ್ಷಣದ...

‘ರಾಜ್ಯದಲ್ಲಿ ಉರ್ದು ಮಾಧ್ಯಮ ಶಿಕ್ಷಣದ ಸ್ಥಿತಿಗತಿ: ಅಧ್ಯಯನ ವರದಿ-2025’ ಸ್ವೀಕರಿಸಿದ ಸಚಿವ ಮಧು ಬಂಗಾರಪ್ಪ

ವಾರ್ತಾಭಾರತಿವಾರ್ತಾಭಾರತಿ10 Sept 2026 9:14 PM IST
share
‘ರಾಜ್ಯದಲ್ಲಿ ಉರ್ದು ಮಾಧ್ಯಮ ಶಿಕ್ಷಣದ ಸ್ಥಿತಿಗತಿ: ಅಧ್ಯಯನ ವರದಿ-2025’ ಸ್ವೀಕರಿಸಿದ ಸಚಿವ ಮಧು ಬಂಗಾರಪ್ಪ

ಬೆಂಗಳೂರು : ರಾಜ್ಯದಲ್ಲಿ ಉರ್ದು ಮಾಧ್ಯಮದಲ್ಲಿ ಶಿಕ್ಷಣದ ಸ್ಥಿತಿಗತಿ, ಸಮಸ್ಯೆಗಳು ಹಾಗೂ ಅಗತ್ಯ ಸುಧಾರಣೆಗಳಿಗೆ ಸಂಬಂಧಿಸಿದಂತೆ ಸಿದ್ಧಪಡಿಸಿರುವ ‘ಅಧ್ಯಯನ ವರದಿ-2025’ ಅನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಸ್ವೀಕರಿಸಿದರು.

ರಾಜ್ಯದ ಅಂಜುಮನ್ ತರಖ್ಖಿ ಉರ್ದು(ಹಿಂದ್) ಸಂಸ್ಥೆ ವತಿಯಿಂದ ಸಿದ್ಧಪಡಿಸಲಾಗಿರುವ ಅಧ್ಯಯನ ವರದಿಯನ್ನು ವಿಧಾನಪರಿಷತ್ ಸಭಾಪತಿ ಸಲೀಂ ಅಹ್ಮದ್ ಅವರ ಕಚೇರಿಯಲ್ಲಿ ಸಚಿವರಿಗೆ ಹಸ್ತಾಂತರಿಸಲಾಯಿತು.

ರಾಜ್ಯದಲ್ಲಿ ಉರ್ದು ಮಾಧ್ಯಮದ ಶಿಕ್ಷಣದ ಪ್ರಸ್ತುತ ಸ್ಥಿತಿಗತಿ, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಎದುರಿಸುತ್ತಿರುವ ಸಮಸ್ಯೆಗಳು, ಶೈಕ್ಷಣಿಕ ಗುಣಮಟ್ಟ ಸುಧಾರಣೆ ಸೇರಿದಂತೆ ವಿವಿಧ ಅಂಶಗಳನ್ನು ಒಳಗೊಂಡ ಈ ವರದಿಯನ್ನು ನಿವೃತ್ತ ಐಎಎಸ್ ಅಧಿಕಾರಿಗಳ ತಂಡವು ಅಂಜುಮನ್ ತರಖ್ಖಿ ಉರ್ದು(ಹಿಂದ್) ಸಂಸ್ಥೆಯ ಉಸ್ತುವಾರಿಯಲ್ಲಿ ಎರಡು ವರ್ಷಗಳ ಕಾಲ ರಾಜ್ಯಾದ್ಯಂತ ಪ್ರವಾಸ ಮಾಡಿ ಅಧ್ಯಯನ ನಡೆಸಿ ಸಿದ್ಧಪಡಿಸಿದೆ.

ವರದಿಯನ್ನು ಸ್ವೀಕರಿಸಿದ ಬಳಿಕ ಮಾತನಾಡಿದ ಮಧು ಬಂಗಾರಪ್ಪ, ರಾಜ್ಯ ಸರಕಾರವು ಶಿಕ್ಷಣಕ್ಕೆ ಆದ್ಯತೆ ನೀಡಿದೆ. ಸರಕಾರಿ ಉರ್ದು ಶಾಲೆಗಳ ಅಭಿವೃದ್ಧಿ, ಮೂಲಸೌಕರ್ಯ ಸುಧಾರಣೆ, ಶಿಕ್ಷಕರ ನೇಮಕಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಹಾಗೂ ಹಣಕಾಸು ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಸಭಾಪತಿ ಸಲೀಂ ಅಹ್ಮದ್ ಮಾತನಾಡಿ, ಉರ್ದು ಮಾಧ್ಯಮ ಶಾಲೆಗಳಲ್ಲಿ ತಾಂತ್ರಿಕ ಆಧಾರಿತ ಸ್ಮಾರ್ಟ್ ಕ್ಲಾಸ್ ಶಿಕ್ಷಣ ಒದಗಿಸುವುದು ಸೇರಿದಂತೆ ವಿವಿಧ ಶಿಫಾರಸ್ಸುಗಳನ್ನು ಪರಾಮರ್ಶಿಸಿ ಅನುಷ್ಠಾನಕ್ಕೆ ತರಲು ಸರಕಾರಕ್ಕೆ ಅಗತ್ಯ ನಿರ್ದೇಶನ ನೀಡಲಾಗುವುದು ಎಂದು ತಿಳಿಸಿದರು.

ಉರ್ದು ಮಾಧ್ಯಮ ಸ್ಥಿತಿಗತಿ ಕುರಿತು 2025ರಲ್ಲಿ ಅಝೀಝುಲ್ಲಾ ಬೇಗ್ ಅಧ್ಯಕ್ಷತೆಯಲ್ಲಿ ಮುಹಮ್ಮದ್ ಸಲಾಹುದ್ದೀನ್, ಎಂ.ಎ.ಖಾಲಿದ್, ಮೀರ್ ಅನೀಸ್ ಅಹ್ಮದ್, ಅದೋನಿ ಸೈಯದ್ ಸಲೀಂ ಅವರನ್ನೊಳಗೊಂಡ ಐವರು ನಿವೃತ್ತ ಐಎಎಸ್ ಅಧಿಕಾರಿಗಳ ಸಮಿತಿಯು ಎರಡು ವರ್ಷಗಳಿಂದ ನಿರಂತರವಾಗಿ ಅಧ್ಯಯನ ನಡೆಸಿ ಈ ವರದಿ ಸಿದ್ಧಪಡಿಸಿದೆ ಎಂದು ಸಲೀಂ ಅಹ್ಮದ್ ಹೇಳಿದರು.

ಉರ್ದು ಮಾಧ್ಯಮಕ್ಕೆ ಸಂಬಂಧಿಸಿದಂತೆ ವಿಶೇಷವಾಗಿ ತಾಂತ್ರಿಕ ಶಿಕ್ಷಣ, ಸಂಪನ್ಮೂಲ ವ್ಯಕ್ತಿಗಳ ಕೊರತೆ ಮೊದಲಾದ ವಿಷಯಗಳ ಮೇಲೆ ಬೆಳಕು ಚೆಲ್ಲಿ ಮಹತ್ವದ ಶಿಫಾರಸ್ಸುಗಳನ್ನು ಮಾಡಿದ್ದು, ಈ ಎಲ್ಲ ಶಿಫಾರಸ್ಸುಗಳನ್ನು ಪರಾಮರ್ಶಿಸಿ ಸರಕಾರದ ಮಟ್ಟದಲ್ಲಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ವಹಿಸಲಾಗುವುದು ಎಂದು ಅವರು ನುಡಿದರು.

ಸಮಿತಿಯ ಸದಸ್ಯರು ವಿಶೇಷವಾಗಿ ಉರ್ದು ಶಾಲೆಗಳಲ್ಲಿ ತಾಂತ್ರಿಕ ಶಿಕ್ಷಣ ಹಾಗೂ ಸ್ಮಾರ್ಟ್ ಕ್ಲಾಸ್‍ಗಳ ಕೊರತೆ ಅತಿಯಾಗಿ ಎದ್ದು ಕಾಣುತ್ತಿದೆ, ಉಳಿದ ಭಾಷಾ ಮಾಧ್ಯಮಗಳಿಗೆ ಹೋಲಿಕೆ ಮಾಡಿದಾಗ ಉರ್ದು ಮಾಧ್ಯಮದಲ್ಲಿ ಭಾಷಾ ಸಂಪನ್ಮೂಲ ವ್ಯಕ್ತಿಗಳ ಕೊರತೆಯೂ ಅಧಿಕವಾಗಿದೆ, ಉರ್ದು ಮಾಧ್ಯಮದಲ್ಲಿ ಅಧ್ಯಯನ ಮಾಡುವ ವಿದ್ಯಾರ್ಥಿಗಳ ಪಾಲಕರು ಶೇ.75 ರಷ್ಟು ಎಸ್‍ಎಸ್‍ಎಲ್‍ಸಿಗಿಂತ ಕಡಿಮೆ ವಿದ್ಯಾರ್ಹತೆ ಹೊಂದಿವರಾಗಿದ್ದಾರೆ ಎಂದು ಗಮನ ಸೆಳೆದಿದ್ದಾರೆ ಎಂದು ಸಲೀಂ ಅಹ್ಮದ್ ತಿಳಿಸಿದರು.

ಈ ಸಂದರ್ಭದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಸಚಿವ ಯು.ಟಿ.ಖಾದರ್, ವಸತಿ ಸಚಿವ ಝಮೀರ್ ಅಹ್ಮದ್ ಖಾನ್, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಿಝ್ವಾನ್ ಅರ್ಶದ್, ಬಿಡಿಎ ಅಧ್ಯಕ್ಷ ಎನ್.ಎ.ಹಾರಿಸ್, ರಾಜ್ಯಸಭಾ ಸದಸ್ಯ ಮನ್ಸೂರ್ ಅಲಿ ಖಾನ್, ಶಾಸಕರಾದ ಯಾಸೀರ್ ಅಹ್ಮದ್ ಖಾನ್ ಪಠಾಣ್, ಕನೀಝ್ ಫಾತಿಮಾ, ವಿಧಾನಪರಿಷತ್ ಸದಸ್ಯೆ ಬಲ್ಕೀಸ್ ಬಾನು, ಅಂಜುಮನ್ ತರಖ್ಖಿ ಉರ್ದು(ಹಿಂದ್) ರಾಜ್ಯಾಧ್ಯಕ್ಷ ಮುಹಮ್ಮದ್ ಉಬೇದುಲ್ಲಾ ಶರೀಫ್, ಉಪಾಧ್ಯಕ್ಷ ಸೈಯದ್ ಅಶ್ರಫ್, ಪ್ರಧಾನ ಕಾರ್ಯದರ್ಶಿ ಮುಬೀನ್ ಮುನವ್ವರ್, ಅಧ್ಯಯನ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Tags

Minister Madhu Bangarappa
share
ವಾರ್ತಾಭಾರತಿ
ವಾರ್ತಾಭಾರತಿ
Next Story
X