ಸೌತ್ ಏಷ್ಯನ್ ಫುಟ್ಬಾಲ್ ಫೆಡರೇಷನ್ ಉಪಾಧ್ಯಕ್ಷರಾಗಿ ಎನ್.ಎ.ಹ್ಯಾರಿಸ್ ಆಯ್ಕೆ

ಬೆಂಗಳೂರು: ಶಾಂತಿನಗರ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (BDA) ಅಧ್ಯಕ್ಷರಾದ ಎನ್.ಎ.ಹ್ಯಾರಿಸ್ ಅವರು ಸೌತ್ ಏಷ್ಯನ್ ಫುಟ್ಬಾಲ್ ಫೆಡರೇಷನ್ (SAFF) ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಈಗಾಗಲೇ ರಾಷ್ಟ್ರೀಯ ಮಟ್ಟದ ಫುಟ್ಬಾಲ್ ಆಡಳಿತದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಎನ್.ಎ. ಹ್ಯಾರಿಸ್ ಅವರು ಅಖಿಲ ಭಾರತ ಫುಟ್ಬಾಲ್ ಫೆಡರೇಷನ್ (AIFF) ಉಪಾಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ಇದೀಗ SAFF ಉಪಾಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ಅವರಿಗೆ ದಕ್ಷಿಣ ಏಷ್ಯಾ ಮಟ್ಟದಲ್ಲಿ ಮತ್ತೊಂದು ಮಹತ್ವದ ಜವಾಬ್ದಾರಿ ದೊರೆತಿದೆ.
ದಕ್ಷಿಣ ಏಷ್ಯಾದ ರಾಷ್ಟ್ರಗಳಲ್ಲಿ ಫುಟ್ಬಾಲ್ ಕ್ರೀಡೆಯ ಅಭಿವೃದ್ಧಿ, ಯುವ ಪ್ರತಿಭೆಗಳಿಗೆ ಹೆಚ್ಚಿನ ಅವಕಾಶ ಕಲ್ಪಿಸುವುದು ಹಾಗೂ ಫುಟ್ಬಾಲ್ ಚಟುವಟಿಕೆಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ SAFF ಪ್ರಮುಖ ಪಾತ್ರ ವಹಿಸುತ್ತಿದೆ.
Next Story






