Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ನಮ್ಮ ತೆರಿಗೆ ಪಾವತಿಗೆ ತಕ್ಕಂತೆ ಕೇಂದ್ರ...

ನಮ್ಮ ತೆರಿಗೆ ಪಾವತಿಗೆ ತಕ್ಕಂತೆ ಕೇಂದ್ರ ಸರಕಾರ ಪಾಲು ನೀಡಲಿ : ಸಚಿವ ರಾಯರಡ್ಡಿ

ವಾರ್ತಾಭಾರತಿವಾರ್ತಾಭಾರತಿ4 Sept 2026 7:24 PM IST
share
ನಮ್ಮ ತೆರಿಗೆ ಪಾವತಿಗೆ ತಕ್ಕಂತೆ ಕೇಂದ್ರ ಸರಕಾರ ಪಾಲು ನೀಡಲಿ : ಸಚಿವ ರಾಯರಡ್ಡಿ

ಬೆಂಗಳೂರು : ಕರ್ನಾಟಕ ಜನತೆ ನೀಡುತ್ತಿರುವ ತೆರಿಗೆ ಸಂಗ್ರಹಕ್ಕೂ, ಕೇಂದ್ರ ಸರಕಾರ ನೀಡುವ ಪಾಲು ಬಹಳ ವ್ಯತ್ಯಾಸ ಇದೆ. ಹೀಗಾಗಿ, ಕೇಂದ್ರ ಸರಕಾರ ನಮ್ಮ ತೆರಿಗೆಗೆ ತಕ್ಕಂತೆ ಪಾಲು ನೀಡಲಿ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಆಗ್ರಹಿಸಿದ್ದಾರೆ.

ಶುಕ್ರವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ರಾಜ್ಯದ ವಿದ್ಯಾರ್ಥಿಗಳು ಉದ್ಯಮಿಗಳಾಗಲು ಪ್ರೊ ತ್ಸಾಹಿಸುವ ನಿಟ್ಟಿನಲ್ಲಿ ಉನ್ನತ ಶಿಕ್ಷಣ ಇಲಾಖೆ ಹಾಗೂ ಎಫ್‍ಕೆಸಿಸಿಐ ಜಂಟಿಯಾಗಿ ಆಯೋಜಿಸಿರುವ ‘ಮಂಥನ್-2026' (18ನೆ ಆವೃತ್ತಿ) ಬಿಸಿನೆಸ್ ಪ್ಲಾನ್ ಸ್ಪರ್ಧೆಯ ಗ್ರಾಂಡ್ ಫಿನಾಲೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೇಂದ್ರ ಸರಕಾರ ನಮ್ಮ ಪಾಲನ್ನು ಹೆಚ್ಚು ಮಾಡಿದರೆ ಮೂಲಭೂತ ಸೌಕರ್ಯ ಸೇರಿದಂತೆ ಹಲವಾರು ಅಭಿವೃದ್ಧಿ ಕಾರ್ಯ ನಡೆಸಲು ಅನುಕೂಲ ಎಂದು ಹೇಳಿದರು.

ನಾನು ಈ ಹಿಂದೆ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರನಾಗಿ ಕೆಲಸ ಮಾಡಿದ್ದೇನೆ. ಆ ಅನುಭವದಿಂದ ಹೇಳುತ್ತೇನೆ, ಕರ್ನಾಟಕದಲ್ಲಿ ಹಣದ ಕೊರತೆ ಎನ್ನುವುದು ಸುಳ್ಳು. ಆದರೆ, ಕೇಂದ್ರ ಸರಕಾರಿ ಬರುವ ಅನುದಾನದ ಕುರಿತು ವ್ಯಾಪಕ ಚರ್ಚೆ ಆಗಬೇಕು. ವಾಣಿಜ್ಯೊದ್ಯಮಿಗಳು ಕೇಂದ್ರದ ಮೇಲೆ ಒತ್ತಡ ಹಾಕಬೇಕು. ಕೇಂದ್ರ ಸರಕರ ನಮ್ಮ ಪಾಲನ್ನು ಹೆಚ್ಚು ಮಾಡಿದರೆ ಮೂಲಭೂತ ಸೌಕರ್ಯ ಸೇರಿದಂತೆ ಹಲವಾರು ಅಭಿವೃದ್ಧಿ ಕಾರ್ಯ ನಡೆಸಲು ಅನುಕೂಲ ಎಂದು ಅವರು ತಿಳಿಸಿದರು.

ಮುಂದಿನ ಪೀಳಿಗೆಯ ಉದ್ಯಮಿಗಳಾಗುತ್ತಿರುವವರಿಗೆ ಶಕ್ತಿ ತುಂಬುವ ಈ ವೇದಿಕೆಯಲ್ಲಿ ಯುವ ಪ್ರತಿಭೆಗಳ ನವೀನ ಆಲೋಚನೆಗಳನ್ನು ವೀಕ್ಷಿಸಲು ಸಂತೋಷವೆನಿಸುತ್ತದೆ.ಇಲ್ಲಿರುವ ಯುವಕ, ಯುವತಿಯರೇ ನಾಳಿನ ಉದ್ಯಮಿಗಳು ಹಾಗೂ ಉದ್ಯೋಗದಾತರು. ಅವರ ಭವಿಷ್ಯದ ಯೋಜನೆಗಳಿಗೆ ಬೆಂಬಲವಾಗಿ ನಿಲ್ಲುವುದು ನಮ್ಮ ಸರಕಾರದ ಆದ್ಯತೆಯಾಗಿದೆ. 18 ವರ್ಷಗಳಿಂದ ವಿದ್ಯಾರ್ಥಿಗಳಲ್ಲಿರುವ ಅನ್ವೇಷಣಾ ಸಾಮಥ್ರ್ಯ ಹೆಚ್ಚಿಸಲು, ಅವರಲ್ಲಿ ಈ ಕುರಿತು ಉತ್ಸಾಹ ಮೂಡಿಸುವ ಕೆಲಸ ಮಾಡಿದ್ದೀರಿ. ತಾಲೂಕು, ಜಿಲ್ಲಾ ಮಟ್ಟದಲ್ಲಿಯೂ ಈ ಕಾರ್ಯಕ್ರಮ ನಡೆದಿದೆ ಎನ್ನುವುದು ಸಂತಸದ ವಿಚಾರ ಎಂದು ಅವರು ನುಡಿದರು.

ನಮ್ಮ ದೇಶದಲ್ಲಿಎರಡು ಸಮಸ್ಯೆ ಇದೆ. ಒಂದು ಜನಸಂಖ್ಯೆ, ಮತ್ತೊಂದು ಉದ್ಯೋಗ. ನಮ್ಮಲ್ಲಿ ಯುವಕ, ಯುವತಿಯರ ಸಂಖ್ಯೆ ದೊಡ್ಡದಿದೆ. ಆದ್ದರಿಂದ ಇಂತಹ ಯೋಜನೆಗಳು ಬಹಳ ಮುಖ್ಯ. ಸರಕಾರಗಳೇ ಎಲ್ಲವನ್ನೂ ಮಾಡಲು ಸಾಧ್ಯವಿಲ್ಲ. ಸಮಾಜವೂಇದರಲ್ಲಿ ತೊಡಗಿಕೊಳ್ಳಬೇಕು. ನಮ್ಮಲ್ಲಿ ಈಗ ಶೇ.70ರಷ್ಟು ಸಾಕ್ಷರತಾ ಪ್ರಮಾಣ ಇದೆ. ಅವರೆಲ್ಲರಿಗೂ ಉದ್ಯೋಗ ನೀಡುವುದು ಸಮಸ್ಯೆ. ಹಾಗಾಗಿ ಹೆಚ್ಚು ಉದ್ಯೋಗದಾತರನ್ನು ಸೃಷ್ಟಿಸುವುದು ಇಂದಿನ ಅನಿವಾರ್ಯತೆಯಾಗಿದೆ. ಪ್ರತಿಭಾ ಪಲಾಯನವೂ ಇಂದು ನಮ್ಮನ್ನು ಕಾಡುವ ಇನ್ನೊಂದು ಸಮಸ್ಯೆ. ಹೊರಹೋಗಿ ಕೆಲಸ ಮಾಡಿ, ಬದುಕು ಕಟ್ಟಿಕೊಳ್ಳುವುದು ತಪ್ಪು ಎನ್ನಲು ಸಾಧ್ಯವಿಲ್ಲ. ಆದರೆ ಪ್ರತಿಭಾವಂತರನ್ನು ಉಳಿಸಿಕೊಳ್ಳವುದು ಅನಿವಾರ್ಯತೆ ಇದೆ. ಇದರ ಬಗ್ಗೆ ಗಂಭೀರ ಚರ್ಚೆ ಆಗಬೇಕು ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ತುಳಸಿ ಮದ್ದಿನೇನಿ, ಕಾಲೇಜು ಶಿಕ್ಷಣ ಆಯುಕ್ತ ಗೋಪಾಲಕೃಷ್ಣ, ಡಾ.ಹರೀಶ್ ಕುಮಾರ್, ಎಫ್‍ಕೆಸಿಸಿಐ ಅಧ್ಯಕ್ಷೆ ಉಮಾ ರೆಡ್ಡಿ ಸೇರಿದಂತೆ ಪ್ರಮುಖರಿದ್ದರು.

Tags

Minister Rayareddy
share
ವಾರ್ತಾಭಾರತಿ
ವಾರ್ತಾಭಾರತಿ
Next Story
X