Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಶಾಸಕರಾದ ಶಿವರಾಮ್ ಹೆಬ್ಬಾರ್,...

ಶಾಸಕರಾದ ಶಿವರಾಮ್ ಹೆಬ್ಬಾರ್, ಎಸ್.ಟಿ.ಸೋಮಶೇಖರ್ ಬಿಜೆಪಿಯಿಂದ ಆರು ವರ್ಷ ಕಾಲ ಉಚ್ಚಾಟನೆ

ವಾರ್ತಾಭಾರತಿವಾರ್ತಾಭಾರತಿ27 May 2025 1:38 PM IST
share
ಶಾಸಕರಾದ ಶಿವರಾಮ್ ಹೆಬ್ಬಾರ್, ಎಸ್.ಟಿ.ಸೋಮಶೇಖರ್ ಬಿಜೆಪಿಯಿಂದ ಆರು ವರ್ಷ ಕಾಲ ಉಚ್ಚಾಟನೆ

ಬೆಂಗಳೂರು : ಪಕ್ಷದ ಶಿಸ್ತು ಉಲ್ಲಂಘನೆ ಹಿನ್ನೆಲೆಯಲ್ಲಿ ಹಾಲಿ ಶಾಸಕರಾದ ಎಸ್.ಟಿ. ಸೋಮಶೇಖರ್ ಹಾಗೂ ಅರಬೈಲ್ ಹೆಬ್ಬಾರ್ ಶಿವರಾಮ್ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಮುಂದಿನ ಆರು ವರ್ಷಗಳ ಕಾಲ ಬಿಜೆಪಿ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.

ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಈ ಸಂಬಂಧ ಆದೇಶ ಹೊರಡಿಸಿದೆ. ಯಶವಂತಪುರ ಕ್ಷೇತ್ರದ ಶಾಸಕ ಎಸ್.ಟಿ.ಸೋಮಶೇಖರ್ ಹಾಗೂ ಯಲ್ಲಾಪುರ ಕ್ಷೇತ್ರದ ಶಾಸಕ ಅರಬೈಲ್ ಹೆಬ್ಬಾರ್ ಶಿವರಾಮ್ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಲಾಗಿದೆ. ಇಬ್ಬರೂ ಶಾಸಕರು ಹಲವು ದಿನಗಳಿಂದ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವುದರ ಜೊತೆಗೆ ಬಿಜೆಪಿಯನ್ನು ಬಹಿರಂಗವಾಗಿ ಟೀಕಿಸುವ ಮೂಲಕ ಪಕ್ಷಕ್ಕೆ ತೀವ್ರ ಮುಜುಗರವನ್ನುಂಟು ಮಾಡಿದ್ದರು. ಆ ಹಿನ್ನೆಲೆಯಲ್ಲಿ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿತ್ತು.

ಪರಿಷತ್ ಚುನಾವಣೆ ವೇಳೆಯ ಇಬ್ಬರೂ ಶಾಸಕರು ಬಿಜೆಪಿ ವಿಪ್ ಉಲ್ಲಂಘಿಸಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದ್ದರು. ಹೀಗಾಗಿ ಇವರ ವಿರುದ್ದ ರಾಜ್ಯ ಬಿಜೆಪಿ, ಹೈಕಮಾಂಡ್‍ಗೆ ದೂರು ನೀಡಿತ್ತು. ಒಂದು ವರ್ಷದ ಬಳಿಕ ದೂರನ್ನು ಪರಿಗಣಿಸಿರುವ ಹೈಕಮಾಂಡ್ ಇಬ್ಬರನ್ನೂ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದಲೇ ಮುಂದಿನ ಆರು ವರ್ಷಗಳ ಅವಧಿಗೆ ಉಚ್ಚಾಟಿಸಿ ಆದೇಶ ಹೊರಡಿಸಿದೆ.

ಇಬ್ಬರೂ ಶಾಸಕರು ಈ ಹಿಂದೆ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರಿದ್ದರು. ಬಿಜೆಪಿ ಸರಕಾರದ ಅವಧಿಯಲ್ಲಿ ಶಿವರಾಮ್ ಹೆಬ್ಬಾರ್ ಕಾರ್ಮಿಕ ಸಚಿವರಾಗಿ ಹಾಗೂ ಸೋಮಶೇಖರ್ ಸಹಕಾರ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. 2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದಿದ್ದರು. ಆದರೆ, ನಂತರದಲ್ಲಿ ಇಬ್ಬರೂ ಶಾಸಕರು ಕಾಂಗ್ರೆಸ್ ಪಕ್ಷದ ಜೊತೆ ಹೆಚ್ಚು ಗುರುತಿಸಿಕೊಳ್ಳುತ್ತಿದ್ದರು. ಹೀಗಾಗಿ ಪಕ್ಷದಿಂದ ಉಚ್ಚಾಟಿಸುವಂತೆ ಕೇಂದ್ರ ಸಮಿತಿಗೆ ರಾಜ್ಯ ಬಿಜೆಪಿ ವರದಿ ನೀಡಿತ್ತು.

ಸ್ವಾಗತಾರ್ಹ: ‘ಎಸ್.ಟಿ ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಏನೆಲ್ಲ ಪಕ್ಷ ವಿರೋಧಿ ಚಟುವಟಿಕೆಗಳನ್ನು ಮಾಡಿದ್ದಾರೆ ಎಂಬುದು ಅವರಿಗೂ ಗೊತ್ತಿದೆ. ಇದು ನಮ್ಮ ಪಕ್ಷದ ಆಂತರಿಕ ವಿಚಾರ. ಉಚ್ಚಾಟನೆಯನ್ನು ನಾನು ಸ್ವಾಗತಿಸುತ್ತೇನೆ. ಬಿಜೆಪಿ ಅಧಿಕಾರಕ್ಕೆ ಬಂದಾಗ ಅವರಿಬ್ಬರಿಗೂ ಅವಕಾಶ ಸಿಕ್ಕಿತ್ತು. ಆದರೆ, ವಿಪಕ್ಷದಲ್ಲಿ ಕೂರಬೇಕಾದಾಗ ಅವರಿಗೆ ಕಷ್ಟ ಆಯಿತು’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.

ನಾನೀಗ ಫ್ರೀ ಬರ್ಡ್: ‘ಅತ್ಯಾಚಾರ ಮಾಡಿದವರನ್ನು ಉಚ್ಚಾಟನೆ ಮಾಡುವುದಿಲ್ಲ. ನಮ್ಮಂತವರನ್ನು ಉಚ್ಚಾಟನೆ ಮಾಡುತ್ತಾರೆ. ಪಕ್ಷದಿಂದ ಈ ಉಚ್ಚಾಟನೆಯನ್ನು ನಿರೀಕ್ಷಿಸಿದ್ದೆವು. ನನಗೆ ಶೇ.1ರಷ್ಟೂ ಬೇಸರ, ಅಸಮಾಧಾನ ಇಲ್ಲ. ಉಚ್ಚಾಟನೆ ಮಾಡಿದ್ದು ಖುಷಿಯಿದೆ. ಬಿಜೆಪಿಯಲ್ಲಿ ನನ್ನ ಪರವಾಗಿ ಮಾತನಾಡಲು ಯಾರಿಗೂ ಧೈರ್ಯವಿಲ್ಲ. ಉಚ್ಚಾಟನೆ ಯಾಕೆ ಮಾಡಿದ್ದಿರೆಂದು ಕೇಳುವುದಿಲ್ಲ. ನಾನೀಗ ಸ್ವತಂತ್ರ ಹಕ್ಕಿ(ಫ್ರೀ ಬರ್ಡ್) ಇನ್ನು ಫ್ರೀ ಆಗಿ ಓಡಾಡುತ್ತೇನೆ. ಮುಂದಿನ ನಡೆ ಬಗ್ಗೆ ಈಗ ಯೋಚನೆ ಮಾಡಿಲ್ಲ’

-ಎಸ್.ಟಿ.ಸೋಮಶೇಖರ್ ಯಶವಂತಪುರ ಕ್ಷೇತ್ರದ ಶಾಸಕ

ಉಳಿದವರ ಕತೆ ಏನು: ‘ನಮ್ಮನ್ನು ಬಿಜೆಪಿಯಿಂದ ಉಚ್ಚಾಟಿಸಿದ್ದು ಒಳ್ಳೆಯದೇ ಆಯಿತು. ನಾವೇನೂ ಪಕ್ಷ ವಿರೋಧಿ ಚಟುವಟಿಕೆ ನಡೆಸುತ್ತಿರಲಿಲ್ಲ. ಪಕ್ಷದಲ್ಲಿ ನಮ್ಮನ್ನು ಸಂಪೂರ್ಣ ಕಡೆಗಣಿಸಿತ್ತು. ಕ್ಷೇತ್ರದ ಹಾಗೂ ಕಾರ್ಯಕರ್ತರ ಹಿತದೃಷ್ಟಿಯಿಂದ ಕಾಂಗ್ರೆಸ್‍ಗೆ ಕೆಲವು ವಿಷಯಗಳಲ್ಲಿ ಬೆಂಬಲ ಸೂಚಿಸಿದ್ದೆವು. ನಮ್ಮನ್ನು ಪಕ್ಷ ವಿರೋಧಿ ಚಟುವಟಿಕೆಯಿಂದ ಉಚ್ಚಾಟಿಸುವುದಾದರೆ ಉಳಿದವರ ಕಥೆ ಏನು?’

-ಶಿವರಾಮ್‌ ಹೆಬ್ಬಾಳ್, ಯಲ್ಲಾಪುರ ಕ್ಷೇತ್ರದ ಶಾಸಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X