ಕೆಲಸದಿಂದ ತೆಗೆದಿದ್ದಕ್ಕೆ ಬೆಂಗಳೂರಿನ ಕಂಪೆನಿಯೊಂದಕ್ಕೆ ಬಾಂಬ್ ಬೆದರಿಕೆ ಹಾಕಿದ ಯುವತಿ..!
ಬೆಂಗಳುರು, ನ.14: ಕಾರಣ ನೀಡದೆ ಏಕಾಏಕಿ ಉದ್ಯೋಗದಿಂದ ವಜಾಗೊಳಿಸಿದ್ದರಿಂದ ಬೇಸತ್ತ ಯುವತಿಯೊಬ್ಬಕೆ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಟಿ.ಸಿ.ಎಸ್ ಕಂಪನಿಗೆ ಹುಸಿ ಬಾಂಬ್ ಕರೆ ಮಾಡಿರುವ ಘಟನೆ ವರದಿಯಾಗಿದೆ.
ಬೆಳಗಾವಿ ಮೂಲದ ಯುವತಿ ಬೆಂಗಳೂರಿನ ಟಿ.ಸಿ.ಎಸ್ ಕಂಪೆನಿಯಲ್ಲಿ ಉದ್ಯೋಗ ಮಾಡುತ್ತಿದ್ದು, ಇತ್ತೀಚಿಗೆ ಕೆಲಸದಿಂದ ತೆಗೆಯಲಾಗಿತ್ತು. ಇನ್ನೂ, ಕೆಲಸ ಮಾಡುತ್ತಿದ್ದಾಗೆ ಯುವತಿ ಕ್ಯಾಬ್ ಚಾಲಕನನ್ನು ಪರಿಚಯ ಮಾಡಿಕೊಂಡಿದ್ದಳು. ಪರಿಚಿತ ಕ್ಯಾಬ್ ಚಾಲಕನಿಗೆ ಯುವತಿ ಕರೆ ಮಾಡಿ ಕಂಪೆನಿಯ ಬಿ ಬ್ಲಾಕ್ ನಲ್ಲಿ ಬಾಂಬ್ ಇದೆ ಎಂದು ಹೇಳಿದ್ದಳು. ಇದರಿಂದ ಗಾಬರಿಗೊಂಡು ಪೊಲೀಸರಿಗೆ ಮಾಹಿತಿ ನೀಡಿದಾಗ ಇದೊಂದು ಹುಸಿ ಬಾಂಬ್ ಕರೆ ಎಂದು ತಿಳಿದುಬಂದಿದೆ.
ಅಲ್ಲದೆ, ಕರೆ ಬರುತ್ತಿದ್ದಂತೆ ಉದ್ಯೋಗಿಗಳು ಕಂಪೆನಿಯಿಂದ ಹೊರಬಂದಿದ್ದು, ಕೂಡಲೇ ಪರಪ್ಪನ ಅಗ್ರಹಾರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪರಪ್ಪನ ಅಗ್ರಹಾರ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯದಳ ಸ್ಥಳಕ್ಕೆ ಆಗಮಿಸಿ ಮೂಲೆ-ಮೂಲೆ ಜಾಲಾಡಿದ ನಂತರ ಇದೊಂದು ಹುಸಿ ಬಾಂಬ್ ಕರೆ ಎಂದು ಖಚಿತವಾಗಿದೆ.