Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಸಚಿವ ಝಮೀರ್ ಅಹ್ಮದ್‌ ರಾಜೀನಾಮೆಗೆ...

ಸಚಿವ ಝಮೀರ್ ಅಹ್ಮದ್‌ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಸಭಾತ್ಯಾಗ

ವಾರ್ತಾಭಾರತಿವಾರ್ತಾಭಾರತಿ14 Aug 2026 6:06 PM IST
share
ಸಚಿವ ಝಮೀರ್ ಅಹ್ಮದ್‌ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಸಭಾತ್ಯಾಗ

ಬೆಂಗಳೂರು : ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಧ್ವಜಾರೋಹಣ ಹೊಣೆಗಾರಿಕೆ ನೀಡಿದ್ದು, ಹಾಜರಾಗಲು ಸಾಧ್ಯವಾಗದ ಕಾರಣ ವಿನಾಯಿತಿ ಕೋರಿರುವ ವಸತಿ ಸಚಿವ ಬಿ.ಝಡ್. ಝಮೀರ್ ಅಹ್ಮದ್ ಖಾನ್ ಅವರಿಂದ ರಾಜೀನಾಮೆ ಪಡೆಯಬೇಕೆಂದು ಆಗ್ರಹಿಸಿ ಬಿಜೆಪಿ ಸದಸ್ಯರು ಸಭಾತ್ಯಾಗ ಮಾಡಿದರು.

ಶುಕ್ರವಾರ ವಿಧಾನಸಭೆಯ ಕಲಾಪದಲ್ಲಿ ಬಿಜೆಪಿ ಸದಸ್ಯ ವಿ.ಸುನೀಲ್ ಕುಮಾರ್ ವಿಷಯ ಪ್ರಸ್ತಾಪಿಸಿ, ‘ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಮಯ ಇಲ್ಲ ಎಂದು ಒಬ್ಬ ಸಚಿವರು ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ. ಅದನ್ನು ಒಪ್ಪಿಕೊಂಡು ಸಿಎಂ ಜಿಲ್ಲಾ ಉಸ್ತುವಾರಿ ಬದಲಾವಣೆ ಮಾಡಿದ್ದಾರೆ. ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ಮಾಡಲು ಸಮಯ ಇಲ್ಲ ಎನ್ನುವ ಸಚಿವರನ್ನು ಸಂಪುಟದಲ್ಲಿ ಉಳಿಸಿಕೊಳ್ಳುವ ಅಗತ್ಯ ಏನು?’ ಎಂದು ಪ್ರಶ್ನಿಸಿದರು.

ಇದಕ್ಕೆ ಬಿಜೆಪಿಯ ಸದಸ್ಯರಾದ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಸೇರಿದಂತೆ ಇನ್ನಿತರರು ಧ್ವನಿಗೂಡಿದರು. ಆಗ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿ, ‘ಸಚಿವರ ಪತ್ರವನ್ನು ನೀವು ಅರ್ಥೈಸಿಕೊಂಡಿರುವ ರೀತಿ ಸರಿಯಿಲ್ಲ. ತಮಗೆ ನೀಡಿರುವ ಜಿಲ್ಲೆಯ ಉಸ್ತುವಾರಿ ಬದಲು ಬೇರೆ ಜಿಲ್ಲೆಯ ಉಸ್ತುವಾರಿ ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ. ಅದರ ಅರ್ಥ ಅವರು ರಾಷ್ಟ್ರಧ್ವಜಾರೋಹಣಕ್ಕೆ ಹೋಗುವುದಿಲ್ಲ ಎಂದು ಹೇಳಿಲ್ಲ. ಆರೋಗ್ಯ ಸಮಸ್ಯೆ ಇರುವ ಕಾರಣಕ್ಕೆ ಬದಲಾವಣೆ ಕೇಳಿದ್ದು, ಸಿಎಂ ಅದಕ್ಕೆ ಸಮ್ಮತಿಸಿ, ಬದಲಾವಣೆ ಮಾಡಿದ್ದಾರೆ. ಸರಕಾರ ಪರ್ಯಾಯ ವ್ಯವಸ್ಥೆ ಮಾಡಿದೆ, ಜಿಲ್ಲೆಯಲ್ಲಿ ಧ್ವಜಾರೋಹಣವನ್ನಂತೂ ನಿಲ್ಲಿಸಿಲ್ಲ ಎಂದು ಸಮರ್ಥಿಸಿಕೊಂಡರು.

ಆಡಳಿತ ಪಕ್ಷದ ಸದಸ್ಯ ಡಾ.ಎಚ್.ಡಿ.ರಂಗನಾಥ್ ಮಾತನಾಡಿ, ‘ವಿರೋಧ ಪಕ್ಷದವರು ಎಲ್ಲ ವಿಚಾರಗಳಲ್ಲೂ ರಾಜಕೀಯ ಮಾಡುತ್ತಿದ್ದಾರೆ. ಸಚಿವರು ತಮ್ಮ ವೈಯಕ್ತಿಕ ಸಮಸ್ಯೆ ಕಾರಣಕ್ಕೆ ಬದಲಾವಣೆ ಕೇಳಿದ್ದಾರೆ. ಅದನ್ನು ದೊಡ್ಡದು ಮಾಡುವ ಅಗತ್ಯ ಇಲ್ಲ’ ಎಂದರು. ಇದಕ್ಕೆ ಆಡಳಿತ ಪಕ್ಷದ ಕೆಲ ಶಾಸಕರು ಧ್ವನಿಗೂಡಿಸಿದರು.

ಇತ್ತ ವಿಧಾನಸಭೆಯ ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ್, ಡಾ.ಸಿ.ಎನ್.ಅಶ್ವಥ ನಾರಾಯಣ ಸೇರಿದಂತೆ ಮತ್ತಿತರರು ಸಚಿವರ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿ, ಧ್ವಜಾರೋಣಕ್ಕೆ ಪರ್ಯಾಯ ವ್ಯವಸ್ಥೆ ಮಾಡುವ ಬದಲು ಸಚಿವರನ್ನೇ ಬದಲಾವಣೆ ಮಾಡಿ ಎಂದು ಒತ್ತಾಯಿಸಿದರು.

ಸಭಾಧ್ಯಕ್ಷ ಜಿ.ಎಸ್.ಪಾಟೀಲ್ ಮಾತನಾಡಿ, ‘ವಿರೋಧ ಪಕ್ಷಗಳು ಪ್ರಸ್ತಾಪಿಸಿದ್ದು ಸರಿ. ಆದರೆ ಅದಕ್ಕೂ ಮೊದಲು ಒಂದು ನೋಟಿಸ್ ನೀಡಬೇಕಿತ್ತು. ನಿಯಮ ಬದ್ಧವಾಗಿಲ್ಲದೆ ಏಕಾಏಕಿ ಚರ್ಚೆ ಮಾಡುವುದು ಸರಿಯಲ್ಲ ಎಂದರು. ಸರಕಾರದ ಧೋರಣೆಯನ್ನು ವಿರೋಧಿಸಿ ವಿರೋಧ ಪಕ್ಷಗಳ ಸದಸ್ಯರು ಸಭಾತ್ಯಾಗ ಮಾಡಿದ ಪ್ರಸಂಗ ನಡೆಯಿತು.

ಸಿಎಂ ಮ ಕೈಗೊಳ್ಳಬೇಕು : ಆರ್.ಅಶೋಕ್

‘ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸಲು ಆಗುತ್ತಿಲ್ಲ’ ಎಂದು ಹೇಳಿದ ಸಚಿವ ಬಿ.ಝಡ್.ಝಮೀರ್ ಅಹ್ಮದ್ ಖಾನ್ ವಿರುದ್ಧ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿದ್ದಾರೆ.

ಶುಕ್ರವಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಆಗಸ್ಟ್ 15 ದೇಶಕ್ಕೆ ಪವಿತ್ರವಾದ ದಿನ. ಲಕ್ಷಾಂತರ ಹೋರಾಟಗಾರರು ಮಾಡಿದ ತ್ಯಾಗ-ಬಲಿದಾನದಿಂದ ಸ್ವಾತಂತ್ರ್ಯ ಪಡೆದಿದ್ದೇವೆ. ನಾವೆಲ್ಲರೂ ಪ್ರಜಾಪ್ರಭುತ್ವದಲ್ಲಿ ಸಂತೋಷದಿಂದ ಬದುಕುತ್ತಿದ್ದೇವೆ. ಆದರೆ, ವಿಜಯನಗರದ ಜಿಲ್ಲೆಯಲ್ಲಿ ಸ್ವಾತಂತ್ರ್ಯ ದಿನ ಸಂಭ್ರಮಾಚರಣೆ ವಿಚಾರದಲ್ಲಿ ಝಮೀರ್ ಅಹ್ಮದ್ ಖಾನ್ ಸಿಎಂಗೆ ಪತ್ರ ಬರೆದಿದ್ದಾರೆ. ಧ್ವಜಾರೋಹಣ ಕಾರ್ಯಕ್ರಮಕ್ಕೆ ಹಾಜರಾಗಲು ಸಾಧ್ಯವಿಲ್ಲವೆಂದು ಅವರು ಹೇಳಿದ್ದಾರೆ.

ಸ್ವಾತಂತ್ರ್ಯ ಹೋರಾಟಗಾರರು ಮನೆ, ಆಸ್ತಿ ಕಳೆದುಕೊಂಡು ಜೈಲಿಗೆ ಹೋಗಿದ್ದರು. ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ಆದರೆ, ಈ ಸಚಿವ ಝಮೀರ್ ಅವರಿಗೆ ಇಂತಹ ಮಹತ್ವದ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಮಯವಿಲ್ಲ. ಇಂತಹವರನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಚಿವರನ್ನಾಗಿ ಮಾಡಿದ್ದಾರೆ ಎಂದು ಟೀಕಿಸಿದರು.

ಝಮೀರ್ ಅಹ್ಮದ್ ದೇಶಕ್ಕೆ ಮಾಡಿರುವ ಅಪಮಾನ. ಸಂವಿಧಾನದಡಿ ಪ್ರಮಾಣ ವಚನ ಸ್ವೀಕಾರ ಮಾಡಿದ ನಂತರ ಅಂತಹ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು. ಈ ರೀತಿ ಮಾಡುವುದು ಸಂವಿಧಾನಕ್ಕೆ ತೋರುವ ಅಗೌರವ. ಇದರಿಂದ ಆಡಳಿತಕ್ಕೆ ಒಳಿತಾಗುವುದಿಲ್ಲ. ಈ ಸಚಿವರ ವಿರುದ್ಧ ಸಿಎಂ ಕ್ರಮ ಕೈಗೊಳ್ಳಬೇಕು. ಸಚಿವರ ವಿರುದ್ಧ ಕ್ರಮ ವಹಿಸದೇ ಇದ್ದರೆ ಜನರೇ ಬುದ್ಧಿ ಕಲಿಸುತ್ತಾರೆ ಎಂದು ಎಚ್ಚರಿಸಿದರು.

Tags

Monsoon session
share
ವಾರ್ತಾಭಾರತಿ
ವಾರ್ತಾಭಾರತಿ
Next Story
X