Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಸಿಎಂ ಉತ್ತರಕ್ಕೆ ಅತೃಪ್ತಿ:...

ಸಿಎಂ ಉತ್ತರಕ್ಕೆ ಅತೃಪ್ತಿ: ಬಿಜೆಪಿ-ಜೆಡಿಎಸ್ ಸದಸ್ಯರು ಸಭಾತ್ಯಾಗ

ವಾರ್ತಾಭಾರತಿವಾರ್ತಾಭಾರತಿ20 Feb 2024 6:41 PM IST
share
ಸಿಎಂ ಉತ್ತರಕ್ಕೆ ಅತೃಪ್ತಿ: ಬಿಜೆಪಿ-ಜೆಡಿಎಸ್ ಸದಸ್ಯರು ಸಭಾತ್ಯಾಗ

ಬೆಂಗಳೂರು: ರಾಜ್ಯಪಾಲರ ಭಾಷಣಕ್ಕೆ ಸಂಬಂಧಿಸಿದ ವಂದನಾರ್ಪಣಾ ಪ್ರಸ್ತಾವ ನಡೆದ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ಉತ್ತರ ತೃಪ್ತಿದಾಯಕವಾಗಿಲ್ಲ ಎಂದು ಆರೋಪಿಸಿ, ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ವಿಧಾನಸಭೆಯಲ್ಲಿ ಸಭಾತ್ಯಾಗ ಮಾಡಿ ಹೊರನಡೆದ ಪ್ರಸಂಗ ನಡೆಯಿತು.

ಮಂಗಳವಾರ ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಗ್ಯಾರಂಟಿ ಯೋಜನೆಗಳು ಸೇರಿದಂತೆ ರಾಜ್ಯಪಾಲರ ಭಾಷಣವನ್ನು ಸಮರ್ಥಿಸಿಕೊಂಡು ಉತ್ತರಿಸುತ್ತಿದ್ದರು. ಈ ವೇಳೆ ಬಿಜೆಪಿ ಸದಸ್ಯರು, ಮುಖ್ಯಮಂತ್ರಿಯವರು ನೀಡುವ ಉತ್ತರ ಸಮಂಜಸವಾಗಿಲ್ಲ. ರಾಜ್ಯಪಾಲರ ಭಾಷಣಕ್ಕೆ ಪೂರಕವಾಗಿ ಉತ್ತರ ನೀಡುವ ಬದಲು ರಾಜಕೀಯ ಭಾಷಣ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷಗಳ ಸದಸ್ಯರು ದೂರಿದರು.

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿ, ‘ಈ ಸರಕಾರ ಅಧಿಕಾರಕ್ಕೆ ಬಂದ ನಂತರ ಒಂದೇ ಒಂದು ಅಭಿವೃದ್ಧಿ ಕೆಲಸ ಮಾಡಿಲ್ಲ. ರೈತರಿಗೆ ಬೆಳೆ ಪರಿಹಾರ ಧನ ಸಮರ್ಪಕವಾಗಿ ನೀಡುತ್ತಿಲ್ಲ. ಅಲ್ಲದೆ, ಕೇಂದ್ರ ಸರಕಾರದ ವಿರುದ್ಧ ಆರೋಪ ಮಾಡುತ್ತಾ ಪ್ರತಿಪಕ್ಷಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಉತ್ತರ ನೀಡುತ್ತಿರುವುದು ನಮಗೆ ತೃಪ್ತಿ ತಂದಿಲ್ಲ’ ಎಂದು ಹೇಳಿ ಸಭಾತ್ಯಾಗ ಮಾಡಿದರು. ಈ ವೇಳೆ ಬಿಜೆಪಿ ಸದಸ್ಯರು ಸರಕಾರದ ವಿರುದ್ಧ ಘೋಷಣೆ ಕೂಗುತ್ತಾ ಎಲ್ಲ ಸುಳ್ಳು ಎಂದು ಹೇಳಿ ಹೊರನಡೆದರು. ಬಳಿಕ ಜೆಡಿಎಸ್ ಸದಸ್ಯರೂ ಅವರನ್ನು ಹಿಂಬಾಲಿಸಿದರು.

ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಸ್ತಾಪಿಸಿ, ‘ಬಿಜೆಪಿ ಸದಸ್ಯರಿಗೆ ನಾಚಿಕೆಯಾಗಬೇಕು. ಕೇಂದ್ರ ಸರಕಾರ ರಾಜ್ಯದ ಬಗ್ಗೆ ಮಲತಾಯಿ ಧೋರಣೆಯನ್ನು ಅನುಸರಿಸುತ್ತಿದೆ. ಕೇಂದ್ರದಿಂದ ಬರಪರಿಹಾರಕ್ಕೆ ಸಂಬಂಧಿಸಿದಂತೆ ಇದುವರೆಗೂ ಒಂದು ರೂಪಾಯಿ ಹಣವನ್ನೂ ಬಿಡುಗಡೆ ಮಾಡಿಲ್ಲ. ನಾವು ಕೊಟ್ಟ ಮನವಿ ಪತ್ರಗಳಿಗೆ ಸಂಬಂಧಿಸಿದಂತೆ ಒಂದು ಸಭೆಯನ್ನೂ ನಡೆಸಿಲ್ಲ’ ಎಂದು ಟೀಕಿಸಿದರು.

ಅಂಗೀಕಾರ: ‘ನಂತರ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಅವರು ವಿಧಾನ ಮಂಡಲ ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ಮಾಡಿದ ಭಾಷಣಕ್ಕೆ ಕೃತಜ್ಞತಾ ಪೂರಕ ವಂದನೆಗಳನ್ನು ಸಲ್ಲಿಸುವ ನಿರ್ಣಯವನ್ನು ಮುಖ್ಯಮಂತ್ರಿ ಮಂಡಿಸಿದರು. ಆಗ ಸ್ಪೀಕರ್ ಯು.ಟಿ.ಖಾದರ್ ಅವರು ಧ್ವನಿಮತದ ಮೂಲಕ ನಿರ್ಣಯಕ್ಕೆ ಅಂಗೀಕಾರ ದೊರಕಿಸಿಕೊಟ್ಟರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X