Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ‘ನಿಪುಣ ಕರ್ನಾಟಕ’ ಕಾರ್ಯಕ್ರಮಕ್ಕೆ...

‘ನಿಪುಣ ಕರ್ನಾಟಕ’ ಕಾರ್ಯಕ್ರಮಕ್ಕೆ ಶೀಘ್ರದಲ್ಲೇ ಚಾಲನೆ : ಸಚಿವ ಪ್ರಿಯಾಂಕ್ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ22 Oct 2024 9:53 PM IST
share
‘ನಿಪುಣ ಕರ್ನಾಟಕ’ ಕಾರ್ಯಕ್ರಮಕ್ಕೆ ಶೀಘ್ರದಲ್ಲೇ ಚಾಲನೆ : ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ಉದ್ಯೋಗಕ್ಕಾಗಿ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸುವ ಮೂಲಕ ಉದ್ಯೋಗಾವಕಾಶ ಮತ್ತು ಉದ್ಯಮಶೀಲತೆಯನ್ನು ಹೆಚ್ಚಿಸಲು ‘ನಿಪುಣ ಕರ್ನಾಟಕ’ ಕಾರ್ಯಕ್ರಮವನ್ನು ರಾಜ್ಯ ಸರಕಾರ ಘೋಷಿಸಿದ್ದು, ಶೀಘ್ರದಲ್ಲೇ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು ಎಂದು ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ನ.19ರಿಂದ 21ರವರೆಗೆ ಬೆಂಗಳೂರು ಅರಮನೆ ಆವರಣದಲ್ಲಿ ನಡೆಯಲಿರುವ ಬೆಂಗಳೂರು ಟೆಕ್ ಶೃಂಗಸಭೆಗೂ ಮುನ್ನ ಮಂಗಳವಾರ ನಗರದಲ್ಲಿ ಆರ್ ಅಂಡ್ ಡಿ ಲ್ಯಾಬ್‍ಗಳು ಮತ್ತು ಶಿಕ್ಷಣ ಸಂಸ್ಥೆಗಳ ತಜ್ಞರು ಹಾಗೂ ಪ್ರತಿನಿಧಿಗಳ ಜೊತೆ ಅವರು ಸಂವಾದ ನಡೆಸಿದರು.

ಯುವ ವಿದ್ಯಾರ್ಥಿಗಳಲ್ಲಿ ನಾವೀನ್ಯತೆ ಮತ್ತು ಉದ್ಯಮಶೀಲತೆಯನ್ನು ಉತ್ತೇಜಿಸುವ ಪ್ರಾಮುಖ್ಯತೆಯನ್ನು ಒತ್ತಿ ಹೇಳಿದ ಅವರು, ವಿದ್ಯಾರ್ಥಿಗಳಲ್ಲಿ ಬಾಲ್ಯದಿಂದಲೇ ವೈಜ್ಞಾನಿಕ ಮನೋಭಾವ ಮತ್ತು ಮನಃಸ್ಥಿತಿಯನ್ನು ಬೆಳೆಸಲು ಚರ್ಚೆಗಳು, ರಸಪ್ರಶ್ನೆಗಳು ಮತ್ತು ವಿಜ್ಞಾನ ಪ್ರದರ್ಶನಗಳಂತಹ ಜ್ಞಾನಾಭಿವೃದ್ಧಿ ಕ್ಷೇತ್ರಗಳಲ್ಲಿ ತೊಡಗಿಸಿಕೊಳ್ಳುವಂತಹ ಕಾರ್ಯಕ್ರಮ ಚೌಕಟ್ಟನ್ನು ರೂಪಿಸಲು ಸಲಹೆ ನೀಡಿದರು.

ರಾಜ್ಯ ಸರಕಾರದ ಉದ್ದೇಶವು ಅತ್ಯಂತ ಸ್ಪಷ್ಟವಾಗಿದ್ದು, ನಾವು ಕೇವಲ ಹೂಡಿಕೆಯ ತಾಣವಾಗಿ ಇರಲು ಬಯಸುವುದಿಲ್ಲ. ಜ್ಞಾನ ಹಾಗೂ ಕೌಶಲ್ಯವೆ ನಮ್ಮ ಬಂಡವಾಳವಾಗಬೇಕು. ಪಿರಮಿಡ್ ಮಾದರಿಯಲ್ಲಿ ಶಿಕ್ಷಣ ಮೊದಲನೆಯದು ಹಾಗೂ ಕೌಶಲ್ಯ ಎರಡನೆಯದು, ಬೆಂಬಲಿಸುವ ಮೂರನೆಯದೆಂದರೆ ವಾಣಿಜ್ಯೀಕರಣಗೊಳ್ಳುವ ನಾವೀನ್ಯತೆಗಳು ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದರು.

ನಾವು ಕರ್ನಾಟಕದಲ್ಲಿ ಅತ್ಯುತ್ತಮ ಮತ್ತು ಹೆಚ್ಚು ತರಬೇತಿ ಪಡೆದ ಮಾನವ ಸಂಪನ್ಮೂಲವನ್ನು ಹೊಂದಿದ್ದೇವೆ, ನಮ್ಮ ಯುವ ಸಮೂಹದಲ್ಲಿ ಕೌಶಲ್ಯವನ್ನು ಸ್ಥಳೀಯವಾಗಿ ನೀಡಿ, ಜಾಗತಿಕವಾಗಿ ಉದ್ಯೋಗ ಮಾಡವ ಅವಕಾಶಗಳನ್ನು ಕಲ್ಪಿಸುವುದು ನಮ್ಮ ಗುರಿಯಾಗಿದೆ ಎಂದು ಅವರು ಹೇಳಿದರು.

ಪೇಟೆಂಟ್‍ಗಳನ್ನು ಪಿಚ್ ಮಾಡಲು ಶಿಕ್ಷಣ ತಜ್ಞರಿಗೆ ವೇದಿಕೆಯನ್ನು ರಚಿಸಲಾಗುವುದು. ಅಲ್ಲದೆ, ದೃಢೀಕರಣಕ್ಕಾಗಿ ಬಯೋಪೋಸ್ಟರ್‌ಗಳಿಗೆ ಐ.ಎಸ್.ಬಿ.ಎನ್ ಸಂಖ್ಯೆಗಳನ್ನು ನಿಯೋಜಿಸಲು ಮತ್ತು ಕೆಳ ಹಂತದ ನಾವೀನ್ಯಕಾರರಿಗೆ ತಮ್ಮ ಚಾತುರ್ಯವನ್ನು ಪ್ರದರ್ಶಿಸಲು ಸ್ಥಳವನ್ನು ಒದಗಿಸಲು ಸಮ್ಮತಿಸಿದ ಅವರು, ಕರ್ನಾಟಕದಲ್ಲಿ ಬಾಹ್ಯಾಕಾಶ ಮತ್ತು ರಕ್ಷಣಾ ಉತ್ಪಾದನ ಕೇಂದ್ರ ಸ್ಥಾಪನೆ ಮಾಡವುದಾಗಿಯೂ ಪ್ರಕಟಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X