Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಅಣೆಕಟ್ಟುಗಳ ಸುರಕ್ಷತೆ ಕುರಿತು ತಾಂತ್ರಿಕ...

ಅಣೆಕಟ್ಟುಗಳ ಸುರಕ್ಷತೆ ಕುರಿತು ತಾಂತ್ರಿಕ ಸಮಿತಿ ವರದಿ ಬಂದ ಬಳಿಕ ಅಗತ್ಯ ಕಾಮಗಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ20 July 2025 3:03 PM IST
share
ಅಣೆಕಟ್ಟುಗಳ ಸುರಕ್ಷತೆ ಕುರಿತು ತಾಂತ್ರಿಕ ಸಮಿತಿ ವರದಿ ಬಂದ ಬಳಿಕ ಅಗತ್ಯ ಕಾಮಗಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

ಕಬಿನಿ, ಜು.20: "ರಾಜ್ಯದ ಅಣೆಕಟ್ಟುಗಳ ಸುರಕ್ಷತೆ ಕುರಿತು ಸರ್ಕಾರ ತಾಂತ್ರಿಕ ಸಮಿತಿ ರಚಿಸಿದ್ದು, ಈ ಸಮಿತಿ ವರದಿ ಬಂದ ನಂತರ ಅಗತ್ಯ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಳ್ಳಲಾಗುವುದು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಕಬಿನಿ ಅಣೆಕಟ್ಟಿನ ಬಳಿ ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದರು.

"ಕೆಆರ್ ಎಸ್ ಅಣೆಕಟ್ಟಿನ ನಂತರ ಇಂದು ಕಬಿನಿಯಲ್ಲಿ ಬಾಗಿನ ಅರ್ಪಣೆ ಮಾಡಿದ್ದೇವೆ. ಈ ಮಧ್ಯೆ ಎರಡು ವರ್ಷ ಅಣೆಕಟ್ಟು ಭರ್ತಿ ಆಗಿರಲಿಲ್ಲ. ಈ ವರ್ಷ ತುಂಬಿದೆ. ಕಬಿನಿಯಿಂದ ನಮಗೆ ಕಷ್ಟ ಕಾಲದಲ್ಲೂ ಸಹಾಯವಾಗುತ್ತಿದೆ. ಈ ಪ್ರದೇಶ ವಿಸ್ತರಣೆ ಮಾಡಬೇಕು ಎಂದು ನಮ್ಮ ಶಾಸಕರು ಪ್ರಸ್ತಾವನೆ ನೀಡಿದ್ದಾರೆ. ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸುಮಾರು 35 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಅನುಮೋದನೆ ನೀಡಿದ್ದೇವೆ. ಈ ಭಾಗದಲ್ಲಿ 88 ಕೋಟಿ ಮೊತ್ತದ ಹನಿ ನೀರಾವರಿ ಯೋಜನೆಗೆ ಡಿಪಿಆರ್ ಸಿದ್ಧಗೊಳಿಸಿ ಪ್ರಸ್ತಾವನೆ ಸಲ್ಲಿಸಿದ್ದೇವೆ" ಎಂದು ತಿಳಿಸಿದರು.

"ತುಂಗಭದ್ರಾ ಅಣೆಕಟ್ಟು ಗೇಟ್ ದುರಸ್ತಿಯಾದ ಬಳಿಕ ರಾಜ್ಯದ ಎಲ್ಲಾ ಅಣೆಕಟ್ಟುಗಳ ಸುರಕ್ಷತೆ ವಿಚಾರದಲ್ಲಿ ತಾಂತ್ರಿಕ ಸಮಿತಿ ರಚಿಸಲಾಗಿದೆ. ಈ ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳುತ್ತೇವೆ" ಎಂದರು.

ಕಬಿನಿ ಉತ್ಸವ ಮಾಡುವ ಬಗ್ಗೆ ಒತ್ತಾಯ ಇದೆ ಎಂದು ಕೇಳಿದಾಗ, "ಈ ಬಗ್ಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಈ ಬಗ್ಗೆ ಜಿಲ್ಲಾ ಸಚಿವರು ಹಾಗೂ ಇತರರೊಂದಿಗೆ ಚರ್ಚೆ ಮಾಡುತ್ತೇನೆ. ಕಬಿನಿ ಉತ್ಸವ, ಕಾವೇರಿ ಆರತಿ ಮಾಡಲು ನಾವು ಚರ್ಚೆ ಮಾಡುತ್ತಿದ್ದೇವೆ. ಈ ಕಾರ್ಯಕ್ರಮಗಳ ಮೂಲಕ ಪ್ರವಾಸೋದ್ಯಮ ಆಕರ್ಷಣೆ ಹಾಗೂ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಲು ನಮ್ಮ ಸರ್ಕಾರ ಸಂಕಲ್ಪ ಮಾಡಿದೆ" ಎಂದು ಹೇಳಿದರು.

ಬಟಾನಿಕಲ್ ಗಾರ್ಡನ್ ಮಾಡುವ ಯೋಜನೆ ನೆನೆಗುದಿಗೆ ಬಿದ್ದಿದೆಯಲ್ಲ ಎಂದು ಕೇಳಿದಾಗ, "ಇದಕ್ಕೆ ಬಂಡವಾಳ ಹೂಡಿಕೆ ಮಾಡುವವರು ಮುಂದೆ ಬರಬೇಕು. ನಮ್ಮ ಆದ್ಯತೆ ಇರುವುದು ನೀರಿನ ಸಮರ್ಪಕ ಬಳಕೆ ಹಾಗೂ ಅಣೆಕಟ್ಟು ಸುರಕ್ಷತೆ ಬಗ್ಗೆ ಇದೆ"ಎಂದು ಹೇಳಿದರು.

ಖಾಸಗಿ ಕೆಲಸದ ನಿಮಿತ್ತ ಪ್ರಯಾಣ

ದಿಢೀರನೆ ದೆಹಲಿ ಪ್ರವಾಸದ ಬಗ್ಗೆ ಕೇಳಿದಾಗ, "ನಾನು ಸಿಎಂಗೆ ಮಾಹಿತಿ ನೀಡಿ ನಾನು ಕಾರ್ಯಕ್ರಮದಿಂದ ಹೊರಟೆ. ಮಾರ್ಗ ಮಧ್ಯದಲ್ಲೇ ನನ್ನ ಬೆಂಗಾವಲು ವಾಹನ ಅಪಘಾತಕ್ಕೀಡಾಯಿತು. ತಾಯಿ ಚಾಮುಂಡೇಶ್ವರಿ ಕೃಪೆ ಯಾರಿಗೂ ಅಪಾಯವಾಗಿಲ್ಲ. ವಕೀಲರ ಜೊತೆ ಸಭೆ ನಿಗದಿಯಾದ ಕಾರಣ, ನಾನು 7.30ಕ್ಕೆ ತೆರಳಿ, 9.30ಕ್ಕೆ ವಾಪಸ್ ಬಂದಿದ್ದೇನೆ. ನಂತರ ಇಂದಿನ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದೇನೆ. ನನ್ನ ಖಾಸಗಿ ಕಾರ್ಯಕ್ರಮ ಹಿನ್ನೆಲೆಯಲ್ಲಿ ಹೋಗಿದ್ದು, ಅದನ್ನು ಮುಗಿಸಿಕೊಂಡು ಬಂದಿದ್ದೇನೆ. ಇದರ ಹೊರತಾಗಿ ರಾಜಕಾರಣವಿಲ್ಲ" ಎಂದು ಹೇಳಿದರು.

ಡಿ.ಕೆ. ಶಿವಕುಮಾರ್ ಅವರಿಗೆ ಅಪಮಾನ ಮಾಡಲಾಗಿದೆ ಎಂಬ ಬಿಜೆಪಿ ನಾಯಕರ ಹೇಳಿಕೆ ಬಗ್ಗೆ ಕೇಳಿದಾಗ, "ಅವರಿಗೆ ಯಾವಾಗಲೂ ನನ್ನ ಮೇಲೆ ಪ್ರೀತಿ ಜಾಸ್ತಿ. ನಾನು ಹೆಚ್ಚು ಬಲಿಷ್ಠವಾಗಿರುವುದಕ್ಕೆ ನನ್ನ ಮೇಲೆ ಪ್ರೀತಿ ಜಾಸ್ತಿ" ಎಂದು ಲೇವಡಿ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X