ಮೈಸೂರು ನಂದಿಧ್ವಜ ಪೂಜೆ ಸಂದರ್ಭ ಸಚಿವರಿಗೆ ಅವಕಾಶ ನಿರಾಕರಣೆ ಪ್ರಕರಣ: ವಿಚಾರಣೆಗೆ ಸಿಎಂ ಆದೇಶ

ಡಿ.ಕೆ. ಶಿವಕುಮಾರ್
ಬೆಂಗಳೂರು, ಅ.22: ಮೈಸೂರು ಅರಮನೆ ಆವರಣದಲ್ಲಿ ಬುಧವಾರ ನಡೆದ ನಂದಿಧ್ವಜ ಪೂಜೆ ಸಂದರ್ಭ ಸಚಿವರಾದ ಬಾಲಕೃಷ್ಣ, ನರೇಂದ್ರ ಸ್ವಾಮಿ, ಬಸವಂತಪ್ಪರನ್ನು ಪೂಜೆ ಆವರಣ ಪ್ರವೇಶಿಸಲು ಪೊಲೀಸ್ ಅಧಿಕಾರಿಗಳು ನಿರ್ಬಂಧಿಸಿದ ಪ್ರಕರಣದ ಬಗ್ಗೆ ವಿಚಾರಣೆ ನಡೆಸಿ ವರದಿ ನೀಡುವಂತೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚನೆ ನೀಡಿದ್ದಾರೆ.
ಸಚಿವರುಗಳನ್ನೇ ನಿರ್ಬಂಧಿಸುವ ಮೂಲಕ ಪೊಲೀಸ್ ಅಧಿಕಾರಿಗಳು ಉದ್ಧಟತನದಿಂದ ವರ್ತಿಸಿರುವುದು ಕಂಡುಬಂದಿದೆ. ತಕ್ಷಣ ಖುದ್ದು ತಾನೇ ಮಧ್ಯಪ್ರವೇಶಿಸಿ ಸಚಿವರ ಪ್ರವೇಶಕ್ಕೆ ಅನುವು ಮಾಡಿಕೊಟ್ಟಿದ್ದೇನೆ. ಆದರೂ ಅಧಿಕಾರಿಗಳ ಉಡಾಫೆ ವರ್ತನೆ ಸಹಿಸಲು ಆಗುವುದಿಲ್ಲ. ಹೀಗಾಗಿ ಇದಕ್ಕೆ ಹೊಣೆಗಾರರು ಯಾರು ಎಂಬ ಬಗ್ಗೆ ವಿಚಾರಣೆ ನಡೆಸಿ ವರದಿ ನೀಡುವಂತೆ ಮುಖ್ಯ ಕಾರ್ಯದರ್ಶಿಗೆ ಆದೇಶಿಸಿದ್ದೇನೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ವರದಿ ಬಂದ ನಂತರ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಪ್ರಕಟನೆಯಲ್ಲಿ ತಿಳಿಸಿದ್ದಾರೆ.




