ರಾಷ್ಟ್ರೀಯ ಏಕತಾ ದಿವಸ್ ಆಚರಣೆ: ಪ್ರತಿಜ್ಞಾ ವಿಧಿ ಬೋಧಿಸಿದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್

ಬೆಂಗಳೂರು, ಅ.31: ಭಾರತದ ಮೊದಲ ಗೃಹ ಸಚಿವ ಹಾಗೂ ಉಕ್ಕಿನ ಮನುಷ್ಯ ಎಂದೇ ಪ್ರಸಿದ್ಧರಾದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 151ನೇ ಜನ್ಮದಿನದ ಅಂಗವಾಗಿ ರಾಷ್ಟ್ರೀಯ ಏಕತಾ ದಿವಸವನ್ನು ಆಚರಿಸಲಾಯಿತು.
ಈ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ಕರ್ನಾಟಕ ಸರ್ಕಾರದ ಸಚಿವಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ರಾಷ್ಟ್ರೀಯ ಏಕತಾ ಪ್ರತಿಜ್ಞಾ ವಿಧಿ ಬೋಧಿಸಿದರು.
ದೇಶದ ಏಕತೆ, ಅಖಂಡತೆ ಮತ್ತು ಭದ್ರತೆಯನ್ನು ಕಾಪಾಡುವಲ್ಲಿ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯನ್ನು ಸ್ಮರಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಈ ಕಾರ್ಯಕ್ರಮದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಒಗ್ಗಟ್ಟಿನಿಂದ ರಾಷ್ಟ್ರದ ಏಕತೆ ಹಾಗೂ ಸಮಗ್ರತೆಯನ್ನು ಎತ್ತಿಹಿಡಿಯುವ ಸಂಕಲ್ಪ ಮಾಡಿದರು.
ಈ ಸಂದರ್ಭದಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳಾದ ಪಂಕಜ್ ಕುಮಾರ್ ಪಾಂಡೆ, ಜಗದೀಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಚಿವಾಲಯದ ಸಿಬ್ಬಂದಿ ಉಪಸ್ಥಿತರಿದ್ದರು.
Next Story




