Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಪರಿಶಿಷ್ಟರಿಗೆ ಮೀಸಲಿಟ್ಟ ಹಣ...

ಪರಿಶಿಷ್ಟರಿಗೆ ಮೀಸಲಿಟ್ಟ ಹಣ ಗ್ಯಾರೆಂಟಿಗಳಿಗೆ ಬಳಸಬೇಡಿ : ಸಚಿವ ಮಹದೇವಪ್ಪ ನಿವಾಸಕ್ಕೆ ದಲಿತ ಮುಖಂಡರ ಮುತ್ತಿಗೆ

ವಾರ್ತಾಭಾರತಿವಾರ್ತಾಭಾರತಿ24 July 2024 7:31 PM IST
share
ಪರಿಶಿಷ್ಟರಿಗೆ ಮೀಸಲಿಟ್ಟ ಹಣ ಗ್ಯಾರೆಂಟಿಗಳಿಗೆ ಬಳಸಬೇಡಿ : ಸಚಿವ ಮಹದೇವಪ್ಪ ನಿವಾಸಕ್ಕೆ ದಲಿತ ಮುಖಂಡರ ಮುತ್ತಿಗೆ

ಬೆಂಗಳೂರು : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕಾಗಿ ಎಸ್‌ಸಿಪಿ/ಟಿಎಸ್‌ಪಿ ಯೋಜನೆಯಡಿ ಮೀಸಲಿಟ್ಟ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಬಾರದು ಎಂದು ಆಗ್ರಹಿಸಿ, ಸಮಾಜ ಕಲ್ಯಾಣ ಇಲಾಖೆ ಸಚಿವ ಡಾಎಚ್.ಸಿ.ಮಹದೇವಪ್ಪ ನಿವಾಸಕ್ಕೆ ‘ದಸಂಸ ಒಕ್ಕೂಟ’ದ ಮುಖಂಡರು ಹಾಗೂ ಕಾರ್ಯಕರ್ತರು ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

ಬುಧವಾರ ಇಲ್ಲಿನ ಕ್ರಸೆಂಟ್ ರಸ್ತೆಯಲ್ಲಿನ ಡಾ.ಮಹದೇವಪ್ಪ ನಿವಾಸಕ್ಕೆ ಮುತ್ತಿಗೆ ಹಾಕಿದ ನೂರಾರು ಕಾರ್ಯಕರ್ತರು, ‘ಎಸ್‌ಸಿಪಿ/ಟಿಎಸ್‌ಪಿ ಅನುದಾನವನ್ನು ಗ್ಯಾರೆಂಟಿಗಳಿಗೆ ಬಳಸುವ ಮೂಲಕ ರಾಜ್ಯ ಸರಕಾರ ದಲಿತರಿಗೆ ದ್ರೋಹ ಬಗೆಯುತ್ತಿದೆ. ಗ್ಯಾರೆಂಟಿಗಳು ಸರಕಾರದ ಸಾಮಾನ್ಯ ಕಾರ್ಯಕ್ರಮಗಳು. ಪರಿಶಿಷ್ಟರ ಹಣವನ್ನು ಅನ್ಯ ಉದ್ದೇಶಕ್ಕೆ ಬಳಕೆ ಮಾಡುವುದು ಅಪರಾಧ’ ಎಂದು ಆಕ್ಷೇಪಿಸಿದರು.

ನೇತೃತ್ವ ವಹಿಸಿದ್ದ ದಲಿತ ಮುಖಂಡ ಹಾಗೂ ಪತ್ರಕರ್ತ ಇಂದೂಧರ ಹೊನ್ನಾಪುರ ಮಾತನಾಡಿ, ‘ಪರಿಶಿಷ್ಟ ಕಲ್ಯಾಣಕ್ಕಾಗಿ ಸಮಾಜ ಕಲ್ಯಾಣ ಅಡಿಯ ನಿಗಮಗಳಲ್ಲಿ ಮೀಸಲು ಸಂರಕ್ಷಣೆಗೆ ಕಾನೂನು ಬದ್ಧ ಕಾವಲು ಸಮಿತಿ ರಚನೆ ಮಾಡಬೇಕು. ಹೊರಗುತ್ತಿಗೆ ಮೀಸಲಾತಿ ನೇಮಕಕ್ಕೆ ವಿಧಿಸಿರುವ ಅವೈಜ್ಞಾನಿಕ ನಿಯಮಗಳಿಗೆ ರದ್ದುಗೊಳಿಸಬೇಕು’ ಎಂದು ಒತ್ತಾಯಿಸಿದರು.

ದಸಂಸ ಸಂಚಾಲಕ ಮಾವಳ್ಳಿ ಶಂಕರ್ ಮಾತನಾಡಿ, ‘ಸಂವಿಧಾನ ವಿರೋಧಿಗಳನ್ನು ದೂರ ಇಡುವ ಕಾರಣದಿಂದ ಅನಿವಾರ್ಯವಾಗಿ ಕಾಂಗ್ರೆಸ್ ಬೆಂಬಲಿಸಿದ ದಲಿತರೇ ಇಂದು ಪಶ್ಚಾತ್ತಾಪ ಪಡುವಂತಾಗಿದೆ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ಸರಕಾರದಿಂದ ದಲಿತ ಸಮುದಾಯಕ್ಕೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಬೇಕು. ಇಲ್ಲವಾದರೆ ಬೀದಿಗಿಳಿಯಬೇಕಾಗುತ್ತದೆ’ ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಸಚಿವ ಡಾ.ಮಹದೇವಪ್ಪ ಅವರಿಗೆ ದಸಂಸ ಒಕ್ಕೂಟದಿಂದ ಮನವಿ ಸಲ್ಲಿಸಲಾಯಿತು. ದಸಂಸ ಮುಖಂಡರಾದ ಎನ್.ವೆಂಕಟೇಶ್, ವಿ.ನಾಗರಾಜ್, ಮರಿಯಪ್ಪಹಳ್ಳಿ, ಹುಲ್ಕೆರೆ ಮಹದೇವ್, ರಮೇಶ್ ಡಾಕುಳಕಿ, ಗಂಗನಂಜಯ್ಯ, ಸಿ.ಜಿ.ಗಂಗಪ್ಪ, ಆನಂದ್, ಹಾರೋಹಳ್ಳಿ ರವಿ, ನಾಗರತ್ನ, ಜಯಂತಿ, ಜಯಮ್ಮ, ಕೃಷ್ಣಮೂರ್ತಿ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X