Mysuru | ಗುಂಡೇಟಿನಿಂದ ಚಿರತೆ ಸಾವು: ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಸಾಂದರ್ಭಿಕ ಚಿತ್ರ | PC : freepik
ಮೈಸೂರು : ಮೈಸೂರು ಜಿಲ್ಲೆಯ ಹುಣಸೂರು ವಿಭಾಗದ ಪಿರಿಯಾಪಟ್ಟಣ ವ್ಯಾಪ್ತಿಯ ಗುಳೇದಹಳ್ಳ ರಾಜ್ಯ ಅರಣ್ಯದಿಂದ 2 ಕೀ.ಮೀ. ದೂರದಲ್ಲಿರುವ ಕೊಪ್ಪ ವಿಭಾಗದಲ್ಲಿ ಗುಂಡೇಟಿನಿಂದ ಚಿರತೆ ಸಾವಿಗೀಡಾಗಿರುವುದು ವರದಿಯಾಗಿದೆ.
ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಸೂಚಿಸಿರುವ ಅರಣ್ಯ ಸಚಿವ ಈಶ್ವರ್ ಬಿ.ಖಂಡ್ರೆ ಅವರು, ಹೆಣ್ಣು ಚಿರತೆ ಗುಂಡೇಟಿನಿಂದ ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿ. ವನ್ಯಜೀವಿ ಅಂಗಾಂಗಕ್ಕಾಗಿ ಕಳ್ಳಬೇಟೆ ಇನ್ನೂ ನಡೆಯುತ್ತಿದೆ ಎಂಬುದಕ್ಕೆ ಇದು ಪುಷ್ಟಿ ನೀಡುತ್ತಿದೆ. ಈ ನಿಟ್ಟಿನಲ್ಲಿ ತನಿಖೆ ನಡೆಸಬೇಕು ಎಂದು ಸೂಚಿಸಿದ್ದಾರೆ.
Next Story





