Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಥೇಲ್ಸ್ ಕಂಪನಿಯ ಇನ್-ಫ್ಲೈಟ್ ಲ್ಯಾಬ್‌ಗೆ...

ಥೇಲ್ಸ್ ಕಂಪನಿಯ ಇನ್-ಫ್ಲೈಟ್ ಲ್ಯಾಬ್‌ಗೆ ಸಚಿವ ಎಂ.ಬಿ.ಪಾಟೀಲ್‌ ಚಾಲನೆ

ವಾರ್ತಾಭಾರತಿವಾರ್ತಾಭಾರತಿ4 Jun 2025 7:42 PM IST
share
ಥೇಲ್ಸ್ ಕಂಪನಿಯ ಇನ್-ಫ್ಲೈಟ್ ಲ್ಯಾಬ್‌ಗೆ ಸಚಿವ ಎಂ.ಬಿ.ಪಾಟೀಲ್‌ ಚಾಲನೆ

ಬೆಂಗಳೂರು: ವೈಮಾಂತರಿಕ್ಷ ಕ್ಷೇತ್ರದಲ್ಲಿ ಮುಂಚೂಣಿ ಕಂಪನಿಯಾಗಿರುವ ಥೇಲ್ಸ್ ಇಲ್ಲಿ ನೂತನವಾಗಿ ನಿರ್ಮಿಸಿರುವ ಅತ್ಯಾಧುನಿಕ ಇನ್-ಫ್ಲೈಟ್ ಎಂಟರ್ಟೈಮೆಂಟ್‌ ಮತ್ತು ಸರ್ವೀಸಸ್ ಲ್ಯಾಬ್ ಅನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಬುಧವಾರ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿರುವ ಸಾರ್ವಜನಿಕ ಸ್ವಾಮ್ಯದ ಬಿಇಎಲ್ ಜತೆ ದೀರ್ಘಕಾಲದಿಂದಲೂ ಸಹಭಾಗಿತ್ವ ಹೊಂದಿರುವ ಥೇಲ್ಸ್ ಕಂಪನಿಯು ಈಗ ರಾಜ್ಯದಲ್ಲಿ ತನ್ನ ಎರಡನೆಯ ಕಚೇರಿ ಆರಂಭಿಸಿರುವುದು ಸ್ವಾಗತಾರ್ಹವಾಗಿದೆ. ಇದರಿಂದಾಗಿ ಕರ್ನಾಟಕದ ವೈಮಾಂತರಿಕ್ಷ ಮತ್ತು ರಕ್ಷಣಾ ಉದ್ಯಮ ವಲಯಗಳಿಗೆ ಮತ್ತಷ್ಟು ಬಲ ಬರಲಿದೆ ಎಂದಿದ್ದಾರೆ.

ಥೇಲ್ಸ್ ಕಂಪನಿಯ ಈ ಹೆಜ್ಜೆಯು ಸ್ಥಳೀಯವಾಗಿ ಲಭ್ಯವಿರುವ ಪ್ರತಿಭಾವಂತ ಎಂಜಿನಿಯರ್‌ಗಳಿಗೆ ಮಹತ್ವದ ಯೋಜನೆಗಳಲ್ಲಿ ಸಕ್ರಿಯವಾಗಿ ಕೆಲಸ ಮಾಡುವ ಅವಕಾಶವನ್ನು ಒದಗಿಸಲಿದೆ. ಈ ಕೇಂದ್ರದ ಮೂಲಕ ಏವಿಯಾನಿಕ್ಸ್, ವಿಮಾನ ಸಂಚಾರ ನಿರ್ವಹಣೆ, ಸಂಪರ್ಕ ಸುಧಾರಣೆ ಮತ್ತು ವೈಮಾನಿಕ ನಿರ್ವಹಣೆ ಮುಂತಾದ ಚಟುವಟಿಕೆಗಳು ನಡೆಯಲಿವೆ. ಅಲ್ಲದೆ, ಈ ಉದ್ಯಮಗಳಿಗೆ ಬೇಕಾದ ಕೌಶಲ್ಯಪೂರ್ಣ ಉದ್ಯೋಗಿಗಳನ್ನು ಇದು ಸಜ್ಜುಗೊಳಿಸಲಿದೆ ಎಂದು ಅವರು ತಿಳಿಸಿದ್ದಾರೆ.

ದೇಶದ ವೈಮಾಂತರಿಕ್ಷ ಮತ್ತು ರಕ್ಷಣಾ ವಲಯದ ಕೈಗಾರಿಕೆಗಳ ಒಟ್ಟು ವಹಿವಾಟಿನಲ್ಲಿ ರಾಜ್ಯದ ಪಾಲು ಶೇಕಡ 65ರಷ್ಟಿದೆ. ಈ ಕ್ಷೇತ್ರದಲ್ಲಿ ರಾಜ್ಯವು ಜಾಗತಿಕ ಸ್ತರದಲ್ಲಿ ತೃತೀಯ ಸ್ಥಾನದಲ್ಲಿದೆ. ಸರಕಾರದ ಉದ್ಯಮಸ್ನೇಹಿ ಕೈಗಾರಿಕಾ ನೀತಿಯ ಫಲವಾಗಿ ಟಾಟಾ ಸಮೂಹವು ನಮ್ಮಲ್ಲಿ ಎಚ್125 ದರ್ಜೆಯ ಹೆಲಿಕಾಪ್ಟರ್‌ ಗಳ ಬಿಡಿಭಾಗಗಳ ಜೋಡಣೆ ಘಟಕವನ್ನು ಆರಂಭಿಸುತ್ತಿದೆ. ಇಂಡಿಗೋ ಕಂಪನಿಯ ʼಎಂ.ಆರ್.ಒ ಸ್ಥಾವರ’ ಮತ್ತು ಸಾಫ್ರಾನ್ ಕಂಪನಿಯ ಏವಿಯಾನಿಕ್ಸ್ ಘಟಕಗಳು ಕೂಡ ರಾಜ್ಯದಲ್ಲಿ ಶುರುವಾಗುತ್ತಿವೆ. ಇವು ಉದ್ಯೋಗಸೃಷ್ಟಿಯ ಜತೆಗೆ ಸ್ಥಳೀಯ ಉದ್ಯಮಿಗಳು ಮತ್ತು ಸೇವಾದಾರರಿಗೂ ಉಜ್ವಲ ಅವಕಾಶಗಳನ್ನು ನಿರ್ಮಿಸುತ್ತಿವೆ ಎಂದು ಪಾಟೀಲ್‌ ಬಣ್ಣಿಸಿದ್ದಾರೆ.

ಜಾಗತಿಕ ಮಟ್ಟದಲ್ಲಿ ವೈಮಾನಿಕ ಎಂಜಿನ್ ತಯಾರಿಸುವ ರೋಲ್ಸ್ ರಾಯ್ಸ್, ಅಡ್ವಾನ್ಸ್ಡ್ ಮೆಟೀರಿಯಲ್ಸ್ ತಯಾರಿಸುವ ನೋಪೋ ನ್ಯಾನೋಟೆಕ್ ತರಹದ ನವೋದ್ಯಮಗಳು, ಸ್ಯಾಟಲೈಟ್ ಇಮೇಜಿಂಗ್ ತಂತ್ರಜ್ಞಾನ ಅಭಿವೃದ್ಧಿಗೆ ಹೆಸರಾಗಿರುವ ಪಿಕ್ಸೆಲ್, ಮತ್ತು ಯುಎವಿ (ಅನ್-ಮ್ಯಾನ್ಡ್ ಏರಿಯಲ್ ವೆಹಿಕಲ್ಸ್) ತರಹದ ಸಾಧನಗಳನ್ನು ಅಭಿವೃದ್ಧಿಪಡಿಸುವ ನ್ಯೂಸ್ಪೇಸ್ ರೀಸರ್ಚ್ ತರಹದ ಕಂಪನಿಗಳೆಲ್ಲವೂ ರಾಜ್ಯದಲ್ಲಿ ನೆಲೆಯೂರಿವೆ. ಈ ಕಾರ್ಯಪರಿಸರವನ್ನು ಉದ್ಯಮಿಗಳು ಹೂಡಿಕೆ ಮಾಡುವ ಮೂಲಕ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಕಾರ್ಯಕ್ರಮದಲ್ಲಿ ಫ್ರಾನ್ಸ್ ಕಾನ್ಸುಲ್ ಜನರಲ್ ಮಾರ್ಕ್ ಲಾಮಿ, ಥೇಲ್ಸ್ ಕಂಪನಿಯ ಉನ್ನತಾಧಿಕಾರಿ ಆಲಿವರ್ ಫ್ಲೌಸ್, ಪ್ರಿಯಾಂಕ್ ಪ್ರಕಾಶ್ ಮುಂತಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X