Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. 2024ರ ಚುನಾವಣೆಯಲ್ಲಿ ಮೋದಿ ಮತಗಳ್ಳತನ...

2024ರ ಚುನಾವಣೆಯಲ್ಲಿ ಮೋದಿ ಮತಗಳ್ಳತನ ಮಾಡಿ ಪ್ರಧಾನಿಯಾಗಿದ್ದಾರೆ: ಮಲ್ಲಿಕಾರ್ಜುನ ಖರ್ಗೆ ಆರೋಪ

ವಾರ್ತಾಭಾರತಿವಾರ್ತಾಭಾರತಿ8 Aug 2025 3:09 PM IST
share
2024ರ ಚುನಾವಣೆಯಲ್ಲಿ ಮೋದಿ ಮತಗಳ್ಳತನ ಮಾಡಿ ಪ್ರಧಾನಿಯಾಗಿದ್ದಾರೆ: ಮಲ್ಲಿಕಾರ್ಜುನ ಖರ್ಗೆ ಆರೋಪ

ಬೆಂಗಳೂರು: ಕಳೆದ (2024ರ) ಚುನಾವಣೆಯಲ್ಲಿ ನರೇಂದ್ರ ಮೋದಿ ಮತಗಳ್ಳತನ ಮಾಡಿ ಈ ದೇಶದ ಪ್ರಧಾನ ಮಂತ್ರಿಯಾಗಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.

ಅವರು ಮತಗಳ್ಳತದದ ವಿರುದ್ಧ ಸಂಸತ್ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ನೇತೃತ್ವತದಲ್ಲಿ ನಗರದ ಫ್ರೀಡಂ ಪಾರ್ಕ್ ನಲ್ಲಿಂದು ಹಮ್ಮಿಕೊಂಡಿದ್ದ ನಮ್ಮ ಮತ, ನಮ್ಮ ಹಕ್ಕು, ನಮ್ಮ ಹೋರಾಟ ಪ್ರತಿಭಟನೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ರಾಹುಲ್ ಗಾಂಧಿ ಸತತ ಆರು ತಿಂಗಳ ಕಾಲ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಮಹದೇವಪುರ ವಿಧಾನಸಭಾ ಕ್ಷೇತ್ರದ 6.60 ಲಕ್ಷ ಮತದಾರರ ಮಾಹಿತಿಯನ್ನು ಪರಿಶೀಲನೆ ಮಾಡಿ ಮತದಾನದ ಅಕ್ರಮವನ್ನು ಬಯಲಿಗೆಳೆದಿದ್ದಾರೆ ಎಂದು ಖರ್ಗೆ ಹೇಳಿದರು.

ಕಳೆದ ಚುನಾವಣೆ ಜನರಿಗೆ ದ್ರೋಹ ಮಾಡಿದ ಚುನಾವಣೆ. ದೇಶದಲ್ಲಿ ಸಂವಿಧಾನ ಉಳಿಸಿ, ವಯಸ್ಕರಿಗೆ ಸಿಕ್ಕಿರುವ ಮತದಾನದ ಹಕ್ಕು ಹಾಗೂ ಪ್ರಜಾಪ್ರಭುತ್ವ ರಕ್ಷಣೆ ಮಾಡುವುದು ನಮ್ಮ ಪ್ರಯತ್ನ. ಆದರೆ ಮೋದಿ ಹಾಗೂ ಅಮಿತ್ ಶಾ ಜನ ಮತ ನೀಡದಿದ್ದರೂ ಮತಗಳ್ಳತನದ ಮೂಲಕ ಚುನಾವಣೆ ಗೆಲ್ಲುವ ಪ್ರಯತ್ನ ಮಾಡುತ್ತಿದ್ದಾರೆ ಎಂದವರು ದೂರಿದರು.

ಈ ಮತಗಳ್ಳತನಕ್ಕೆ ಚುನಾವಣಾ ಆಯೋಗವನ್ನೂ ಬಳಸಿಕೊಳ್ಳುತ್ತಿದ್ದಾರೆ. ಇದು ಕಳ್ಳತನದ ಸರ್ಕಾರ. ಇದಕ್ಕೆ ನೈತಿಕ ಬಲ ಇಲ್ಲ. ಇವರು ಸರ್ಕಾರದಲ್ಲಿ ಮುಂದುವರಿಯಲು ಹಕ್ಕಿಲ್ಲ. ಮೋದಿ ದೇಶದ ಅಭಿವೃದ್ಧಿಗೆ ಎಲ್ಲಾ ಕೆಲಸ ಮಾಡುತ್ತಿರುವುದಾಗಿ ಹೇಳುತ್ತಾರೆ. ಇದು ಅಪ್ಪಟ ಸುಳ್ಳು. ದೇಶದ ಎಲ್ಲಾ ರಾಜ್ಯಗಳಲ್ಲಿ ನಾವು ಇಂತಹ ಚುನಾವಣಾ ಅಕ್ರಮಗಳನ್ನು ಹುಡುಕಿ ತೆಗೆಯುತ್ತಿದ್ದೇವೆ. ಮಹಾರಾಷ್ಟ್ರ, ಉತ್ತರ ಪ್ರದೇಶ, ರಾಜಸ್ಥಾನ, ಬಿಹಾರ, ಮಧ್ಯಪ್ರದೇಶ ಸೇರಿ ಎಲ್ಲೆಡೆ ಮತದಾನದ ಹಕ್ಕನ್ನು ದುರ್ಬಳಕೆ ಮಾಡಿಕೊಂಡು, ನಕಲಿ ಮತದಾನದ ಮೂಲಕ ಮೋದಿ ದೇಶ ಆಳುತ್ತಿದ್ದಾರೆ ಎಂದು ಹೇಳಿದರು.

ಆರು ವರ್ಷಗಳ ಹಿಂದೆ 2019ರಲ್ಲಿ ನಾನು ಮೊದಲ ಬಾರಿಗೆ ಸೋತಾಗಲೇ ನಾನು ಹೇಳಿದ್ದೆ. ನನ್ನ ಜೀವನದಲ್ಲಿ 12 ಚುನಾವಣೆ ಗೆದ್ದ ನಾನು ಸೋಲು ಕಂಡ ಏಕೈಕ ಚುನಾವಣೆ ಅದಾಗಿತ್ತು. ಆಗಲೂ ಇದೇ ರೀತಿ ಅಕ್ರಮ ಮಾಡಿದ್ದರು. ಆದರೆ ನಮಗೆ ಆಗ ಇದರ ಅರಿವಾಗಿರಲಿಲ್ಲ. ಆಗ ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲಿ ನಕಲಿ ಮತದಾನ ಮಾಡಿ ನಮ್ಮನ್ನು ಟಾರ್ಗೆಟ್ ಮಾಡಿದ್ದರು. ಈಗ ಎಲ್ಲವೂ ಬಯಲಿಗೆ ಬಂದಿದೆ. ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ ಬಹಳ ಸೂಕ್ಷ್ಮವಾಗಿ ಈ ಎಲ್ಲಾ ಅಕ್ರಮವನ್ನು ಹೊರಗೆ ತಂದಿದ್ದಾರೆ. ಹೀಗಾಗಿ ಪಕ್ಷದ ನಾಯಕರು ಮತದಾನದ ಬಗ್ಗೆ ಗಮನಹರಿಸಬೇಕು. ಇದು ನಿಮ್ಮ ಜವಾಬ್ದಾರಿಯಾಗಿದೆ ಎಂದು ಖರ್ಗೆ ಹೇಳಿದರು.

ಮೋದಿ ಬೇರೆ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರಿಗೆ ಈ.ಡಿ,, ಸಿಬಿಐ, ಐಟಿ ಮೂಲಕ ಬೆದರಿಸಿ ಸರ್ಕಾರ ರಚಿಸಿದ್ದಾರೆ. ಅನೇಕ ರಾಜ್ಯಗಳಲ್ಲಿ ಬಹುಮತ ಇಲ್ಲದಿದ್ದರೂ ಪಕ್ಷಗಳನ್ನು ಒಡೆದು, ಶಾಸಕರನ್ನು ಖರೀದಿ ಮಾಡಿ ಸರ್ಕಾರ ಮಾಡುತ್ತಿದ್ದಾರೆ. ಈ ಹಿಂದೆ ಕರ್ನಾಟಕದಲ್ಲಿ, ಮಹಾರಾಷ್ಟ್ರ, ಗೋವಾ, ಮಣಿಪುರ ಸೇರಿ ಎಲ್ಲ ಕಡೆ ಅದೇ ಆಗಿದೆ. ಇವವರು ಎಂದೂ ಈ ರಾಜ್ಯಗಳಲ್ಲಿ ಚುನಾವಣೆ ಗೆದ್ದು ಅಧಿಕಾರಕ್ಕೆ ಬರಲಿಲ್ಲ. ಈಗಲೂ ಅದೇ ಚಾಳಿ ಮುಂದುವರಿಸುತ್ತಿದ್ದಾರೆ. ನಾವು ಅವರಿಗೆ ಬುದ್ಧಿ ಕಲಿಸಬೇಕಿದೆ ಎಂದು ಕರೆ ನೀಡಿದರು.

2024ರ ಚುನಾವಣೆಯನ್ನು ಮೋದಿ ಅಂಡ್ ಕಂಪನಿ ಗೆದ್ದಿಲ್ಲ. ಕಳ್ಳತನದಿಂದ ಚುನಾವಣೆ ಗೆದ್ದಿದ್ದು, ಈ ಸರ್ಕಾರ ಬಹುಕಾಲ ಉಳಿಯುವುದಿಲ್ಲ. ಅವರ ಅಕ್ರಮ ಹೊರಗೆ ತಂದು ಜನರಿಂದ ಛೀಮಾರಿ ಹಾಕಿಸುತ್ತೇವೆ. ಜನ ಬೆಂಬಲ ಇಲ್ಲದ ಪ್ರಧಾನಮಂತ್ರಿ ಇಂದು ನಮ್ಮ ದೇಶದಲ್ಲಿದ್ದಾರೆ. ಅವರನ್ನು ಕೆಳಗಿಳಿಸುವುದಷ್ಟೇ ಅಲ್ಲ, ಅವರಿಗೆ ಬುದ್ಧಿ ಕಲಿಸಬೇಕು ಎಂದರು.

ಅವರು ದೇಶದ ಆರ್ಥಿಕತೆ ಕೆಡಿಸುತ್ತಿದ್ದು, ಜನ ನೆಮ್ಮದಿ ಕಳೆದುಕೊಳ್ಳುವಂತಾಗಿದೆ. ಅವರು ನೋಟು ರದ್ದತಿ ಸೇರಿದಂತೆ ಅನೇಕ ತಪ್ಪು ಮಾಡಿ ದೇಶವನ್ನು ನಾಶ ಮಾಡಿದ್ದಾರೆ. ಈಗ ಮತ್ತೊಂದು ತಪ್ಪು ಮಾಡಿ ದೇಶವನ್ನು ಹಾಳು ಮಾಡುತ್ತಿದ್ದಾರೆ. ಎಲ್ಲರೂ ಈ ಚುನಾವಣೆ ಕಳ್ಳತನ ಕಂಡು ಹಿಡಿದು ಹೋರಾಟ ಮಾಡಬೇಕು ಎಂದು ಖರ್ಗೆ ಕರೆ ನೀಡಿದರು.

ಸೋಮವಾರ ಎಲ್ಲಾ ಸಂಸದರು ಕೇಂದ್ರ ಚುನಾವಣಾ ಆಯೋಗದ ಮುಂದೆ ಪ್ರಸ್ತಾವ ನೀಡುತ್ತೇವೆ. ಆಮೂಲಕ ನಿಮ್ಮ ಸಮ್ಮುಖದಲ್ಲಿ ಇಂತಹ ಅಕ್ರಮ ನಡೆದಿದೆ, ನೀವು ಇದಕ್ಕೆ ಬೆಂಬಲ ನೀಡುತ್ತಿದ್ದು, ಅಧಿಕಾರದಲ್ಲಿ ಮುಂದುವರಿಯಲು ನೀವು ಅರ್ಹರಲ್ಲ ಎಂದು ಸಂದೇಶ ನೀಡುತ್ತೇವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಇಂಡಿಯಾ ಮೈತ್ರಿಕೂಟ ನಾಯಕರನ್ನು ಕರೆದು ಒಗ್ಗಟ್ಟಿನ ಸಂದೇಶ ರವಾನಿಸಿದ್ದೇವೆ. ನಾವು ಒಂದಾಗಿದ್ದರೆ ಮಾತ್ರ ಮೋದಿಯವರ ಕಳ್ಳಾಟ ತಡೆಯಲು ಸಾಧ್ಯ. ಇವರನ್ನು ಅಧಿಕಾರದಿಂದ ಇಳಿಸುವುದು ಅತ್ಯಂತ ಮಹತ್ವದ ವಿಚಾರ. ಬಿಜೆಪಿಯವರು ಅಧಿಕಾರ ಇದೆ ಎಂದು ಶಿಕ್ಷಣ ಕ್ಷೇತ್ರದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದವರು ದೂರಿದರು.

ನಮ್ಮ ಮತ ಕಸಿದುಕೊಂಡ ನಂತರ ನಮ್ಮ ಅಸ್ತಿತ್ವವೇ ಇರುವುದಿಲ್ಲ. ಹೀಗಾಗಿ ಆಗಸ್ಟ್ 9, 1942ರಂದು ಮಹಾತ್ಮಾ ಗಾಂಧಿ ಅವರು ಕ್ವಿಟ್ ಇಂಡಿಯಾ ಚಳವಳಿಯನ್ನು ಆರಂಭಿಸಿದರು. ಅದೇ ರೀತಿ ನಮ್ಮ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಣೆಗೆ ನಾವು ‘ಮಾಡು ಇಲ್ಲವೇ ಮಡಿ’ಎಂಬ ಧ್ಯೇಯದೊಂದಿಗೆ ಹೋರಾಟ ಮಾಡಬೇಕಾಗಿದೆ ಎಂದು ಖರ್ಗೆ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X