Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ನಾರಾಯಣ ಗುರುಗಳ ಬದುಕೇ ಅಪ್ಪಟ...

ನಾರಾಯಣ ಗುರುಗಳ ಬದುಕೇ ಅಪ್ಪಟ ಮನುಷ್ಯರನ್ನು ರೂಪಿಸುವುದಾಗಿತ್ತು: ಕೆ.ವಿ.ಪ್ರಭಾಕರ್

ವಾರ್ತಾಭಾರತಿವಾರ್ತಾಭಾರತಿ23 Nov 2025 2:27 PM IST
share
K.V. Prabhakar presented the Narayanguru Award and spoke in honor of the achievers.

ಬೆಂಗಳೂರು : ಜಾತ್ಯತೀತತೆಯ ಮರ್ಯಾದಾ ಹತ್ಯೆ ನಡೆಯುವಾಗ ನಾರಾಯಣ ಗುರುಗಳ ಆದರ್ಶ ಪ್ರಸ್ತುತ ಆಗುತ್ತದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು.

ಕರ್ನಾಟಕ ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಸಂಪಾದಕರ ಮತ್ತು ವರದಿಗಾರರ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಐದು ಮಂದಿಗೆ ನಾರಾಯಣಗುರು ಪ್ರಶಸ್ತಿ ಪ್ರದಾನ ಮಾಡಿ, ಐದು ಸಾಧಕರನ್ನು ಗೌರವಿಸಿ ಮಾತನಾಡಿದರು.

ದಿನೇ ದಿನೇ ಜಾತಿ ವ್ಯವಸ್ಥೆ ಗಟ್ಟಿಗೊಳ್ಳುತ್ತಾ, ಜಾತ್ಯತೀತತೆಯ ಮರ್ಯಾದಾ ಹತ್ಯೆ ನಡೆಯುತ್ತಿರುವ ಹೊತ್ತಿನಲ್ಲಿ, ನಾರಾಯಣ ಗುರುಗಳ ಬದುಕೇ ಅಪ್ಪಟ ಮನುಷ್ಯರನ್ನು ರೂಪಿಸುವುದಾಗಿತ್ತು ಎನ್ನುವುದನ್ನು ನಾವು ಸ್ಮರಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಶೋಷಿಸುವ ಮನಸ್ಥಿತಿ, ಶೋಷಣೆಗೆ ಒಳಗಾಗುವ ಮನಸ್ಥಿತಿ, ಗುಲಾಮಗಿರಿಯ ಮನಸ್ಥಿತಿಗೆ ನಾರಾಯಣ ಗುರುಗಳು ನೈಸರ್ಗಿಕ ಚಿಕಿತ್ಸೆ ಕೊಡಲು ಯತ್ನಿಸಿದರು. ಇವರ ಬೋಧನೆಗಳು ಮತ್ತು ಸುಧಾರಣಾ ಕಾರ್ಯಗಳು ಅವತ್ತಿನ‌ ಮತ್ತು ಇವತ್ತಿನ ಹಲವು ಸಾಮಾಜಿಕ ಸಮಸ್ಯೆಗಳಿಗೆ ದಾರಿದೀಪವಾಗಿವೆ ಎಂದರು.

ಒಂದು ಜಾತಿ, ಒಂದು ಮತ, ಒಬ್ಬನೇ ದೇವರು ಮಾನವನಿಗೆ ಎನ್ನುವುದು ಅವರ ಪ್ರಸಿದ್ಧ ಘೋಷಣೆಯಾಗಿತ್ತು.‌ ಹಾಗೆಯೇ, ಶಿಕ್ಷಣದಿಂದ ಸ್ವಾತಂತ್ರ್ಯವನ್ನು ಗಳಿಸಿ ಎನ್ನುವುದು ಅವರ ಪ್ರಮುಖ ಕರೆಯಾಗಿತ್ತು.

ಇಂದು ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಲ್ಲಿ ಧರ್ಮದ ಹೆಸರಲ್ಲಿ ತಮ್ಮ ಬದುಕನ್ನು ಹಾಳು ಮಾಡಿಕೊಳ್ಳುತ್ತಿರುವವರೆಲ್ಲಾ ಬಿಲ್ಲವ, ಈಳವ ಮತ್ತು ಈಡಿಗ, ಬೆಸ್ತ ಸಮುದಾಯಗಳ ಮಕ್ಕಳೇ ಆಗಿದ್ದಾರೆ. ಇವರಿಗೆ ನಾರಾಯಣಗುರುಗಳ ಬದುಕಿನ ಪಾಠವನ್ನು ಅರ್ಥ ಮಾಡಿಸಬೇಕಾದ ತುರ್ತು ಇದೆ.

ಆದರೆ, ನಾರಾಯಣ ಗುರುಗಳ ಮಾತುಗಳಿಂದ ಅವರ ಆದರ್ಶಗಳನ್ನು ಅಳಿಸಿ ಕೇವಲ ಮಾತುಗಳನ್ನು ಅಪಾರ್ಥವಾಗಿ ಬಳಸುವ ಪರಿಪಾಠ ಶುರುವಾಗಿರುವುದು ಬೇಸರದ ಸಂಗತಿಯಾಗಿದೆ.

ಒಂದು ಜಾತಿ, ಒಂದು ಮತ, ಒಬ್ಬನೇ ದೇವರು ಮಾನವನಿಗೆ ಎಂದು ಗುರುಗಳು ಕರೆ ಕೊಟ್ಟಿದ್ದರ ಅರ್ಥ ಎಲ್ಲರೂ ನಾರಾಯಣಗುರುಗಳ ಹೆಸರಲ್ಲಿ ಒಂದೊಂದು ದೇವಸ್ಥಾನ ಕಟ್ಟಿ ಅನ್ನುವುದಾಗಿರಲಿಲ್ಲ. ಪ್ರವೇಶವಿಲ್ಲದ ದೇವಸ್ಥಾನಗಳಿಗೆ ಪ್ರವೇಶ ಪಡೆಯಲು ಒದ್ದಾಡುವುದಕ್ಕಿಂತ ನಿಮ್ಮದೇ ದೇವರ ಗುಡಿಯನ್ನು ಸೃಷ್ಟಿಸಿಕೊಳ್ಳಿ ಎನ್ನುವುದಾಗಿತ್ತು.

ನಾರಾಯಣ ಗುರುಗಳು ಶಿವನ ಪ್ರತಿಷ್ಠಾಪನೆ ಮಾಡಿದಾಗ ಜಾತಿವಾದಿಗಳಿಂದ ಬಂದ ವಿರೋಧಕ್ಕೆ ತಣ್ಣಗೆ ಪ್ರತಿಕ್ರಿಯಿಸಿದ್ದ ಗುರುಗಳು, "ಇದು ನಿಮ್ಮ ಶಿವ ಅಲ್ಲ, ಈಳವರ ಶಿವ" ಎಂದು ಅವರ ಬಾಯಿ ಮುಚ್ಚಿಸಿದ್ದರು.

ಬಳಿಕ‌ ಎಲ್ಲರೂ ದೇವಸ್ಥಾನಗಳನ್ನೇ ಕಟ್ಟಲು ಮುಂದಾದಾಗ ಹೆದರಿದ ಗುರುಗಳು ಕೊನೆಗೆ ದೇವಸ್ಥಾನ ಕಟ್ಟಿ ಶಿವನ ಬದಲಿಗೆ ಕನ್ನಡಿಯನ್ನು ಪ್ರತಿಷ್ಠಾಪಿಸಿ ದೇವರು ನಿಮ್ಮೊಳಗೇ ಇದ್ದಾನೆ, ಹೊರಗೆ ಹುಡುಕುವ ಅಗತ್ಯ ಇಲ್ಲ ಎನ್ನುವ ಸಂದೇಶ ನೀಡಿದ್ದರು ಎಂದು ವಿವರಿಸಿದರು.

ದೇವಸ್ಥಾನಗಳನ್ನು ಕಟ್ಟಿ ಕೆಳ ಜಾತಿಯ ಅರ್ಚಕರುಗಳನ್ನು ನೇಮಿಸಿದ್ದು ನಾರಾಯಣಗುರುಗಳ ಮತ್ತೊಂದು ಕ್ರಾಂತಿಯಾಗಿತ್ತು. ಆದರೆ ಎಷ್ಟು ಮಂದಿ ಹಿಂದುಳಿದವರು ಇಂದು ಕೆಳ ಜಾತಿಯ ಅರ್ಚಕರನ್ನು ಕರೆಸುತ್ತಾರೆ, ನಂಬುತ್ತಾರೆ ಎನ್ನುವುದನ್ನು ಪ್ರಶ್ನಿಸಬೇಕಿದೆ ಎಂದರು.

ನಾರಾಯಣಗುರುಗಳು ಶಿಕ್ಷಣದ ಮೂಲಕ ಸ್ವಾತಂತ್ರ್ಯ ಗಳಿಸಿ ಎಂದು ಕರೆ ನೀಡುವುದರ ಹಿಂದೆ ಶಾಲಾ ಶಿಕ್ಷಣದ ಜೊತೆಗೆ ಸಾಮಾಜಿಕ‌ ಶಿಕ್ಷಣವನ್ನೂ ಪಡೆಯುವ ಮೂಲಕ ಶೋಷಕ, ಶೋಷಿತ ಮತ್ತು ಗುಲಾಮಗಿರಿ ಮನಸ್ಥಿತಿಯಿಂದ ಮುಕ್ತಿ ಹೊಂದಿ ಎನ್ನುವುದಾಗಿತ್ತು. ಆದರ್ಶಗಳನ್ನು ಅಳಿಸಿ ಕೇವಲ ಮಾತುಗಳಿಗೆ ಮಾತ್ರ ಮಾನ್ಯತೆ ನೀಡಿದರೆ ಅಪಾರ್ಥದ ಆಚರಣೆಗಳಿಗೆ ದಾರಿ ಮಾಡಿ ಕೊಡುತ್ತದೆ. ಅಂಬೇಡ್ಕರ್, ನಾರಾಯಣಗುರುಗಳು ಮೀಸಲಾತಿಯನ್ನು ಜಾತ್ಯತೀತ ಸಮಾಜ ನಿರ್ಮಾಣದ ಭಾಗವಾಗಿ ಬೆಂಬಲಿಸಿದ್ದರು. ಆದರೆ ಇಂದು ಮೀಸಲಾತಿ ಚಳವಳಿ ಜಾತೀಯತೆಯ ಭಾಗವಾಗಿ ನಡೆಯುತ್ತಿದೆ. ಎಲ್ಲಾ ಜಾತಿಯವರಿಗೂ ಮೀಸಲಾತಿ, ಒಳ ಮೀಸಲಾತಿ ಬೇಕಾಗಿದೆ. ಹೀಗಾಗಿ ಇಂದು ಮೀಸಲಾತಿಯ ಹೋರಾಟ ಜಾತಿ ಸಮಾಜವನ್ನು ಗಟ್ಟಿಗೊಳಿಸುವ ಭಾಗವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವಾಗಲೂ ಒಂದು ಮಾತು ಹೇಳ್ತಾರೆ. "ಶಿಕ್ಷಣ ಪಡೆದವರೇ ಹೆಚ್ಚೆಚ್ಚು ಜಾತಿವಾದಿಗಳಾಗುತ್ತಿದ್ದಾರೆ ಎನ್ನುವ ಮಾತನ್ನು ಪದೇ ಪದೇ ಹೇಳುತ್ತಾರೆ. ಈ ಎಲ್ಲಾ ಕಾರಣಗಳಿಂದ ಇಂದು ಜಾತ್ಯಾತೀತತೆಯ ಮಾರ್ಯಾದಾ ಹತ್ಯೆ ನಡೆಯುತ್ತಿದೆ. ಜಾತಿ ಜಾತಿಯವರನ್ನೇ ಸುತ್ತ ತುಂಬಿಕೊಂಡು ಓಡಾಡುವುದೇ ದೊಡ್ಡ ಶಕ್ತಿ ಅನ್ನಿಸಿಕೊಳ್ಳುವ ದುರಂತದ ಸಾಮಾಜಿಕ, ರಾಜಕೀಯ ಸಂದರ್ಭವನ್ನು ನಾವು ನೋಡುತ್ತಿದ್ದೇವೆ. ಆದ್ದರಿಂದ ಧಾರ್ಮಿಕ ಸಹಿಷ್ಣುತೆ ಮತ್ತು ವಿಶ್ವಬಂಧುತ್ವವನ್ನು ಆಚರಿಸುವ ಮೂಲಕ ನಾರಾಯಣಗುರುಗಳ ಆದರ್ಶಗಳಿಗೆ ನಾವು ಚೈತನ್ಯ ತುಂಬಬೇಕಿದೆ ಎಂದರು.

ಯಾವುದೇ ಧರ್ಮವಿರಲಿ, ಮನುಷ್ಯನನ್ನು ಉತ್ತಮಗೊಳಿಸಿದರೆ ಸಾಕು ಎನ್ನುವುದು ಅವರ ವಿಶಾಲ ದೃಷ್ಟಿಕೋನವಾಗಿತ್ತು. ಎಲ್ಲಾ ರೀತಿಯ ತಾರತಮ್ಯದ ಮನಸ್ಥಿತಿಯಿಂದ ಮುಕ್ತವಾದ ಅಪ್ಪಟ ಮನುಷ್ಯನನ್ನು ರೂಪಿಸುವುದೇ ನಾರಾಯಣಗುರುಗಳ ಬದುಕಿನ‌ ಸಂದೇಶವಾಗಿತ್ತು ಎನ್ನುವುದನ್ನು ನಾವು ಮರೆಯಬಾರದು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X