Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಸಿದ್ದರಾಮಯ್ಯ ಹೆಸರಿಗೆ ಮಸಿ ಬಳಿಯಲು...

ಸಿದ್ದರಾಮಯ್ಯ ಹೆಸರಿಗೆ ಮಸಿ ಬಳಿಯಲು ಯತ್ನಿಸಿದ ಬಿಜೆಪಿ-ಜೆಡಿಎಸ್‌ಗೆ ಮುಖಭಂಗ : ಎಂ.ಲಕ್ಷ್ಮಣ್

ಮುಡಾ ಪ್ರಕರಣದಲ್ಲಿ ಸಿಎಂಗೆ ಲೋಕಾಯುಕ್ತ ಕ್ಲೀನ್​ಚಿಟ್​

ವಾರ್ತಾಭಾರತಿವಾರ್ತಾಭಾರತಿ19 Feb 2025 10:12 PM IST
share
ಸಿದ್ದರಾಮಯ್ಯ ಹೆಸರಿಗೆ ಮಸಿ ಬಳಿಯಲು ಯತ್ನಿಸಿದ ಬಿಜೆಪಿ-ಜೆಡಿಎಸ್‌ಗೆ ಮುಖಭಂಗ : ಎಂ.ಲಕ್ಷ್ಮಣ್

ಮೈಸೂರು : ಮುಡಾ ವಿಷಯ ಮುಂದಿಟ್ಟುಕೊಂಡು ಸ್ನೇಹಮಯಿ ಕೃಷ್ಣ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿಗೆ ಮಸಿ ಬಳಿಯಲು ಯತ್ನಿಸಿದ್ದ ಬಿಜೆಪಿ ಮತ್ತು ಜೆಡಿಎಸ್‌ಗೆ ಲೋಕಾಯುಕ್ತ ವರದಿಯಿಂದ ಮುಖಭಂಗವಾಗಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಹೇಳಿದರು.

ಬುಧವಾರ ಸಂಜೆ ಮುಡಾ ಕಚೇರಿ ಎದುರು ಸತ್ಯಮೇವ ಜಯತೆ ಫ್ಲೆಕ್ಸ್ ಹಿಡಿದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಡಾದಲ್ಲಿ ಬದಲಿ ನಿವೇಶನಗಳ ಅಕ್ರಮ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಲ್ಲಿಸಿದ್ದ ದೂರಿಗೆ ಸಾಕ್ಷ್ಯಧಾರಗಳ ಕೊರತೆ ಇದೆ ಎಂದು ಲೋಕಾಯುಕ್ತ ಅಧಿಕಾರಿಗಳು ಹೇಳಿರುವುದು ಸ್ವಾಗತಾರ್ಹ ಬೆಳವಣಿಗೆಯಾಗಿದೆ ಎಂದು ಹೇಳಿದರು.

ನಾವು ಈ ಪ್ರಕರಣ ಸಂಬಂಧ ರಾಜ್ಯಪಾಲರು ತನಿಖೆಗೆ ಆದೇಶ ಮಾಡಿದ ಮೊದಲ ದಿನದಿಂದಲೇ ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ. ಕೇವಲ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆದರಿಸಲು, ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಮತ್ತು ಜೆಡಿಎಸ್ ಬಾಡಿಗೆ ಕಲಾವಿದರ ಮೂಲಕ ಹೂಡಿದ ಸಂಚು ಎಂದು ಹೇಳುತ್ತಲೇ ಬಂದಿದ್ದೇವೆ. ಇದೀಗ ಸತ್ಯಾಂಶ ಬಯಲಾಗಿದೆ. ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ ಆದಿಯಾಗಿ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಬೆಂಗಳೂರಿನಿಂದ ಮೈಸೂರಿಗೆ ಯಾರಿಗೂ ಉಪಯೋಗವಾಗದ ವ್ಯರ್ಥ ಪಾದಯಾತ್ರೆ ಮಾಡಿದರು ಎಂದು ಲಕ್ಷ್ಮಣ್ ವ್ಯಂಗ್ಯವಾಡಿದರು.

ಲೋಕಾಯುಕ್ತ ತನಿಖಾಧಿಕಾರಿ ಉದೇಶ್ ಅವರು ದೂರುದಾರ ಸ್ನೇಹಮಯಿ ಕೃಷ್ಣ ಅವರಿಗೆ ನೀಡಿರುವ ನೋಟಿಸ್‌ನಲ್ಲಿ ಇದೊಂದು ಸಿವಿಲ್ ಸ್ವರೂಪದ ಪ್ರಕರಣ, ಸಾಕ್ಷ್ಯಾಧಾರಗಳ ಕೊರತೆ ಇದೆ, ತನಿಖೆ ನಡೆಸಲು ತಕ್ಕುದ್ದಲ್ಲ, ಕಾನೂನಿನ ತಪ್ಪು ತಿಳುವಳಿಕೆಯಿಂದ ದೂರು ನೀಡಲಾಗಿದೆ. ಕ್ರಮ ಜರುಗಿಸತಕ್ಕದ್ದಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಇದನ್ನು ಸ್ನೇಹಮಯಿ ಕೃಷ್ಣ ಗೌರವಿಸುವದನ್ನು ಬಿಟ್ಟು ತನಿಖಾಧಿಕಾರಿ ವಿರುದ್ಧವೇ ಹೇಳಿಕೆ ನೀಡಿದ್ದಾರೆ. ಇವರ ವಿರುದ್ಧ ತನಿಖಾಧಿಕಾರಿಗಳು ದೂರು ದಾಖಲಿಸಬೇಕು ಎಂದರು.

ಲೋಕಾಯುಕ್ತ ಒಂದು ಸ್ವಾಯುತ್ತ ಸಂಸ್ಥೆಯಾಗಿದೆ. ರಾಜ್ಯಪಾಲರೇ ತನಿಖೆಗೆ ಆದೇಶಿಸಿದ್ದಾರೆ, ಆದಾಗ್ಯೂ ತನಿಖಾ ವರದಿಯನ್ನು ದೂರುದಾರರು ಗೌರವಿಸುತ್ತಿಲ್ಲ. ಇನ್ನು ಮುಂದಾದರೂ ಕೃಷ್ಣ ಅವರು ಸುಳ್ಳು ಆರೋಪಗಳನ್ನು ಮಡುವುದನ್ನು ಬಿಟ್ಟು ನ್ಯಾಯಯುತವಾಗಿ ಹೋರಾಟ ಮಾಡಲಿ ಎಂದು ಸಲಹೆ ನೀಡಿದರು.

ಇದೇ ವೇಳೆ ಜಿಲ್ಲಾ ಮಾಧ್ಯಮ ವಕ್ತಾರ ಕೆ.ಮಹೇಶ್ ಜೊತೆಯಲ್ಲಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X