Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ವಿಶ್ವದ ಬದುಕು, ಸಂಸ್ಕೃತಿ ತಿಳಿಯಲು...

ವಿಶ್ವದ ಬದುಕು, ಸಂಸ್ಕೃತಿ ತಿಳಿಯಲು ಚಲನಚಿತ್ರೋತ್ಸವ ಸಹಕಾರಿ: ಸಿಎಂ ಸಿದ್ದರಾಮಯ್ಯ

► 15 ನೇ ಬೆಂಗಳೂರು ಅಂತರ್ ರಾಷ್ಟ್ರೀಯ ಚಿತ್ರೋತ್ಸವ ಉದ್ಘಾಟಿಸಿದ ಸಿಎಂ ► "ಅಂಬೇಡ್ಕರ್ ಮೌಲ್ಯಗಳ ಕುರಿತಾದ ಸಿನಿಮಾಗಳಿಗೆ ಅಗತ್ಯವಾದ ಎಲ್ಲಾ ರೀತಿಯ ನೆರವು ನೀಡಲಾಗುವುದು"

ವಾರ್ತಾಭಾರತಿವಾರ್ತಾಭಾರತಿ29 Feb 2024 8:55 PM IST
share
ವಿಶ್ವದ ಬದುಕು, ಸಂಸ್ಕೃತಿ ತಿಳಿಯಲು ಚಲನಚಿತ್ರೋತ್ಸವ ಸಹಕಾರಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವಿಶ್ವದ ಬದುಕು ಸಂಸ್ಕೃತಿ ತಿಳಿಯಲು ಮತ್ತು ನಮ್ಮ ಸಮಾಜವನ್ನು ಇನ್ನಷ್ಟು ಮಾನವೀಯಗೊಳಿಸಲು ಅಂತರ್ ರಾಷ್ಟ್ರೀಯ ಚಿತ್ರೋತ್ಸವ ನೆರವಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ನುಡಿದರು.

ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ನಲ್ಲಿ 15 ನೇ ಬೆಂಗಳೂರು ಅಂತರ್ ರಾಷ್ಟ್ರೀಯ ಸಿನಿಮೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.

ಇಡಿ ಜಗತ್ತು ಮಾನವೀಯ ಬೆಸುಗೆಯಲ್ಲಿ ಬೆರೆಯಲು, ಮನುಷ್ಯ ಮನುಷ್ಯನನ್ನು ಪ್ರೀತಿಸುವ ಸಂಸ್ಕೃತಿಯನ್ನು ಪಾಲಿಸಿದಾಗ ಜಗತ್ತಲ್ಲಿ ಶಾಂತಿ ನೆಲೆಸುತ್ತದೆ. ಸಿನಿಮಾ ಬಹಳ ಪ್ರಭಾವಿ ಮಾಧ್ಯಮ. ನೋಡುಗರ ಮನಸ್ಸು, ಆಲೋಚನೆಯ ಮೇಲೆ ಪ್ರಭಾವ ಬೀರುವ ಶಕ್ತಿ ಸಿನಿಮಾಗಿದೆ. ಸಿನಿಮಾಗಳ ಮೂಲಕ ದೇಶದ ಒಳಗಿನ, ಇತರೆ ದೇಶಗಳ ಜನ ಸಂಸ್ಕೃತಿಯನ್ನು ಅರಿಯುವ ಮತ್ತು ಆ ಮೂಲಕ ನಮ್ಮ ಮಾನವೀಯ ಸಂಸ್ಕೃತಿಯನ್ನು ವಿಸ್ತರಿಸಿಕೊಳ್ಳಲು ನೆರವಾಗುತ್ತದೆ. ಇದಕ್ಕೆ ಅಂತರ್ ರಾಷ್ಟ್ರೀಯ ಚಿತ್ರೋತ್ಸವ ವೇಗವರ್ದಕವಾಗಿ ಕೆಲಸ ಮಾಡುತ್ತದೆ ಎಂದರು.

ಅಂಬೇಡ್ಕರ್ ಅವರ ಸಂವಿಧಾನ ಇತರೆ ದೇಶಗಳ ಸಂವಿಧಾನದಲ್ಲಿ ಇಲ್ಲದ ಸಾಮಾಜಿಕ ನ್ಯಾಯದ ಮೌಲ್ಯಗಳಿವೆ. ಅಂಬೇಡ್ಕರ್ ಮತ್ತು ಇವರ ಮೌಲ್ಯಗಳ ಕುರಿತಾದ ಸಿನಿಮಾಗಳಿಗೆ ಅಗತ್ಯವಾದ ಎಲ್ಲಾ ರೀತಿಯ ನೆರವನ್ನು ನೀಡಲಾಗುವುದು ಎಂದು ಇದೇ ಸಂದರ್ಭದಲ್ಲಿ ಘೋಷಿಸಿದರು.

ಕುವೆಂಪು ಅವರ ವಿಶ್ವ ಮಾನವ ಸಂಸ್ಕೃತಿಯನ್ನು ವಿಶ್ವದಲ್ಲಿ ಹೆಚ್ವೆಚ್ವು ಪಾಲಿಸುವಂಥಾ ವಾತಾವರಣ ಸೃಷ್ಟಿಯಾಗಬೇಕು. ಇದಕ್ಕೆ ವಿಶ್ವ ಸಿನಿಮಾಗಳು ನೆರವಾಗುತ್ತವೆ ಎಂದರು.

2019 ರಿಂದ ಉತ್ತಮ ಸಿನಿಮಾ ಆಯ್ಕೆಗೆ ಸಮಿತಿ ರಚಿಸಿದ್ದೇವೆ

2019 ರಿಂದ ಚಲನಚಿತ್ರ ಪ್ರಶಸ್ತಿಗಳನ್ನು ಕೊಟ್ಟಿಲ್ಲ. ನಾವು ಆ ಎಲ್ಲಾ ಬಾಕಿ ಉಳಿದಿರುವ ಎಲ್ಲಾ ವರ್ಷಗಳ ಉತ್ತಮ ಸಿನಿಮಾಗಳ ಆಯ್ಕೆಗೆ ಸಮಿತಿಗಳನ್ನು ರಚಿಸಲಾಗಿದೆ. ಸಮಿತಿ ವರದಿ ಕೊಟ್ಟ ತಕ್ಷಣ ಪ್ರಶಸ್ತಿಗಳನ್ನು ಘೋಷಿಸಲಾಗುವುದು ಎಂದರು.

ಸಭಾಪತಿಗಳಾದ ಬಸವರಾಜ ಹೊರಟ್ಟಿ, ನಟ ಶಿವರಾಜ್ ಕುಮಾರ್, ಅಂತರ್ ರಾಷ್ಟ್ರೀಯ ಚಿತ್ರೋತ್ಸವದ ರಾಯಭಾರಿಯಾದ ನಟ ಡಾಲಿ ಧನಂಜಯ್, ಖ್ಯಾತ ನಿರ್ದೇಶಕ ಜಬ್ಬಾರ್ ಪಟೇಲ್, ಚೆಕ್ ರಿಪಬ್ಲಿಕ್ ದೇಶದ ಚಿತ್ರ ವಿಮರ್ಷಕರಾದ ಮೆಯೆರಾ ಲಾಂಗೆರೊವಾ, ಚಿತ್ರೋತ್ಸವದ ಕಲಾತ್ಮಕ ನಿರ್ದೇಶಕರಾದ ವಿದ್ಯಾಶಂಕರ್, ನಟಿ ಆರಾಧನಾ, ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಆರಾಧನಾ, ಚಲನಚಿತ್ರ ಅಕಾಡೆಮಿಯ ನಿಯೋಜಿತ ಅಧ್ಯಕ್ಷರಾದ ಸಾಧು ಕೋಕಿಲಾ, ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್.ಎಂ.ಸುರೇಶ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X