Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಮನರಂಜನೆಗಾಗಿ ಕೊಡೆ ಹಿಡಿದು ಬಸ್ ಚಾಲನೆ |...

ಮನರಂಜನೆಗಾಗಿ ಕೊಡೆ ಹಿಡಿದು ಬಸ್ ಚಾಲನೆ | ಸೇವೆಯಿಂದ ಸಿಬ್ಬಂದಿ ಅಮಾನತು : ಸಚಿವ ರಾಮಲಿಂಗಾರೆಡ್ಡಿ

ವಾರ್ತಾಭಾರತಿವಾರ್ತಾಭಾರತಿ25 May 2024 9:09 PM IST
share
ಮನರಂಜನೆಗಾಗಿ ಕೊಡೆ ಹಿಡಿದು ಬಸ್ ಚಾಲನೆ | ಸೇವೆಯಿಂದ ಸಿಬ್ಬಂದಿ ಅಮಾನತು : ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಮನರಂಜನೆಗಾಗಿ ಕೊಡೆ ಹಿಡಿದುಕೊಂಡು ಬಸ್ ಚಾಲನೆ ಮಾಡುವ ಮೂಲಕ ಬೇಜವಾಬ್ದಾರಿತನದಿಂದ ವರ್ತಿಸಿ, ಸಂಸ್ಥೆಯ ಘನತೆಗೆ ಧಕ್ಕೆ ತಂದ ಚಾಲನಾ ಸಿಬ್ಬಂದಿಗಳನ್ನು ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ಸಾರಿಗೆ ಹಾಗೂ ಮುಜುರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಶನಿವಾರ ಈ ಸಂಬಂಧ ಎಕ್ಸ್ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ಅವರು, ಮಳೆ ಬರುತ್ತಿರುವಾಗ ಸಂಸ್ಥೆಯ ವಾಹನದ ಚಾಲಕರು ಕೊಡೆ ಹಿಡಿದುಕೊಂಡು ಚಾಲನೆ ಮಾಡುವ ವಿಡಿಯೋ (ಮನರಂಜನೆಗಾಗಿ ಮಾಡಿದ ವಿಡಿಯೋ ಕುರಿತು) ರಾಜ್ಯ ಬಿಜೆಪಿಯವರು ಟ್ವೀಟ್ ಮಾಡಿ ಮಾಡಿ ಉತ್ತರಕುಮಾರನ ಪೌರುಷವನ್ನು ತೋರಿಸುತ್ತಿರುವುದಕ್ಕೆ ಹಾಗೂ ಅವರ ಈ ಸಂತೋಷಕ್ಕೆ ಕಡಿವಾಣ ಹಾಕಬೇಕಾಗಿದೆಯಲ್ಲ ಎಂಬ ನೋವಿನೊಂದಿಗೆ ಈ ವಿವರಣೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಕೆಲವರಿಗೆ ಕಣ್ಣಿರುತ್ತದೆ ಆದರೆ ನೋಡಲು ಸಾಧ್ಯವಾಗದ ಸ್ಥಿತಿ, ತಲೆ ಇರುತ್ತದೆ ಬುದ್ದಿಯನ್ನು ಸರಿಯಾಗಿ ಉಪಯೋಗಿಸಲಾಗದ ಪರಿಸ್ಥಿತಿ, ಇವೆಲ್ಲವೂ ಅನ್ವಯಿಸುವುದು ಬಸನಗೌಡ ಪಾಟೀಲ್ ಯತ್ನಾಳ್, ಆರ್.ಅಶೋಕ್, ಡಾ.ಸಿ.ಎನ್.ಅಶ್ವತ್ಥ ನಾರಾಯಣ ಹಾಗೂ ಬಿಜೆಪಿ ಕಣ್ಣು, ತಲೆ ಯಾವುದೂ ಸರಿಯಾಗಿ ಕನೆಕ್ಟ್ ಆಗದೆ ಇರೋ ಪಂಡಿತ ಪುತ್ರರು ಎಂಬುದನ್ನು ಬಿಡಿಸಿ ಹೇಳಬೇಕಿಲ್ಲ ಎಂದು ಅವರು ವ್ಯಂಗ್ಯವಾಡಿದ್ದಾರೆ.

ಈ ವಿಡಿಯೋ ನೋಡಿದರೆ ಚಾಲಕ ಹಿಡಿದಿರುವ ಕೊಡೆ ಮೇಲೆ ಒಂದೇ ಒಂದು ಹನಿ ನೀರು ಕಾಣುತ್ತಿಲ್ಲ ಅದನ್ನು ನೋಡುವ, ಯೋಚಿಸುವ ವ್ಯವಧಾನ, ಬುದ್ದಿಯಾದರೂ ಬೇಡವೇ ಇವರಿಗೆ ?. ಬಿಜೆಪಿ ಅವಧಿಯಲ್ಲಿ ರಾಜ್ಯದ ಸಾರಿಗೆ ಸಂಸ್ಥೆಗಳನ್ನು 5900 ಕೋಟಿ ರೂ. ಸಾಲದ ಸುಳಿಯಲ್ಲಿ ಮುಳುಗಿಸಿ ಹೋಗಿರುವ ಕೀರ್ತಿವಂತರು ಇವರು ಎಂದು ರಾಮಲಿಂಗಾರೆಡ್ಡಿ ಟೀಕಿಸಿದ್ದಾರೆ.

ಅವರ ಅವಧಿಯಲ್ಲಿ ಹೊಸ ಬಸ್ಸುಗಳ ಸೇರ್ಪಡೆಯಾಗಿಲ್ಲ. ಡಕೋಟ ಬಸ್ಸುಗಳನ್ನು ಕಲ್ಪಿಸಿರುವ ಸಾಧನೆ ಅವರದ್ದೇ. ನೇಮಕಾತಿಯಂತೂ ಮರೀಚಿಕೆಯೆ ಸರಿ. ನಮ್ಮ ಅವಧಿಯಲ್ಲಿ ಹೊರಡಿಸಿದ್ದ ನೇಮಕಾತಿ ಪ್ರಕಟಣೆಗೂ ತಡೆ ನೀಡಿದ್ದ ಕೀರ್ತಿ ಬಿಜೆಪಿ ಅವರಿಗೆ ಸಲ್ಲಬೇಕು. ನಮ್ಮ ಸರಕಾರ ಬಂದೊಡನೆ 5800 ಹೊಸ ಬಸ್ಸುಗಳ ಸೇರ್ಪಡೆಗೆ ಚಾಲನೆ ನೀಡಿದೆ ಎಂದು ಅವರು ತಿಳಿಸಿದ್ದಾರೆ.

ಬಿಜೆಪಿ ಅವಧಿಯಲ್ಲಿ ತಡೆ ಹಿಡಿಯಲಾಗಿದ್ದ ನೇಮಕಾತಿಗೆ ಚಾಲನೆ ನೀಡಲಾಗಿದೆ. 13,999 ಹುದ್ದೆಗಳು ಖಾಲಿಯಿದ್ದು, ತಾಂತ್ರಿಕ ಸಿಬ್ಬಂದಿ ಹಾಗೂ ಚಾಲಕ ನಿರ್ವಾಹಕರಿಗೆ ನೇಮಕಾತಿ ಪತ್ರವನ್ನು ವಿತರಿಸಲಾಗಿದೆ. ಇತರೆ ನೇಮಕಾತಿ ಪ್ರಕ್ರಿಯೆಗಳು ಜಾರಿಯಲ್ಲಿವೆ ಎಂದು ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ಬಿಜೆಪಿಯವರು ಸಾರಿಗೆ ಸಂಸ್ಥೆಗಳಿಗೆ ದಯಪಾಲಿಸಿದ ದುರಂತ ಕಥೆಗಳನ್ನು ಮತ್ತೊಮ್ಮೆ ಮಗದೊಮ್ಮೆ ನೆನಪಿಸಲು ನಮಗೆ ಅವರೆ ಅವಕಾಶ ಮಾಡಿಕೊಡುವುದರ ಹಿಂದಿನ ಉದ್ದೇಶ, ನಮ್ಮ ಸರಕಾರದ ಅಭಿವೃದ್ಧಿ ಕಾರ್ಯಗಳಿಗೆ ಪ್ರಚಾರ ನೀಡುವುದು ಎಂದಾದರೆ ನಮಗೇನು ಅಭ್ಯಂತರವಿಲ್ಲ ಎಂದು ಅವರು ತಿಳಿಸಿದ್ದಾರೆ.

ಮುಂದುವರೆದು, ಚಾಲಕ ಕೊಡೆ ಹಿಡಿದು ಬಸ್ ಚಾಲನೆ ಮಾಡಿದ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಯಿತು. ಅದರನ್ವಯ, ಮೇ 23ರಂದು ಧಾರವಾಡ ಘಟಕದ ವಾಹನ ಸಂಖ್ಯೆ ಕೆಎ-25 ಎಫ್-1336 ಬೇಟಗೇರಿ-ಧಾರವಾಡ ಮಾರ್ಗದಲ್ಲಿ ಕಾರ್ಯಾಚರಿಸುತ್ತಿರುವಾಗ ವಾಹನದಲ್ಲಿ ಚಾಲಕರಾಗಿ ಹನುಮಂತಪ್ಪ ಅ. ಕಿಲ್ಲೇದಾರ ಹಾಗೂ ನಿರ್ವಾಹಕರಾಗಿ ಅನಿತಾ ಎಚ್. ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು ಅವರು ಹೇಳಿದ್ದಾರೆ.

ಮಳೆ ಬರುತ್ತಿದ್ದ ಆ ಸಮಯದಲ್ಲಿ ಅಂದರೆ ಸುಮಾರು ಸಂಜೆ 4.30ಕ್ಕೆ ಬಸ್ಸಿನಲ್ಲಿ ಪ್ರಯಾಣಿಕರು ಇಲ್ಲದೆ ಖಾಲಿ ಇದ್ದುದರಿಂದ ಚಾಲಕರು ಮನೋರಂಜನೆಗಾಗಿ ನಿರ್ವಾಹಕರ ಬಳಿ ಇದ್ದ ಕೊಡೆಯನ್ನು ಪಡೆದು, ಹಿಡಿದುಕೊಂಡು ವಾಹನ ಚಾಲನೆ ಮಾಡಿದ್ದಾರೆ. ಇದನ್ನು ನಿರ್ವಾಹಕಿಯು ವಿಡಿಯೋ ಚಿತ್ರೀಕರಣ ಮಾಡಿದ್ದಾರೆ ಎಂದು ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.

ಆ ಸಮಯದಲ್ಲಿ ಚಾಲಕರ ಮೇಲಿನ ಛಾವಣಿಯಾಗಲಿ, ಪ್ರಯಾಣಿಕರು ಕುಳಿತುಕೊಳ್ಳುವ ಸ್ಥಳದ ಛಾವಣಿಯಾಗಲಿ ಸೋರಿಕೆ ಇರಲಿಲ್ಲ. ವಾಹನದ ಛಾವಣಿ ಸೋರಿಕೆ ಬಗ್ಗೆ ಚಾಲಕ, ನಿರ್ವಾಹಕರ, ಪ್ರಯಾಣಿಕರ ಯಾವುದೆ ದೂರು ದಾಖಲು ಆಗಿಲ್ಲ. ಆ ವಾಹನವನ್ನು ವಿಭಾಗದ ತಾಂತ್ರಿಕ ಶಿಲ್ಪಿಗಳಿಂದ ಪರಿಶೀಲನೆ ಮಾಡಿಸಿದಾಗ ಮೇಲ್ಚಾವಣಿಯು ಸೋರದೆ ಇರುವುದು ಖಚಿತವಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ರೀತಿಯ ಬೇಜಾವಬ್ದಾರಿತನದಿಂದ ವರ್ತಿಸಿ, ಸಂಸ್ಥೆಯ ಘನತೆಗೆ ಧಕ್ಕೆ ತಂದ ಚಾಲನಾ ಸಿಬ್ಬಂದಿಗಳನ್ನು ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.

ಮಳೆ ಬರುತ್ತಿರುವಾಗ ಸಂಸ್ಥೆಯ ವಾಹನದ ಚಾಲಕರು ಕೊಡೆ ಹಿಡಿದುಕೊಂಡು ಚಾಲನೆ ಮಾಡುವ ವಿಡಿಯೋ (ಮನರಂಜನೆಗಾಗಿ ಮಾಡಿದ‌ ವಿಡಿಯೋ ಕುರಿತು) @BJP4Karnataka ದವರು ಟ್ವೀಟ್ ಮಾಡಿ ಮಾಡಿ ಉತ್ತರಕುಮಾರನ ಪೌರುಷವನ್ನು ತೋರಿಸುತ್ತಿರುವುದಕ್ಕೆ ಹಾಗೂ ಅವರ ಈ ಸಂತೋಷಕ್ಕೆ ಕಡಿವಾಣ ಹಾಕಬೇಕಾಗಿದೆಯಲ್ಲ‌ ಎಂಬ ನೋವಿನೊಂದಿಗೆ ಈ ವಿವರಣೆ ನೀಡಲಾಗುತ್ತಿದೆ.… pic.twitter.com/6LSvTRmvyj

— Ramalinga Reddy (@RLR_BTM) May 24, 2024

share
ವಾರ್ತಾಭಾರತಿ
ವಾರ್ತಾಭಾರತಿ
Next Story
X