Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಕನ್ನಡ ಸಂಸ್ಕೃತ, ಪ್ರಾಕೃತದಿಂದ ಹುಟ್ಟಿದೆ...

ಕನ್ನಡ ಸಂಸ್ಕೃತ, ಪ್ರಾಕೃತದಿಂದ ಹುಟ್ಟಿದೆ ಎಂದ ಯದುವೀರ್‌ ಒಡೆಯರ್ ಕ್ಷಮೆ ಯಾಚಿಸಲಿ : ನಾರಾಯಣಗೌಡ

ವಾರ್ತಾಭಾರತಿವಾರ್ತಾಭಾರತಿ30 May 2025 11:22 PM IST
share
ಕನ್ನಡ ಸಂಸ್ಕೃತ, ಪ್ರಾಕೃತದಿಂದ ಹುಟ್ಟಿದೆ ಎಂದ ಯದುವೀರ್‌ ಒಡೆಯರ್ ಕ್ಷಮೆ ಯಾಚಿಸಲಿ : ನಾರಾಯಣಗೌಡ

ಬೆಂಗಳೂರು : ಕಮಲ್ ಹಾಸನ್ ಹೇಳಿಕೆಗೆ ಪ್ರತಿಕ್ರಿಯೆ ನೀಡುವ ಭರದಲ್ಲಿ ಸಂಸದ ಯದುವೀರ ಒಡೆಯರ್ ಅತ್ಯಂತ ಬೇಜವಾಬ್ದಾರಿಯ ಸುಳ್ಳು ಹೇಳಿಕೆಯನ್ನು ನೀಡಿದ್ದಾರೆ. ಕನ್ನಡ ಹುಟ್ಟಿದ್ದು ಸಂಸ್ಕೃತ ಮತ್ತು ಪಾಕೃತ ಭಾಷೆಗಳಿಂದ ಎಂದು ಅವರು ಹೇಳಿದ್ದನ್ನು ಗಮನಿಸಿದ್ದೇನೆ. ಕೂಡಲೇ ಕನ್ನಡಿಗರ ಕ್ಷಮೆ ಕೇಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಆಗ್ರಹಿಸಿದ್ದಾರೆ.

ಶುಕ್ರವಾರ ನಗರದ ಖಾಸಗಿ ಹೊಟೇಲ್‍ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಭಾಷೆಗಳ ಉಗಮದ ಬಗ್ಗೆ ಕನಿಷ್ಠ ತಿಳಿವಳಿಕೆ ಇರುವವರು ಇಂಥ ಮೂರ್ಖ ಹೇಳಿಕೆಯನ್ನು ನೀಡಲು ಸಾಧ್ಯವಿಲ್ಲ. ಕರ್ನಾಟಕದಲ್ಲಿ ಕೆಲವು ಸಂಸ್ಕೃತ ಪ್ರಿಯರು ಆಗಾಗ ಇಂಥ ಮತಿಗೆಟ್ಟ ಹೇಳಿಕೆಗಳನ್ನು ನೀಡುತ್ತಿರುತ್ತಾರೆ. ಸಂಸ್ಕೃತ ಎಲ್ಲ ಭಾರತೀಯ ಭಾಷೆಗಳ ತಾಯಿ ಎಂದು ಕೆಲವರು ಆಗಾಗ ಹೇಳಿ ತಮ್ಮ ಬಾಯಿಚಪಲ ತೀರಿಸಿಕೊಳ್ಳುತ್ತಾರೆ. ಅಂತವರಿಗೆ ಮಾನಸಿಕ ಚಿಕಿತ್ಸೆ ನೀಡುವ ಅಗತ್ಯವಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತಮಿಳು ನಟ ಕಮಲ್ ಹಾಸನ್ ತಮ್ಮ ಥಗ್‍ಲೈಫ್ ಸಿನೆಮಾಗೆ ಸಂಬಂಧಿಸಿದ ಕಾರ್ಯಕ್ರಮವೊಂದರಲ್ಲಿ, ಕನ್ನಡವು ತಮಿಳಿನಿಂದ ಹುಟ್ಟಿದ ಭಾಷೆ ಎಂದು ಹಿರಿಯ ನಟ ಡಾ.ಶಿವರಾಜ್ ಕುಮಾರ್ ಅವರ ಮುಂದೆಯೇ, ಅವರನ್ನು ಉದ್ದೇಶಿಸಿಯೇ ಹೇಳಿದ್ದರು. ತಕ್ಷಣ ಖಂಡಿಸಲು ಸಾಧ್ಯವಾಗದೇ ಇರಬಹುದು. ಆದರೆ ಶಿವರಾಜ ಕುಮಾರ್ ಅವರು ನಂತರವೂ ಕಮಲ್ ಹಾಸನ್ ಅವರನ್ನು ಸಮರ್ಥಿಸುವಂತೆಯೇ ಮಾತನಾಡಿರುವುದು ಆಘಾತ ತಂದಿದೆ ಎಂದರು.

ಕಮಲ್ ಹಾಸನ್ ತಮ್ಮ ಮಾತಿಗೆ ಕನ್ನಡಿಗರ ಕ್ಷಮೆ ಯಾಚಿಸಬೇಕು ಎಂಬ ಒಂದು ಮಾತು ಕೂಡ ಶಿವರಾಜ್ ಕುಮಾರ್ ಅವರಿಂದ ಬಂದಿಲ್ಲ. ಅವರು ಕಮಲ್ ಹಾಸನ್ ಅವರ ದೊಡ್ಡ ಅಭಿಮಾನಿಯಂತೆ. ಬಹಳ ಹಿಂದೆ ಅವರನ್ನು ಮೊದಲು ಭೇಟಿಯಾಗಿ ಸ್ಪರ್ಶಿಸಿದ ನಂತರ ಮೂರು ದಿನ ಸ್ನಾನವನ್ನೇ ಮಾಡಿರಲಿಲ್ಲವಂತೆ. ಇದೆಲ್ಲವನ್ನೂ ಕೇಳಿದಾಗ ಒಬ್ಬ ನಟನ ಮೇಲಿನ ಅಭಿಮಾನಕ್ಕಾಗಿ ಶಿವರಾಜ್ ಕುಮಾರ್ ಅವರು ಕನ್ನಡದ ಮೇಲಿನ ಅಭಿಮಾನವನ್ನು ಅಡವಿಟ್ಟುಬಿಟ್ಟರಾ ಎಂಬ ಪ್ರಶ್ನೆ ಈಗ ಉದ್ಭವಿಸಿದೆ ಎಂದು ಹೇಳಿದರು.

ಕನ್ನಡ ಚಳವಳಿಯ ಜ್ವಾಲೆಯನ್ನು ಇಡೀ ಕರ್ನಾಟಕದಾದ್ಯಂತ ಹೊತ್ತಿಸಿ, ಕನ್ನಡಿಗರಲ್ಲಿ ಸ್ವಾಭಿಮಾನವನ್ನು ಬಡಿದೆಬ್ಬಿಸಿದ ಡಾ. ರಾಜಕುಮಾರ್ ಅವರು ನಮ್ಮ ಆದರ್ಶ. ಅವರ ಮಕ್ಕಳಿಂದಲೂ, ಕುಟುಂಬಸ್ಥರಿಂದಲೂ ನಾವು ಅದೇ ಬಯಸುತ್ತೇವೆ. ಅಣ್ಣಾವ್ರನ್ನು ನಾವು ಕೇವಲ ಮೇರು ನಟ ಎಂದು ಗುರುತಿಸುವುದಿಲ್ಲ. ಅವರು ಕನ್ನಡದ ಮಹಾನ್ ಸಂಕೇತ. ಅಂಥವರ ಹಿರಿಯ ಮಗನಾಗಿ ಶಿವರಾಜಕುಮಾರ್ ಅವರಿಂದ ನಮ್ಮ ನಿರೀಕ್ಷೆಗಳು ಬಹಳ ಇದ್ದೇ ಇರುತ್ತವೆ. ಆದರೆ ಕನ್ನಡವು ತಮಿಳಿನಿಂದ ಹುಟ್ಟಿತು ಎಂಬ ಕಪೋಲಕಲ್ಪಿತ, ವಿಕೃತ ಸುಳ್ಳನ್ನು ಕೇಳಿಯೂ ಅವರಲ್ಲಿ ಸ್ವಾಭಿಮಾನದ ಮಾತುಗಳು ಬರುತ್ತಿಲ್ಲ ಎಂದರೆ ಆಶ್ಚರ್ಯವಾಗುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು.

ಡಾ.ರಾಜಕುಮಾರ್ ಅವರನ್ನು ಪ್ರೀತಿಸಿದಂತೆಯೇ ನಾವು ಡಾ.ಶಿವರಾಜ್ ಕುಮಾರ್ ಅವರನ್ನೂ ಪ್ರೀತಿಸುತ್ತೇವೆ. ಅವರು ಅನಾರೋಗ್ಯದಿಂದ ಇದ್ದಾಗ ಇಡೀ ಕರ್ನಾಟಕ ಅವರು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸಿತ್ತು. ಕನ್ನಡ, ಕನ್ನಡಿಗ, ಕರ್ನಾಟಕ ಅವರಿಗೆ ಎಲ್ಲವನ್ನೂ ಕೊಟ್ಟಿದೆ. ಕನ್ನಡದಿಂದ ನಾವೇ ಹೊರತು ನಮ್ಮಿಂದ ಕನ್ನಡವಲ್ಲ. ಇದು ಶಿವರಾಜ ಕುಮಾರ್ ಅವರಿಗೆ ಅರ್ಥವಾಗಲಿ ಎಂದು ಅಭಿಪ್ರಾಯಪಟ್ಟರು.

ಕನ್ನಡ ತಮಿಳಿನಿಂದ ಹುಟ್ಟಿತು, ಕನ್ನಡ ಸಂಸ್ಕೃತದಿಂದ ಹುಟ್ಟಿತು ಎನ್ನುವವರು ಇನ್ನು ಮುಂದೆ ಎಚ್ಚರಿಕೆಯಿಂದ ಮಾತನಾಡಬೇಕು. ಇಂಥ ಕನ್ನಡ ವಿರೋಧಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ತೀವ್ರ ಸ್ವರೂಪದ ಹೋರಾಟ ಹಮ್ಮಿಕೊಳ್ಳಲಿದೆ ಎಂದು ಎಚ್ಚರಿಕೆ ನೀಡಿದರು.

ಚಿತ್ರ ಬಿಡುಗಡೆಯಾದರೆ ಬೆಂಕಿ ಹಚ್ಚುತ್ತೇವೆ: ಕಮಲ್ ಹಾಸನ್ ಅವರ ಥಗ್‍ಲೈಫ್ ಸಿನೆಮಾ ಕರ್ನಾಟಕದಲ್ಲಿ ಬಿಡುಗಡೆ ಮಾಡಲು ಬಿಡುವುದಿಲ್ಲ. ಒಂದು ವೇಳೆ ಯಾವುದಾದರೂ ಚಿತ್ರಮಂದಿರಗಳಲ್ಲಿ ಬಿಡುಗಡೆಯಾದರೆ ಬೆಂಕಿ ಹಚ್ಚುತ್ತೇವೆ. ಕಮಲ್ ಹಾಸನ್ ಅವರು ಕ್ಷಮೆ ಕೇಳದೇ ಇದ್ದರೆ ಅವರ ಯಾವ ಸಿನೆಮಾಗಳೂ ಸಹ ಕರ್ನಾಟಕದಲ್ಲಿ ಬಿಡುಗಡೆ ಆಗಲು ಬಿಡುವುದಿಲ್ಲ ಎಂದು ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಎಚ್ಚರಿಕೆ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X