ವೆಬ್ಸೈಟ್ನಲ್ಲಿ ಅಧಿಕೃತ, ಅನಧಿಕೃತ ಶಾಲೆಗಳ ಪಟ್ಟಿ ಪ್ರಕಟಿಸಿದ ಶಿಕ್ಷಣ ಇಲಾಖೆ
ಬೆಂಗಳೂರು : ಶಾಲಾ ಶಿಕ್ಷಣ ಇಲಾಖೆಯು ಕೆಲ ಜಿಲ್ಲೆಗಳಲ್ಲಿರುವ ಅಧಿಕೃತ ಮತ್ತು ಅನಧಿಕೃತ ಶಾಲೆಗಳ ಪಟ್ಟಿಯನ್ನು https://schooleducation.karnataka.gov.in ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ.
ಬಳ್ಳಾರಿ ಜಿಲ್ಲೆಯಲ್ಲಿ 2, ಬೀದರ್ ನಲ್ಲಿ 3 ಅನಧಿಕೃತ ಶಾಲೆಗಳಿರುವುದು ಕಂಡು ಬಂದಿದೆ. ಯಾದಗಿರಿ, ಕೋಲಾರ, ಕಲಬುರಗಿ, ಶಿವಮೊಗ್ಗ, ಹಾವೇರಿ, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಬಾಗಲಾಕೋಟೆ ಜಿಲ್ಲೆಗಳಿಗೆ ಸಂಬಂಧಿಸಿ ಮಾಹಿತಿಯನ್ನು ವೆಬ್ಸೈಟ್ನಲ್ಲಿ ಇನ್ನೂ ಪ್ರಕಟವಾಗಿಲ್ಲ.
ಬೆಂಗಳೂರು, ಚಾಮರಾಜನಗರ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಇನ್ನಿತರ ಜಿಲ್ಲೆಗಳಲ್ಲಿ ಅಧಿಕೃತ ಶಾಲೆಗಳ ಪಟ್ಟಿಯನ್ನು ಪ್ರಕಟಿಸಿದ್ದು, ಅನಧಿಕೃತ ಶಾಲೆಗಳ ಪಟ್ಟಿಯನ್ನು ಪ್ರಕಟ ಮಾಡಿಲ್ಲ.
Next Story