Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. 'ನೀಟ್-ಯುಜಿ 2026’ ಪರೀಕ್ಷೆ ರದ್ದು...

'ನೀಟ್-ಯುಜಿ 2026’ ಪರೀಕ್ಷೆ ರದ್ದು ಕೇಂದ್ರ ಸರಕಾರ ದೇಶದ ಯುವಜನತೆಗೆ ಬಗೆದ ಕ್ರೂರ ದ್ರೋಹ: ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ14 May 2026 3:04 PM IST
share
ನೀಟ್-ಯುಜಿ 2026’ ಪರೀಕ್ಷೆ ರದ್ದು ಕೇಂದ್ರ ಸರಕಾರ ದೇಶದ ಯುವಜನತೆಗೆ ಬಗೆದ ಕ್ರೂರ ದ್ರೋಹ: ಸಿದ್ದರಾಮಯ್ಯ

ಬೆಂಗಳೂರು: ದೇಶಾದ್ಯಂತ 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಬರೆದಿದ್ದ ‘ನೀಟ್-ಯುಜಿ 2026’ ಪರೀಕ್ಷೆಯನ್ನು ರದ್ದುಗೊಳಿಸಿರುವ ಕೇಂದ್ರ ಸರಕಾರದ ನಿರ್ಧಾರವು ಆಡಳಿತಾತ್ಮಕ ವೈಫಲ್ಯ ಮಾತ್ರವಲ್ಲ, ದೇಶದ ಯುವಜನತೆಗೆ ಬಗೆದ ಕ್ರೂರ ದ್ರೋಹವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಮುಖ್ಯಮಂತ್ರಿ, ಕರ್ನಾಟಕದ ಒಂದು ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಸೇರಿದಂತೆ ದೇಶದ 22 ಲಕ್ಷಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ತಿಂಗಳುಗಟ್ಟಲೆ ಶ್ರಮಪಟ್ಟು ಈ ಪರೀಕ್ಷೆ ಬರೆದಿದ್ದರು. ಪೋಷಕರು ತಮ್ಮ ಮಕ್ಕಳ ಭವಿಷ್ಯಕ್ಕಾಗಿ ತರಬೇತಿ, ಪ್ರಯಾಣ ಸೇರಿದಂತೆ ಸಾಕಷ್ಟು ಖರ್ಚುಗಳನ್ನು ಮಾಡಿದ್ದರು. ಆದರೆ ಕೇಂದ್ರದ ಒಂದು ನಿರ್ಧಾರ ಇಡೀ ವಿದ್ಯಾರ್ಥಿ ಸಮುದಾಯವನ್ನು ಅನಿಶ್ಚಿತತೆ ಮತ್ತು ಸಂಕಷ್ಟಕ್ಕೆ ತಳ್ಳಿದೆ.

2024ರಲ್ಲೇ ನಮ್ಮ ಸರ್ಕಾರವು ನೀಟ್ ಪರೀಕ್ಷೆಯು ಗ್ರಾಮೀಣ ಮತ್ತು ಬಡ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡುತ್ತದೆ. ಶಾಲಾ ಶಿಕ್ಷಣ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತದೆ ಮತ್ತು ದಾಖಲಾತಿ ವಿಚಾರದಲ್ಲಿ ರಾಜ್ಯಗಳ ಅಧಿಕಾರವನ್ನು ಕಸಿದುಕೊಳ್ಳುತ್ತದೆ ಎಂದು ಆಕ್ಷೇಪ ವ್ಯಕ್ತಪಡಿಸಿ, ಸದನ ನಿರ್ಣಯ ಕೈಗೊಂಡಿದ್ದೆವು. ಅಂದಿನ ನಮ್ಮ ಕಾಳಜಿ ಎಷ್ಟು ಸತ್ಯ ಮತ್ತು ಅನಿವಾರ್ಯವಾಗಿತ್ತು ಎನ್ನುವುದನ್ನು ಇಂದಿನ ಪರೀಕ್ಷಾ ರದ್ದತಿಯು ಸಾಬೀತುಪಡಿಸಿದೆ ಎಂದು ಹೇಳಿದ್ದಾರೆ.

ನೇಮಕಾತಿ ಪರೀಕ್ಷೆಗಳಿಂದ ಹಿಡಿದು ರಾಷ್ಟ್ರೀಯ ಪ್ರವೇಶ ಪರೀಕ್ಷೆಗಳವರೆಗೆ ಪೇಪರ್ ಲೀಕ್ ಪ್ರಕರಣಗಳು ಪ್ರತಿಭಾವಂತ ವಿದ್ಯಾರ್ಥಿಗಳ ಹಿತ ರಕ್ಷಣೆಯಲ್ಲಿ ನರೇಂದ್ರ ಮೋದಿ ಸರಕಾರದ ವೈಫಲ್ಯಕ್ಕೆ ಸಾಕ್ಷಿಯಾಗಿವೆ. ಹೊಣೆ ಹೊರಬೇಕಾದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಾಧ್ಯಮಗಳಿಂದ ದೂರ ಉಳಿದಿದ್ದಾರೆ. ಯುವಜನತೆಯ ಬಗ್ಗೆ ಕಿಂಚಿತ್ತೂ ಕಾಳಜಿಯಿಲ್ಲದ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಈ ಬಗ್ಗೆ ಪಾರದರ್ಶಕ, ಕಾಲಮಿತಿಯ ತನಿಖೆ ನಡೆಸಬೇಕು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕು. ಹೊಸ ಪರೀಕ್ಷಾ ವೇಳಾಪಟ್ಟಿಯ ಬಗ್ಗೆ ಕೂಡಲೇ ಸ್ಪಷ್ಟನೆ ನೀಡಬೇಕು ಮತ್ತು ಅಂತಹ ಪ್ರವೇಶ ಪರೀಕ್ಷೆಗಳನ್ನು ನಡೆಸುವ ರಾಜ್ಯಗಳ ಅಧಿಕಾರವನ್ನು ಪುನಃಸ್ಥಾಪಿಸಬೇಕು ಎಂಬುದು ಮುಖ್ಯಮಂತ್ರಿ ಒತ್ತಾಯಿಸಿದ್ದಾರೆ.

ಪೇಪರ್ ಲೀಕ್ನಿಂದ ತೊಂದರೆಗೀಡಾಗಿರುವ ಪ್ರತಿಯೊಬ್ಬ ವಿದ್ಯಾರ್ಥಿ ಮತ್ತು ಪೋಷಕರ ಜೊತೆ ನಾವಿದ್ದೇವೆ. ಅವರ ಪರಿಶ್ರಮಕ್ಕೆ ತಕ್ಕ ಫಲ ಸಿಗುವಂತೆ ಮಾಡುವುದು ಮತ್ತು ವಿದ್ಯಾರ್ಥಿಗಳ ಭವಿಷ್ಯವನ್ನು ರಕ್ಷಿಸುವುದು ನಮ್ಮ ಕರ್ತವ್ಯ ಎಂದು ಸಿದ್ದರಾಮಯ್ಯ ವಿದ್ಯಾರ್ಥಿಗಳಿಗೆ ಭರವಸೆ ನೀಡಿದ್ದಾರೆ.

Tags

NEET-UGSiddarmaiah
share
ವಾರ್ತಾಭಾರತಿ
ವಾರ್ತಾಭಾರತಿ
Next Story
X