Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ‘ಮೈಸೂರು ದಸರಾ’ | ಕೆಎಸ್ಸಾರ್ಟಿಸಿಯಿಂದ 3...

‘ಮೈಸೂರು ದಸರಾ’ | ಕೆಎಸ್ಸಾರ್ಟಿಸಿಯಿಂದ 3 ಸಾವಿರ ಹೆಚ್ಚುವರಿ ಬಸ್ ವ್ಯವಸ್ಥೆ

ವಾರ್ತಾಭಾರತಿವಾರ್ತಾಭಾರತಿ10 Oct 2026 6:16 PM IST
share
‘ಮೈಸೂರು ದಸರಾ’ | ಕೆಎಸ್ಸಾರ್ಟಿಸಿಯಿಂದ 3 ಸಾವಿರ ಹೆಚ್ಚುವರಿ ಬಸ್ ವ್ಯವಸ್ಥೆ

ಬೆಂಗಳೂರು : ಸಾಲು-ಸಾಲು ಸರಕಾರಿ ರಜೆಗಳ ಹಿನ್ನೆಲೆ, ವಿವಿಧ ಕಡೆಗಳಿಂದ ದಸರಾ ವೀಕ್ಷಣೆಗೆ ಮೈಸೂರಿಗೆ ಬರುವ ಪ್ರವಾಸಿಗರು ಹಾಗೂ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಅ.16ರಿಂದ ಅ.20ರ ವರೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್ಸಾರ್ಟಿಸಿ)ವು 3ಸಾವಿರ ಹೆಚ್ಚುವರಿ ವಿಶೇಷ ಬಸ್‍ಗಳ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದು ಸಂಸ್ಥೆ ತಿಳಿಸಿದೆ.

ಶನಿವಾರ ಮಾಧ್ಯಮ ಪ್ರಕಟನೆ ನೀಡಿರುವ ಕೆಎಸ್ಸಾರ್ಟಿಸಿ, ಪ್ರಸ್ತುತ ಕಾರ್ಯಾಚರಣೆ ಮಾಡುತ್ತಿರುವ ಕರ್ನಾಟಕ ಸಾರಿಗೆ, ರಾಜಹಂಸ, ಸ್ಲೀಪರ್, ಐರಾವತ, ಐರಾವತ ಕ್ಲಬ್‍ಕ್ಲಾಸ್ ಹಾಗೂ ಅಂಬಾರಿ ಕ್ಲಬ್‍ಕ್ಲಾಸ್, ಪಲ್ಲಕ್ಕಿ ಸ್ಲೀಪರ್, ಅಶ್ವಮೇಧ ಬಸ್ ಸೇವೆ ಜೊತೆಗೆ ಹೆಚ್ಚುವರಿಯಾಗಿ 3ಸಾವಿರ ಬಸ್‍ಗಳ ವಿಶೇಷ ಸಾರಿಗೆ ಸೇವೆಯನ್ನು ಒದಗಿಸಲಾಗುವುದು. ದಸರಾ ಹಿನ್ನೆಲೆಯಲ್ಲಿ ಅ.16ರಿಂದ ಅ.20ರ ವರೆಗೆ ಬೆಂಗಳೂರಿನಿಂದ ರಾಜ್ಯ, ಅಂತಾರಾಜ್ಯದ ವಿವಿಧ ಸ್ಥಳಗಳಿಗೆ ಈ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದೆ.

ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣ(ಮೆಜಸ್ಟಿಕ್), ಮೈಸೂರು ರಸ್ತೆ ಬಸ್ ನಿಲ್ದಾಣ ಮತ್ತು ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣದಿಂದ ವಿಶೇಷ ಬಸ್‍ಗಳ ಸೇವೆ ದೊರೆಯಲಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ)ಯ ವಿಜಯನಗರ, ಯಶವಂತಪುರ, ಜಯನಗರ, ಬಸವೇಶ್ವರನಗರ, ದೊಮ್ಮಲೂರು ಬನಶಂಕರಿ ಹಾಗೂ ಇತರ ಬಸ್ ನಿಲ್ದಾಣಗಳಿಂದ ಕಾರ್ಯಾಚರಣೆ ಮಾಡಲಾಗುತ್ತದೆ ಎಂದು ಕೆಎಸ್ಸಾರ್ಟಿಸಿ ತಿಳಿಸಿದೆ.

ನಂತರ ರಾಜ್ಯದ ಮತ್ತು ಅಂತರ್ ರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಅ.20-21ರಂದು ಪ್ರಯಾಣಿಕರು ಮರಳಿ ಬರಲು ಅನುಕೂಲವಾಗುವಂತೆ ವಿಶೇಷ ಬಸ್ ಸೇವೆ ಕಲ್ಪಿಸಲಾಗುವುದು ಎಂದು ಕೆಎಸ್ಸಾರ್ಟಿಸಿ ಮಾಹಿತಿ ನೀಡಿದೆ.

ದಾವಣಗೆರೆ, ಗೋಕರ್ಣ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಕಾರವಾರ, ಮಂಗಳೂರು, ಉಡುಪಿ, ಕುಂದಾಪುರ, ಪುತ್ತೂರು, ಧರ್ಮಸ್ಥಳ, ಕುಕ್ಕೆಸುಬ್ರಹಣ್ಯ, ಶೃಂಗೇರಿ, ಹೊರನಾಡು, ಶಿವಮೊಗ್ಗ, ಮಡಿಕೇರಿ, ಬಳ್ಳಾರಿ, ಹೊಸಪೇಟೆ, ಕಲಬುರಗಿ, ರಾಯಚೂರು ಮುಂತಾದ ಸ್ಥಳಗಳಿಗೆ ಹಾಗೂ ನೆರೆ ರಾಜ್ಯಗಳಲ್ಲಿನ ಹೈದರಾಬಾದ್, ವಿಜಯವಾಡ, ನೆಲ್ಲೂರು, ಚೆನ್ನೈ, ಊಟಿ, ಕೊಡೈಕೆನಾಲ್, ಸೇಲಂ, ತಿರುಚಿನಾಪಳ್ಳಿ, ಕುಂಭಕೋಣಂ, ಕೊಯಂಬತ್ತೂರು, ಮಧುರೈ, ಪಣಜಿ, ಮಂತ್ರಾಲಯ, ಪೂನಾ, ಎರ್ನಾಕುಲಂ ಹಾಗೂ ಇತರೆ ಸ್ಥಳಗಳಿಗೆ ವಿಶೇಷ ಬಸ್ ಸೇವೆ ಕಲ್ಪಿಸಲಾಗುತ್ತಿದೆ ಎಂದು ಕೆಎಸ್ಸಾರ್ಟಿಸಿ ವಿವರಿಸಿದೆ.

ದಸರಾಗೆ 700 ವಿಶೇಷ ಬಸ್ :

ಬೆಂಗಳೂರಿನ ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರಿಗೆ ಪ್ರತ್ಯೇಕವಾಗಿ 300 ಹೆಚ್ಚುವರಿ ಬಸ್‍ಗಳು, ಮೈಸೂರಿನ ಸುತ್ತಮುತ್ತಲಿನ ಪ್ರವಾಸಿ ತಾಣಗಳಾದ ಚಾಮುಂಡಿಬೆಟ್ಟ, ಕೆಆರ್ ಎಸ್ ಅಣೆಕಟ್ಟು/ಬೃಂದಾವನ, ಶ್ರೀರಂಗಪಟ್ಟಣ, ನಂಜನಗೂಡು ಮಡಿಕೇರಿ, ಮಂಡ್ಯ, ಮಳವಳ್ಳಿ, ಎಚ್.ಡಿ.ಕೋಟೆ, ಚಾಮರಾಜನಗರ, ಹುಣಸೂರು, ಕೆ.ಆರ್.ನಗರ, ಗುಂಡ್ಲುಪೇಟೆ ಇತ್ಯಾದಿ ಸ್ಥಳಗಳಿಗೆ ಸಾರಿಗೆ ಸಂಪರ್ಕ ಕಲ್ಪಿಸಲು 400 ಹೆಚ್ಚುವರಿ ಬಸ್‍ಗಳನ್ನು ಒದಗಿಸಲಾಗುತ್ತದೆ. ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೈಸೂರಿಗೆ ಫ್ಲೈ ಬಸ್ ಮೂಲಕ ನೇರ ಬಸ್ ಸೇವೆ ದೊರೆಯಲಿವೆ ಎಂದು ಕೆಎಸ್ಸಾರ್ಟಿಸಿ ಮಾಹಿತಿ ನೀಡಿದೆ.

Tags

BusKsrtcMysuru Dasara
share
ವಾರ್ತಾಭಾರತಿ
ವಾರ್ತಾಭಾರತಿ
Next Story
X