Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಮೈಸೂರು ದಸರಾ ಪ್ರಯುಕ್ತ ಪ್ರವಾಸ...

ಮೈಸೂರು ದಸರಾ ಪ್ರಯುಕ್ತ ಪ್ರವಾಸ ಪ್ಯಾಕೇಜ್‍ಗಳನ್ನು ಪ್ರಕಟಿಸಿದ KSRTC

ವಾರ್ತಾಭಾರತಿವಾರ್ತಾಭಾರತಿ9 Oct 2026 9:49 PM IST
share
ಮೈಸೂರು ದಸರಾ ಪ್ರಯುಕ್ತ ಪ್ರವಾಸ ಪ್ಯಾಕೇಜ್‍ಗಳನ್ನು ಪ್ರಕಟಿಸಿದ KSRTC

ಬೆಂಗಳೂರು : ಮೈಸೂರು ದಸರಾ-2026 ಹಾಗೂ ಸಾಲು ಸಾಲು ರಜೆಗಳ ಹಿನ್ನೆಲೆಯಲ್ಲಿ ಸಾರ್ವಜನಿಕ ಪ್ರಯಾಣಿಕರು ಮತ್ತು ಪ್ರವಾಸಿಗರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು 3,700ಕ್ಕೂ ಹೆಚ್ಚು ವಿಶೇಷ ಬಸ್‍ಗಳು ಸೇರಿದಂತೆ ಹಲವು ಏಕದಿನ ಪ್ರವಾಸ ಪ್ಯಾಕೇಜ್‍ಗಳನ್ನು ಪ್ರಕಟಿಸಿದೆ.

ರಜೆಗಳ ಪ್ರಯುಕ್ತ ಅ.16 ರಿಂದ ಅ.20ರವರೆಗೆ ಬೆಂಗಳೂರಿನ ಕೆಂಪೇಗೌಡ, ಮೈಸೂರು ರಸ್ತೆ ಹಾಗೂ ಶಾಂತಿನಗರ ಬಿಎಂಟಿಸಿ ಬಸ್ ನಿಲ್ದಾಣಗಳಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ಹಾಗೂ ನೆರೆರಾಜ್ಯಗಳ ಪ್ರಮುಖ ನಗರಗಳಿಗೆ 3,000ಕ್ಕೂ ಹೆಚ್ಚು ಹೆಚ್ಚುವರಿ ಬಸ್‍ಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದ್ದು, ಅ.20 ಮತ್ತು ಅ.21 ರಂದು ಹಿಂತಿರುಗುವ ಪ್ರಯಾಣಿಕರಿಗಾಗಿ ವಿಶೇಷ ಸಾರಿಗೆ ವ್ಯವಸ್ಥೆ ಇರಲಿದೆ.

ಮುಂಗಡ ಕಾಯ್ದಿರಿಸಿದ ಬಸ್‍ಗಳು ವಿಜಯನಗರ, ಯಶವಂತಪುರ, ಜಯನಗರ ಸೇರಿದಂತೆ ವಿವಿಧ ಟಿಟಿಎಂಸಿಗಳಿಂದ ಹೊರಡಲಿವೆ. ವಿಶೇಷವಾಗಿ ಮೈಸೂರು ದಸರಾ ವೀಕ್ಷಣೆಗೆ ತೆರಳುವ ಸಾರ್ವಜನಿಕರಿಗಾಗಿ ಬೆಂಗಳೂರಿನ ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರಿಗೆ 300 ಪ್ರತ್ಯೇಕ ಬಸ್‍ಗಳು ಹಾಗೂ ಮೈಸೂರಿನಿಂದ ಚಾಮುಂಡಿಬೆಟ್ಟ, ಕೆ.ಆರ್.ಎಸ್, ಶ್ರೀರಂಗಪಟ್ಟಣ, ನಂಜನಗೂಡು, ಮಡಿಕೇರಿ ಸೇರಿದಂತೆ ಸುತ್ತಮುತ್ತಲಿನ ಪ್ರವಾಸಿ ತಾಣಗಳಿಗೆ ಸಂಪರ್ಕ ಕಲ್ಪಿಸಲು 400 ಬಸ್‍ಗಳು ಸೇರಿ ಒಟ್ಟು 700 ವಿಶೇಷ ಬಸ್‍ಗಳು ಸಂಚರಿಸಲಿವೆ.

ಇದರೊಂದಿಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೈಸೂರಿಗೆ ನೇರ 'ಫ್ಲೈ ಬಸ್' ಸೇವೆಯೂ ಲಭ್ಯವಿರಲಿದೆ. ದಸರಾ ಪ್ರವಾಸಿಗರ ಅನುಕೂಲಕ್ಕಾಗಿ ನಿಗಮವು ಒಂದು ದಿನದ ವಿಶೇಷ ಪ್ಯಾಕೇಜ್ ಪ್ರವಾಸ ಸೇವೆಗಳನ್ನು ಆಯೋಜಿಸಿದೆ. ಮೈಸೂರಿನಿಂದ ಅ.15 ರಿಂದ ಅ.26ರವರೆಗೆ ಗಿರಿದರ್ಶಿನಿ(ವಯಸ್ಕರಿಗೆ 400 ರೂ., ಮಕ್ಕಳಿಗೆ 250 ರೂ.), ಜಲದರ್ಶಿನಿ (ವಯಸ್ಕರಿಗೆ 450 ರೂ., ಮಕ್ಕಳಿಗೆ 300 ರೂ.) ಹಾಗೂ ದೇವದರ್ಶಿನಿ (ವಯಸ್ಕರಿಗೆ 300 ರೂ., ಮಕ್ಕಳಿಗೆ 200 ರೂ.) ಪ್ಯಾಕೇಜ್‍ಗಳು ಕಾರ್ಯಾಚರಣೆಗೊಳ್ಳಲಿವೆ.

ಮಂಗಳೂರಿನಿಂದ ಅ.11 ರಿಂದ ಅ.20ರವರೆಗೆ ಮಂಗಳೂರು ದಸರಾ ನವದುರ್ಗಾ ದರ್ಶನ (ವಯಸ್ಕರಿಗೆ 500 ರೂ., ಮಕ್ಕಳಿಗೆ 400 ರೂ.), ಮಂಗಳೂರು-ತಲಕಾವೇರಿ-ಭಾಗಮಂಡಲ, ಮಂಗಳೂರು-ಕೊಲ್ಲೂರು ಹಾಗೂ ಮಂಗಳೂರು-ಶೃಂಗೇರಿ (ಪ್ರತಿ ಪ್ಯಾಕೇಜ್‍ಗೆ ವಯಸ್ಕರಿಗೆ 600 ರೂ., ಮಕ್ಕಳಿಗೆ 500 ರೂ.), ಮಂಗಳೂರು-ಸಿಗಂದೂರು (ವಯಸ್ಕರಿಗೆ 700 ರೂ., ಮಕ್ಕಳಿಗೆ 600 ರೂ.) ಪ್ಯಾಕೇಜ್ ಪ್ರವಾಸಗಳು ಲಭ್ಯವಿರಲಿವೆ.

ಅದೇ ರೀತಿ ಮಡಿಕೇರಿಯಿಂದ ಅ.11 ರಿಂದ ಅ.26ರವರೆಗೆ ಕಾವೇರಿ ದರ್ಶನ ಹಾಗೂ ಕೊಡಗಿನ ಸೊಬಗು ಹೆಸರಿನ ಎರಡು ಪ್ರತ್ಯೇಕ ಪ್ಯಾಕೇಜ್‍ಗಳನ್ನು (ವಯಸ್ಕರಿಗೆ 400 ರೂ., ಮಕ್ಕಳಿಗೆ 300 ರೂ.) ನಡೆಸಲಾಗುತ್ತದೆ. ಈ ಎಲ್ಲ ಪ್ಯಾಕೇಜ್ ಬಸ್‍ಗಳು ಬೆಳಿಗ್ಗೆ ಹೊರಟು ಸಂಜೆ ಹೊರಟ ಸ್ಥಳಕ್ಕೆ ಹಿಂತಿರುಗುತ್ತವೆ.

ಪ್ರಯಾಣಿಕರು www.ksrtc.karnataka.gov.in ವೆಬ್‍ಸೈಟ್ ಅಥವಾ ಮೊಬೈಲ್ ಮೂಲಕ ಮುಂಗಡ ಟಿಕೆಟ್ ಬುಕ್ ಮಾಡಬಹುದು. ನಾಲ್ಕು ಅಥವಾ ಅದಕ್ಕಿಂತ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಟಿಕೆಟ್ ಬುಕ್ ಮಾಡಿದರೆ ಶೇ.5ರಷ್ಟು ಹಾಗೂ ಹೋಗುವ-ಬರುವ ಟಿಕೆಟ್ ಒಟ್ಟಿಗೆ ಕಾಯ್ದಿರಿಸಿದರೆ ಬರುವ ಪ್ರಯಾಣ ದರದಲ್ಲಿ ಶೇ.10ರಷ್ಟು ರಿಯಾಯಿತಿ ಸಿಗಲಿದೆ. ಸಾರ್ವಜನಿಕರ ಮಾಹಿತಿಗಾಗಿ ಮೈಸೂರು ನಗರ ಹಾಗೂ ಗ್ರಾಮಾಂತರ ಬಸ್ ನಿಲ್ದಾಣಗಳಲ್ಲಿ ಪ್ರತ್ಯೇಕ ಮಾಹಿತಿ ಕೇಂದ್ರಗಳನ್ನು ತೆರೆಯಲಾಗುತ್ತಿದೆ ಎಂದು ಕೆಎಸ್ಸಾರ್ಟಿಸಿ ಪ್ರಕಟನೆ ತಿಳಿಸಿದೆ.

Tags

Tour PackagesKsrtcMysuru Dasara
share
ವಾರ್ತಾಭಾರತಿ
ವಾರ್ತಾಭಾರತಿ
Next Story
X