Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಸರಕಾರಿ ಉದ್ಯೋಗಕ್ಕೆ ಇಂಗ್ಲಿಷ್‌ ಕಡ್ಡಾಯ:...

ಸರಕಾರಿ ಉದ್ಯೋಗಕ್ಕೆ ಇಂಗ್ಲಿಷ್‌ ಕಡ್ಡಾಯ: ಆಡಳಿತ ಭಾಷೆ ಕನ್ನಡವಾದ ಮೇಲೆ ಇಂಗ್ಲಿಷ್‌ ಪರೀಕ್ಷೆಯ ಅಗತ್ಯವೇನು?: ನಾರಾಯಣಗೌಡ

ವಾರ್ತಾಭಾರತಿವಾರ್ತಾಭಾರತಿ3 Sept 2026 10:25 PM IST
share
ಸರಕಾರಿ ಉದ್ಯೋಗಕ್ಕೆ ಇಂಗ್ಲಿಷ್‌ ಕಡ್ಡಾಯ: ಆಡಳಿತ ಭಾಷೆ ಕನ್ನಡವಾದ ಮೇಲೆ ಇಂಗ್ಲಿಷ್‌ ಪರೀಕ್ಷೆಯ ಅಗತ್ಯವೇನು?: ನಾರಾಯಣಗೌಡ


ಬೆಂಗಳೂರು : ‘ಕನ್ನಡವನ್ನು ಆಡಳಿತ ಭಾಷೆಯನ್ನಾಗಿ ಘೋಷಿಸಿರುವ ಸಂದರ್ಭದಲ್ಲಿ, ಸರಕಾರಿ ಉದ್ಯೋಗ ನೇಮಕಾತಿ ಪರೀಕ್ಷೆಯಲ್ಲಿ ಆಂಗ್ಲಭಾಷಾ ಜ್ಞಾನ ಕಡ್ಡಾಯಗೊಳಿಸುವ ಮೂಲಕ ಇಂಗ್ಲಿಷ್‌ ಗೊತ್ತಿಲ್ಲದ ಕನ್ನಡಿಗರನ್ನು ಸರಕಾರಿ ಉದ್ಯೋಗದಿಂದ ದೂರವಿಡಲು ಮುಂದಾಗಿರುವುದು ಖಂಡನೀಯ. ಇದರ ಹಿಂದೆ ಪರಭಾಷಾ ಐಎಎಸ್ ಲಾಬಿ ಇರುವುದು ಸ್ಪಷ್ಟ. ಸರಕಾರ ಇಂತಹ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು’ ಎಂದು ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಆಗ್ರಹಿಸಿದ್ದಾರೆ.

ಗುರುವಾರ ಪ್ರಕಟಣೆ ನೀಡಿರುವ ಅವರು, ‘ಕನ್ನಡವೇ ಸರಕಾರದ ಆಡಳಿತ ಭಾಷೆ. ಸರಕಾರದ ಕಚೇರಿಗಳಲ್ಲಿ ಆಡಳಿತ, ಕಡತ ವಿಲೇವಾರಿ, ಪತ್ರ ವ್ಯವಹಾರ ಹಾಗೂ ಸಾರ್ವಜನಿಕ ಸೇವೆಗಳು ಕನ್ನಡದಲ್ಲೇ ನಡೆಯಬೇಕೆಂಬುದು ಸರಕಾರದ ನೀತಿಯಾಗಿದೆ. ಹೀಗಿರುವಾಗ ಸರಕಾರಿ ಉದ್ಯೋಗಕ್ಕೆ ನೇಮಕಾತಿ ವೇಳೆ ಇಂಗ್ಲಿಷ್‌ ಜ್ಞಾನವನ್ನು ಕಡ್ಡಾಯಗೊಳಿಸುವ ಅಗತ್ಯವಾದರೂ ಏನು?. ಐಎಎಸ್ ಬಾಬುಗಳಿಗೆ ಕರ್ನಾಟಕದಲ್ಲಿ ಕನ್ನಡ ಆಡಳಿತ ಭಾಷೆಯಾಗಿ ಇರುವುದು ಇಷ್ಟವಿಲ್ಲ ಎಂಬ ಕಾರಣಕ್ಕೆ ಈ ರೀತಿ ಮಾಡುತ್ತಿದ್ದಾರಲ್ಲವೇ?’ ಎಂದು ಪ್ರಶ್ನಿಸಿದ್ದಾರೆ.

‘ಸರಕಾರಿ ಉದ್ಯೋಗಕ್ಕೆ ಅರ್ಹತೆ ಪಡೆಯಬೇಕಾದ ಕನ್ನಡಿಗನಿಗೆ ಇಂಗ್ಲಿಷ್‌ ಗೊತ್ತಿಲ್ಲ ಎಂಬ ಒಂದೇ ಕಾರಣಕ್ಕೆ ಅವಕಾಶ ನಿರಾಕರಿಸುವುದು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾದ ಕ್ರಮ. ಇದು ಗ್ರಾಮೀಣ ಪ್ರದೇಶದ ಕನ್ನಡಿಗರು, ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪಡೆದ ಯುವಜನರು ಹಾಗೂ ಇಂಗ್ಲಿಷ್‌ ಶಿಕ್ಷಣದ ಅವಕಾಶ ಸಿಗದ ಪ್ರತಿಭಾವಂತ ಅಭ್ಯರ್ಥಿಗಳಿಗೆ ಅನ್ಯಾಯ ಮಾಡಿದಂತಾಗುತ್ತದೆ’ ಎಂದು ಅವರು ಆಕ್ಷೇಪಿಸಿದ್ದಾರೆ.

‘ಸರಕಾರದ ಆಡಳಿತ ಭಾಷೆ ಕನ್ನಡವಾಗಿರುವುದರಿಂದ ಸರಕಾರಿ ಸೇವೆಗೆ ಅಗತ್ಯವಿರುವ ಭಾಷಾ ಜ್ಞಾನ ಕನ್ನಡವಾಗಿರಬೇಕು. ಯಾವುದೇ ಸಂದರ್ಭದಲ್ಲಿ ಆಡಳಿತಾತ್ಮಕವಾಗಿ ಇಂಗ್ಲಿಷ್‌ ನಲ್ಲಿರುವ ಮಾಹಿತಿಯ ಅಗತ್ಯವಿದ್ದರೆ, ಸರಕಾರದಲ್ಲೇ ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಅನುವಾದ ಇಲಾಖೆಯ ಮೂಲಕ ಅದನ್ನು ಕನ್ನಡಕ್ಕೆ ಅನುವಾದಿಸಿಕೊಳ್ಳಲು ಅವಕಾಶವಿದೆ. ಅನುವಾದ ವ್ಯವಸ್ಥೆ ಇರುವಾಗ ಸರಕಾರಿ ಉದ್ಯೋಗಕ್ಕೆ ಇಂಗ್ಲಿಷ್‌ ಜ್ಞಾನವನ್ನು ಕಡ್ಡಾಯಗೊಳಿಸುವುದು ಅರ್ಥಹೀನ’ ಎಂದು ಅವರು ಟೀಕಿಸಿದ್ದಾರೆ.

‘ರಾಜ್ಯ ಸರಕಾರವು ಒಂದು ಕಡೆ ಕನ್ನಡವನ್ನು ಆಡಳಿತ ಭಾಷೆಯನ್ನಾಗಿ ಘೋಷಿಸಿ, ಮತ್ತೊಂದು ಕಡೆ ಉದ್ಯೋಗಗಳ ನೇಮಕಾತಿಯಲ್ಲಿ ಇಂಗ್ಲಿಷ್‌ ಅನ್ನು ಕಡ್ಡಾಯಗೊಳಿಸುವುದು ದ್ವಂದ್ವ ನೀತಿಯಾಗಿದೆ. ಕನ್ನಡವನ್ನು ಆಡಳಿತ ಭಾಷೆಯನ್ನಾಗಿ ಮಾಡುವ ಸರಕಾರದ ಘೋಷಣೆ ಕೇವಲ ಕಡತಗಳಿಗೆ ಸೀಮಿತವಾಗದೆ, ಸರಕಾರಿ ನೇಮಕಾತಿ ವ್ಯವಸ್ಥೆಯಲ್ಲಿಯೂ ಪ್ರತಿಫಲಿಸಬೇಕು. ಕನ್ನಡಿಗರಿಗೆ ಸರಕಾರಿ ಉದ್ಯೋಗದ ಬಾಗಿಲು ತೆರೆಯಬೇಕೇ ಹೊರತು, ಭಾಷೆಯ ಹೆಸರಿನಲ್ಲಿ ಮುಚ್ಚಬಾರದು. ಕನ್ನಡ ಮಾಧ್ಯಮದಲ್ಲಿ ಓದಿದ ಅಭ್ಯರ್ಥಿಯ ಪ್ರತಿಭೆ, ಸಾಮಥ್ರ್ಯ ಮತ್ತು ಅರ್ಹತೆಯನ್ನು ಕೇವಲ ಇಂಗ್ಲಿಷ್‌ ಜ್ಞಾನದ ಕೊರತೆಯ ಕಾರಣಕ್ಕೆ ತಿರಸ್ಕರಿಸುವ ಯಾವುದೇ ನಿಯಮವನ್ನು ವೇದಿಕೆ ಒಪ್ಪುವುದಿಲ್ಲ ಎಂದು ಹೇಳಿದ್ದಾರೆ.

‘ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಈ ವಿಚಾರವನ್ನು ತಕ್ಷಣ ಗಂಭೀರವಾಗಿ ಪರಿಗಣಿಸಿ, ಸರಕಾರಿ ನೇಮಕಾತಿ ಪರೀಕ್ಷೆಯ ನಿಯಮಾವಳಿಯಲ್ಲಿ ಅಗತ್ಯ ಬದಲಾವಣೆಗಳನ್ನು ಮಾಡಿಸಬೇಕು. ಸರಕಾರಿ ಉದ್ಯೋಗಗಳಿಗೆ ಅನಗತ್ಯವಾಗಿ ಇಂಗ್ಲಿಷ್‌ ಅನ್ನು ಕಡ್ಡಾಯಗೊಳಿಸುವ ಕ್ರಮವನ್ನು ಕೈಬಿಟ್ಟು, ಕನ್ನಡಕ್ಕೆ ಸೂಕ್ತ ಮತ್ತು ನ್ಯಾಯಯುತ ಸ್ಥಾನಮಾನ ಕಲ್ಪಿಸಬೇಕು’ ಎಂದು ನಾರಾಯಣಗೌಡ ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X