Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಪ್ರಧಾನಿ ಟೀಕಿಸುವ ಭರದಲ್ಲಿ ಜಾತಿನಿಂದನೆ:...

ಪ್ರಧಾನಿ ಟೀಕಿಸುವ ಭರದಲ್ಲಿ ಜಾತಿನಿಂದನೆ: ಸಚಿವ ಕಾಶಪ್ಪನವರ್ ವಿರುದ್ಧ ಮೇಲ್ಮನೆಯಲ್ಲಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ21 Aug 2026 10:10 PM IST
share
ಪ್ರಧಾನಿ ಟೀಕಿಸುವ ಭರದಲ್ಲಿ ಜಾತಿನಿಂದನೆ: ಸಚಿವ ಕಾಶಪ್ಪನವರ್ ವಿರುದ್ಧ ಮೇಲ್ಮನೆಯಲ್ಲಿ ಪ್ರತಿಭಟನೆ

ಬೆಂಗಳೂರು : ಪ್ರಧಾನಿಯನ್ನು ಟೀಕಿಸುವ ಭರದಲ್ಲಿ ಜಾತಿನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಸಚಿವ ವಿಜಯಾನಂದ ಕಾಶಪ್ಪನವರ್ ವಿರುದ್ಧ ಮೇಲ್ಮನೆಯಲ್ಲಿ ಪ್ರತಿಪಕ್ಷ ಸದಸ್ಯರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಪ್ರಧಾನಿಯನ್ನು ಟೀಕಿಸುವ ಸಂದರ್ಭದಲ್ಲಿ ಸಣ್ಣ ಕೈಗಾರಿಕೆ ಸಚಿವ ಕಾಶಪ್ಪನವರ್ ದಲಿತ ಸಮುದಾಯದ ಬಗ್ಗೆ ಆಕ್ಷೇಪಾರ್ಹ ಪದ ಬಳಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಸಚಿವರು ಸದನದಲ್ಲಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.

ಕಾಶಪ್ಪನವರ್ ಸದನಕ್ಕೆ ಆಗಮಿಸುತ್ತಿದ್ದಂತೆ ಪ್ರತಿಪಕ್ಷ ಸದಸ್ಯರು ಅವರ ವಿರುದ್ಧ ಘೋಷಣೆ ಕೂಗಿ ರಾಜೀನಾಮೆಗೆ ಒತ್ತಾಯಿಸಿದರು ಹಾಗೂ ಕಾಶಪ್ಪನವರ್ ಅವರ ಬಂಧನಕ್ಕೆ ಆಗ್ರಹಿಸಿದರು. ಇದಕ್ಕೆ ಆಡಳಿತ ಪಕ್ಷದ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಸದನದಲ್ಲಿ ಕೆಲಕಾಲ ಗದ್ದಲದ ವಾತಾವರಣ ನಿರ್ಮಾಣವಾಯಿತು.

ಪ್ರಶ್ನೋತ್ತರ ಕಲಾಪದ ವೇಳೆ ಪ್ರತಿಪಕ್ಷಗಳ ಘೋಷಣೆ ಹಾಗೂ ಪ್ರತಿಭಟನೆಗೆ ಸಚಿವ ಕೃಷ್ಣಬೈರೇಗೌಡ ಅಸಮಾಧಾನ ವ್ಯಕ್ತಪಡಿಸಿ, ಕಾಶಪ್ಪನವರ್ ಪರವಾಗಿ ಕಾಂಗ್ರೆಸ್ ಸದಸ್ಯರು ಪ್ರತಿಪಕ್ಷಗಳ ನಡೆಯನ್ನು ಖಂಡಿಸಿದರು.

ಈ ವೇಳೆ ಕಾಂಗ್ರೆಸ್ ಸದಸ್ಯ ಬಿ.ಕೆ.ಹರಿಪ್ರಸಾದ್ ಪ್ರತಿಕ್ರಿಯಿಸಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಪಮಾನ ಮಾಡಿದವರು ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು. ಆಗ ಛಲವಾದಿ ನಾರಾಯಣಸ್ವಾಮಿ, ಖರ್ಗೆ ಅವರಿಗೆ ತಾವು ಯಾವುದೇ ಅಪಮಾನ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.

Tags

Monsoon session
share
ವಾರ್ತಾಭಾರತಿ
ವಾರ್ತಾಭಾರತಿ
Next Story
X