ಶಾಸಕ ಭರತ್ ಶೆಟ್ಟಿ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ಡಿಕೆಶಿಯನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಇನಾಯತ್ ಅಲಿ
► ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಹೇಳಿಕೆ
ಬೆಂಗಳೂರು: ಕಾಂಗ್ರೆಸ್ ರಾಷ್ಟ್ರೀಯ ನಾಯಕ, ಲೋಕಸಭೆಯ ವಿಪಕ್ಷ ನಾಯಕರಾದ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಭರತ್ ಶೆಟ್ಟಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ನೇತೃತ್ವದ ನಿಯೋಗವು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಇಂದು ವಿಧಾನಸೌಧದಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿತು.
ಈ ಸಂದರ್ಭ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಾಧ್ಯಕ್ಷ ಗಿರೀಶ್ ಆಳ್ವ, ಗುರುಪುರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಮುಫೀದ್ ಅಡ್ಯಾರ್, ಅಡ್ಯಾರ್ ಗ್ರಾಮ ಪಂಚಾಯತ್ ಸದಸ್ಯ ಅಶ್ರಫ್, ಮುಖಂಡರಾದ ರವಿ ಶಿಯಾನ್ ಹೊಸಬೆಟ್ಟು, ಮುಸ್ತಫಾ ಗಂಜಿಮಠ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
Next Story