ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳ ವರ್ಗಾವಣೆಗೆ ಕೌನ್ಸಿಲಿಂಗ್
ಬೆಂಗಳೂರು: ಭ್ರಷ್ಟಾಚಾರ ತಡೆಯಲು ಮತ್ತು ದಕ್ಷತೆಯನ್ನು ಹೆಚ್ಚಿಸಲು 2024-25ನೆ ಸಾಲಿನಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವ್ಯಾಪ್ತಿಯ ಅನೇಕ ಹುದ್ದೆಗಳ ಅಧಿಕಾರಿಗಳ ವರ್ಗಾವಣೆಯನ್ನು ಕೌನ್ಸಿಲಿಂಗ್ ಮೂಲಕ ಮಾಡಲು ನಿರ್ಧರಿಸಲಾಗಿದೆ.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ), ಹಿರಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಸಹಾಯಕ ಗ್ರೇಡ್-1 ಮತ್ತು ಗ್ರೇಡ್-2, ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವರ್ಗಾವಣೆಯನ್ನು ಕೌನ್ಸಿಲಿಂಗ್ ಮೂಲಕ ಮಾಡಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಆದೇಶ ನೀಡಿದೆ.
ಪ್ರಮುಖವಾಗಿ ಸ್ಥಳೀಯಾಡಳಿತ ಸಂಸ್ಥೆಗಳಲ್ಲಿ ತ್ವರಿತ ಸೇವಾ ಪೂರೈಕೆ ಮತ್ತು ಭ್ರಷ್ಟಾಚಾರ ತಡೆಯಲು ಸಿಬ್ಬಂದಿ ವರ್ಗಾವಣೆಯನ್ನು ಕೌನ್ಸಿಲಿಂಗ್ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಸಕ್ತ ಸಾಲಿನ ಬಜೆಟ್ ಭಾಷಣದಲ್ಲಿ ಘೋಷಿಸಿದ್ದರು. ಅದರಂತೆ ಈದೀಗ ಈ ಆದೇಶ ಹೊರಡಿಸಲಾಗಿದೆ
Next Story