Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಮೋದಿ, ಅಮಿತ್ ಶಾರಿಂದ ನೈಜ ಮತದಾರರ ಹಕ್ಕು...

ಮೋದಿ, ಅಮಿತ್ ಶಾರಿಂದ ನೈಜ ಮತದಾರರ ಹಕ್ಕು ಕಸಿಯುವ ಕೆಲಸ: ಬಿ.ಕೆ.ಹರಿಪ್ರಸಾದ್ ಆರೋಪ

ಬೆಂಗಳೂರು: ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಧರಣಿ

ವಾರ್ತಾಭಾರತಿವಾರ್ತಾಭಾರತಿ26 Sept 2026 1:05 PM IST
share
ಮೋದಿ, ಅಮಿತ್ ಶಾರಿಂದ ನೈಜ ಮತದಾರರ ಹಕ್ಕು ಕಸಿಯುವ ಕೆಲಸ: ಬಿ.ಕೆ.ಹರಿಪ್ರಸಾದ್ ಆರೋಪ

ಬೆಂಗಳೂರು, ಸೆ.26: 2024ರಲ್ಲಿ ಬಿಜೆಪಿ ಸರಕಾರ ಬಂದ ನಂತರ ಆರು ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಗೆದ್ದಿದೆ. ಬಿಹಾರದಲ್ಲಿ 64 ಲಕ್ಷ, ಪಶ್ಚಿಮ ಬಂಗಾಳದಲ್ಲಿ 91 ಲಕ್ಷ ಮತಗಳನ್ನು ಕೈಬಿಟ್ಟಿದ್ದು, ಪಶ್ಚಿಮ ಬಂಗಾಳದಲ್ಲಿ 38 ಲಕ್ಷ ಮತದಾರರ ಹೆಸರನ್ನು ನೋಟೀಸ್ ಕೊಟ್ಟು ತಡೆ ಹಿಡಿಯಲಾಗಿದೆ. ಇವರ ಮತದಾನದ ಹಕ್ಕನ್ನು ಸಂಪೂರ್ಣವಾಗಿ ಕಸಿದುಕೊಳ್ಳಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ.

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಕೆಪಿಸಿಸಿ ವತಿಯಿಂದ ಫ್ರೀಡಂ ಪಾರ್ಕ್ ನಲ್ಲಿ ಹಮ್ಮಿಕೊಂಡಿದ್ದ ಧರಣಿಯನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು.

ಕೇಂದ್ರ ಚುನಾವಣಾ ಆಯೋಗದಲ್ಲಿ ಮೂವರು ಆಯುಕ್ತರು ಇರುತ್ತಾರೆ. ಇಲ್ಲಿ ನಿರ್ಧಾರ ಕೈಗೊಳ್ಳುವಾಗ ಬಹುಮತ ಇರುವ ತೀರ್ಮಾನ ಕೈಗೊಳ್ಳಬೇಕು. ಆದರೆ ಕಳೆದ 10 ತಿಂಗಳಲ್ಲಿ 14 ಬಾರಿ ಇಬ್ಬರು ಆಯುಕ್ತರು ಭಿನ್ನಮತ ವ್ಯಕ್ತಪಡಿಸಿದ್ದರು. ಆದರೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಏಕಪಕ್ಷೀಯವಾಗಿ ತೀರ್ಮಾನ ಕೈಗೊಂಡು ಫಾರಂ 6ಕ್ಕೆ ತಿದ್ದುಪಡಿ ತರಲಾಗಿದೆ. ನೈಜ ಮತದಾರರ ಹಕ್ಕು ಕಸಿಯುವ ಕೆಲಸ ಮೋದಿ ಹಾಗೂ ಶಾ ಮಾಡುತ್ತಿದ್ದಾರೆ ಎಂದು ದೂರಿದರು.

ಜ್ಞಾನೇಶ್ ಕುಮಾರ್ ಬೇರೆ ಆಯುಕ್ತರ ಭಿನ್ನಮತಕ್ಕೆ ಮನ್ನಣೆ ನೀಡುತ್ತಿಲ್ಲ. ಅವರ ಜತೆಗೆ ಇನ್ನಿಬ್ಬರು ಬೇರೆ ಗೌಪ್ಯ ಆಯುಕ್ತರು ಎಂದರೆ ಅಮಿತ್ ಶಾ ಹಾಗೂ ನರೇಂದ್ರ ಮೋದಿ. ಇವರ ಮಾತು ಕೇಳಿಕೊಂಡು ದೇಶದಲ್ಲಿ 13 ಕೋಟಿ ಮತದಾರರ ಹೆಸರನ್ನು ಮತಪಟ್ಟಿಯಿಂದ ಕೈಬಿಡಲಾಗಿದೆ. ಈ ದೇಶ ಸ್ವತಂತ್ರವಾಗಿರಬೇಕು ಎಂದರೆ ಸುಸ್ಥಿರ ಪ್ರಜಾಪ್ರಭುತ್ವ ಇರಬೇಕು. ಅದಕ್ಕೆ ಚುನಾವಣಾ ಆಯೋಗ ರಚಿಸಲಾಯಿತು. 75 ವರ್ಷಗಳ ಕಾಲ ಚುನಾವಣಾಧಿಕಾರಿಗಳು ಯಾವುದೇ ಅಕ್ರಮ ಮಾಡಿರಲಿಲ್ಲ. 2014ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಆಯೋಗದ ಮೂಲಕ ಚುನಾವಣೆಯಲ್ಲಿ ಅಕ್ರಮ ನಡೆಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಾಗಿ ನಮ್ಮ ಪೂರ್ವಜರು ಕೊಟ್ಟಿರುವ ಸ್ವಾತಂತ್ರ್ಯ, ಪ್ರಜಾಪ್ರಭುತ್ವ ವ್ಯವಸ್ಥೆ ಉಳಿಸಿಕೊಳ್ಳಲು ಹೋರಾಟ ಮಾಡಬೇಕು ಎಂದು ಬಿ.ಕೆ.ಹರಿಪ್ರಸಾದ್ ಕರೆ ನೀಡಿದರು.

ಈ ದೇಶದಲ್ಲಿ ಹುಟ್ಟಿರುವ ನಾಗರಿಕರ ಹಕ್ಕನ್ನು ಕಸಿಯಲು ಯಾರಿಗೂ ಹಕ್ಕಿಲ್ಲ. ಹರ್ಯಾಣ, ಮಹಾರಾಷ್ಟ್ರ ಸೇರಿದಂತೆ ಎಲ್ಲಾ ರಾಜ್ಯಗಳಲ್ಲಿ ಅರ್ಹ ಮತದಾರರನ್ನು ಕೈಬಿಡಲಾಗಿದೆ. ನಮ್ಮ ರಾಜ್ಯದಲ್ಲಿ 1.07 ಕೋಟಿ ಮತದಾರರನ್ನು ಮತಪಟ್ಟಿಯಿಂದ ಕೈಬಿಡಲಾಗಿದ್ದು, ನಕಲಿ ಮತದಾರರ ನೋಂದಣಿ 70 ಲಕ್ಷ, ಇತರ 38 ಲಕ್ಷ ಎಂದು ವರ್ಗೀಕರಣ ಮಾಡಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಅರ್ಹ ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಹುಲ್ ಗಾಂಧಿ 2024ರಿಂದಲೇ ಮತಗಳ್ಳತನ ವಿಚಾರವಾಗಿ ಬಹಳ ಗಂಭೀರ ಆರೋಪ ಮಾಡುತ್ತಿದ್ದಾರೆ. ಇದೇ ಫ್ರೀಡಂ ಪಾರ್ಕ್ ನಲ್ಲಿ ಮಹದೇವಪುರ, ಆಳಂದ, ಮಹಾರಾಷ್ಟ್ರದಲ್ಲಿ ನಡೆದ ಮತಗಳ್ಳತನ ವಿರುದ್ಧ ಧ್ವನಿ ಎತ್ತಿದ್ದರು. ಚುನಾವಣಾ ಆಯುಕ್ತರು ಯಾವ ರೀತಿ ಅಕ್ರಮಗಳ ಮೂಲಕ ಬಿಜೆಪಿಗೆ ನೆರವಾಗುತ್ತಿದ್ದಾರೆ ಎಂದು ವಿವರಿಸಿದ್ದರು. ಯಾರೂ ಅದನ್ನು ಆರಂಭದಲ್ಲಿ ಪರಿಗಣಿಸಿರಲಿಲ್ಲ. ನಂತರ ಚುನಾವಣಾ ಆಯೋಗದ ಆಯುಕ್ತರು ರಾಹುಲ್ ಗಾಂಧಿ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದರು ಎಂದು ಅವರು ಹೇಳಿದರು..

ಪ್ರಜಾಪ್ರಭುತ್ವದ ಭದ್ರ ಬುನಾದಿ ಮತದಾರರ ಪಟ್ಟಿ. ಈ ದೇಶದ ನಾಗರಿಕರಿಗೆ ಮತ ಚಲಾಯಿಸುವ ಹಕ್ಕಿದೆ. ಐದು ವರ್ಷಕ್ಕೊಮ್ಮೆ ನಮಗೆ ಬೇಕಾದ ಸರಕಾರ ಆರಿಸುವ ಶಕ್ತಿಯನ್ನು ಸಂವಿಧಾನ ನೀಡಿದೆ. ಇದನ್ನು ಬುಡಮೇಲು ಮಾಡುವ ಪ್ರಯತ್ನ ಬಿಜೆಪಿ ಮಾಡುತ್ತಿದೆ ಎಂದು ಆರೋಪಿಸಿದರು.

ಈ ದೇಶದಲ್ಲಿ ಹುಟ್ಟಿ, ಇಲ್ಲಿ ವ್ಯಾಸಂಗ ಮಾಡಿರುವ ಯುವ ಪೀಳಿಗೆಯ ಹಕ್ಕು ಕಸಿಯುತ್ತಿದ್ದಾರೆ. ಚುನಾವಣೆ ಗೆದ್ದ ನಂತರ ದೇಶದಲ್ಲಿ ಮೋದಿಯವರ ಬಿರುಗಾಳಿ, ಅಮಿತ್ ಶಾ ಚಾಣಕ್ಯತನ ಇದೆ ಎಂದು ಹೇಳುತ್ತಿದ್ದರು. ಇಲ್ಲಿ ಯಾವ ಬಿರುಗಾಳಿಯೂ ಇಲ್ಲ. ಚಾಣಕ್ಯತನವೂ ಇಲ್ಲ. ಚುನಾವಣಾ ಆಯೋಗದ ಮೂಲಕ ಮತಗಳ್ಳತನ ಮಾಡುವುದು ಚಾಣಕ್ಯತನವಲ್ಲ. ಈ ಚುನಾವಣಾ ಆಯೋಗದ ಕುತಂತ್ರ, ಅವ್ಯವಹಾರಗಳಿಗೆ ಕಡಿವಾಣ ಹಾಕಲು ನ್ಯಾಯಾಂಗದ ಪಾತ್ರ ವಹಿಸಬೇಕು. ಇಲ್ಲವಾದರೆ ದೇಶದ ಪ್ರಜಾಪ್ರಭುತ್ವ, ಸಂವಿಧಾನ ಬುಡಮೇಲು ಮಾಡುತ್ತಾರೆ. ಹೀಗಾಗಿ ಅರ್ಹ ಮತದಾರರನ್ನು ಮತದಾರರ ಪಟ್ಟಿಯಿಂದ ಕೈಬಿಡಬಾರದು ಎಂದು ಒತ್ತಾಯಿಸಿದರು.

2023ರಲ್ಲಿ ಕಾನೂನಿಗೆ ತಿದ್ದುಪಡಿ ತಂದು ಚುನಾವಣಾ ಆಯೋಗದ ಆಯುಕ್ತರ ಆಯ್ಕೆಯಲ್ಲಿ ಮುಖ್ಯ ನ್ಯಾಯಾಧೀಶರನ್ನು ಕೈಬಿಟ್ಟು ಕೇಂದ್ರ ಸಚಿವರನ್ನು ಕೂರಿಸಿದ್ದಾರೆ. ಇದರಿಂದ ನಮಗೆ ನ್ಯಾಯ ಸಿಗುವುದಿಲ್ಲ. ನಮ್ಮ ಹೋರಾಟ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ ಮುಂದುವರಿಯಲಿದ್ದು, ಸೋಮವಾರದಿಂದ ಜಿಲ್ಲಾ ಮಟ್ಟದಲ್ಲಿ ಈ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದರು.

Tags

ModiAmit ShahSnatching Genuine VotersB.K. Hariprasad
share
ವಾರ್ತಾಭಾರತಿ
ವಾರ್ತಾಭಾರತಿ
Next Story
X