Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಮುಂದುವರೆದ ಪ್ರತಿಪಕ್ಷಗಳ ಗದ್ದಲ: ಉಭಯ...

ಮುಂದುವರೆದ ಪ್ರತಿಪಕ್ಷಗಳ ಗದ್ದಲ: ಉಭಯ ಸದನ ಸೋಮವಾರಕ್ಕೆ ಮುಂದೂಡಿಕೆ

ವಾರ್ತಾಭಾರತಿವಾರ್ತಾಭಾರತಿ21 Aug 2026 9:37 PM IST
share
ಮುಂದುವರೆದ ಪ್ರತಿಪಕ್ಷಗಳ ಗದ್ದಲ: ಉಭಯ ಸದನ ಸೋಮವಾರಕ್ಕೆ ಮುಂದೂಡಿಕೆ

ಬೆಂಗಳೂರು : ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಶುಕ್ರವಾರವೂ ವಿಧಾನ ಮಂಡಲದ ಉಭಯ ಸದನಗಳಲ್ಲಿ ಪ್ರತಿಪಕ್ಷ ಬಿಜೆಪಿ-ಜೆಡಿಎಸ್‍ನಿಂದ ಪ್ರತಿಭಟನೆ, ಗದ್ದಲ ಮುಂದುವರೆದಿದ್ದು, ಇದರ ನಡುವೆಯೇ ಪ್ರಶ್ನೋತ್ತರ, ವಿಧೇಯಕಗಳ ಅಂಗೀಕಾರ ಪ್ರಕ್ರಿಯೆ ಪೂರ್ಣಗೊಳಿಸಿ ಕಲಾಪವನ್ನು ಸೋಮವಾರಕ್ಕೆ ಮುಂದೂಡಲಾಯಿತು.

ಶುಕ್ರವಾರ 12:30ರ ಸುಮಾರಿಗೆ ವಿಧಾನಸಭೆ ಕಲಾಪ ಆರಂಭಿಸಿದ ಸ್ಪೀಕರ್ ಜಿ.ಎಸ್.ಪಾಟೀಲ್ ಅವರು ಕಾರ್ಯ-ಕಲಾಪ ಕೈಗೆತ್ತಿಕೊಂಡರು. ಈ ವೇಳೆ ಪ್ರತಿಪಕ್ಷಗಳ ಸದಸ್ಯರು ಸರಕಾರದ ವಿರುದ್ಧ ಘೋಷಣೆ ಕೂಗಲು ಶುರು ಮಾಡಿದರು. ನಾಗೇಂದ್ರ ಅವರನ್ನು ಸಚಿವ ಸ್ಥಾನದಿಂದ ಕೂಡಲೇ ವಜಾಗೊಳಿಸಬೇಕು. ಅಲ್ಲಿಯ ವರೆಗೆ ಸದನ ನಡೆಯಲು ಬಿಡುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಪುನರುಚ್ಚಿಸಿದರು.

ಇನ್ನೊಂದೆಡೆ, ಬಿಜೆಪಿ ಸದಸ್ಯರು, ‘ದಲಿತರ ಹಣ ಎಲ್ಲಿ ಹೋಯಿತು.. ರಾಹುಲ್‍ಗಾಂಧಿ ಮನೆಗೆ ಹೋಯಿತು’ ಎಂದು ಘೋಷಣೆ ಕೂಗಿದರೆ, ಇತ್ತ ‘ಅಯೋಧ್ಯೆ ರಾಮಮಂದಿರ ಹಣ ಆರೆಸ್ಸೆಸ್, ಬಿಜೆಪಿ ಕಚೇರಿಗೆ ಹೋಯಿತು’ ಎಂದು ಆಡಳಿತ ಪಕ್ಷದ ಸದಸ್ಯರು ಪ್ರತಿಯಾಗಿ ಘೋಷಣೆ ಮೊಳಗಿಸಿದರು. ಇದರಿಂದ ಸದನದಲ್ಲಿ ಗದ್ದಲದ ವಾತಾವರಣ ಸೃಷ್ಟಿಯಾಯಿತು.

ಇದರ ನಡುವೆಯೇ ಸಚಿವರಾದ ಕೃಷ್ಣಭೈರೇಗೌಡ, ಎಚ್.ಸಿ.ಬಾಲಕೃಷ್ಣ ಪರ್ಯಾಲೋಚಿಸಬೇಕೆಂದು ಕೋರಿದ ಮೂರು ವಿಧೇಯಕಗಳನ್ನು ಯಾವುದೇ ಚರ್ಚೆಗಳು ಇಲ್ಲದೇ ಅಂಗೀಕಾರ ಮಾಡಲಾಯಿತು. ಅನಂತರ, ಉಪಸಭಾಧ್ಯಕ್ಷ ಮಂಕಾಳ್ ವೈದ್ಯ ಅವರು ವಿವಿಧ ಕಾಮಗಾರಿಗಳಿಗೆ ಸಂಬಂಧಪಟ್ಟ 16 ಅರ್ಜಿಗಳನ್ನು ಸದನಕ್ಕೆ ಒಪ್ಪಿಸಿದರು. ಆ ಬಳಿಕ ಕಲಾಪವನ್ನು ಸೋಮವಾರ(ಆ.24) ಬೆಳಗ್ಗೆ 11 ಗಂಟೆಗೆ ಮುಂದೂಡಲಾಯಿತು.

Tags

Monsoon session
share
ವಾರ್ತಾಭಾರತಿ
ವಾರ್ತಾಭಾರತಿ
Next Story
X