Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ನನ್ನ ಹೆಸರಿಗೆ ಮಸಿ ಬಳಿಯಲು ಬಿಜೆಪಿ...

ನನ್ನ ಹೆಸರಿಗೆ ಮಸಿ ಬಳಿಯಲು ಬಿಜೆಪಿ ಹುನ್ನಾರ : ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ19 July 2024 10:09 PM IST
share
ನನ್ನ ಹೆಸರಿಗೆ ಮಸಿ ಬಳಿಯಲು ಬಿಜೆಪಿ ಹುನ್ನಾರ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ನನ್ನ ಹೆಸರಿಗೆ ಮಸಿ ಬಳಿಯುವುದು, ರಾಜ್ಯ ಸರಕಾರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ವಿರುದ್ಧವೆಂದು ಬಿಂಬಿಸುವುದು ಬಿಜೆಪಿಯವರ ಹುನ್ನಾರವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಶುಕ್ರವಾರ ವಿಧಾನಸಭೆಯ ಕಲಾಪದಲ್ಲಿ ವಾಲ್ಮೀಕಿ ನಿಗಮದ ಪ್ರಕರಣ ಸಂಬಂಧ ಉತ್ತರ ನೀಡುವ ವೇಳೆಯಲ್ಲಿ ಮಾತನಾಡಿದ ಅವರು, ಇಡೀ ಬಿಜೆಪಿ, ಬಿಜೆಪಿಯ ನಾಯಕತ್ವ ಸಂವಿಧಾನ ಜಾರಿಗೆ ಬಂದ ದಿನದಿಂದಲೂ ದಮನಿತ ಸಮುದಾಯಗಳ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ವಿರುದ್ಧವಾಗಿದೆ. ಮಹಿಳೆಯರ ವಿರುದ್ಧವಾಗಿದೆ ಎಂದರು.

ದಮನಿತರ ಪರವಾದ ಪ್ರತಿ ನಿಲುವು, ಪ್ರತಿ ಕಾಯ್ದೆ, ಯೋಜನೆಗಳನ್ನು ಜಾರಿಗೆ ತಂದಿದ್ದು ಕಾಂಗ್ರೆಸ್ ನೇತೃತ್ವದ ಸರಕಾರಗಳು, ಆದರೆ, ಈ ಬಿಜೆಪಿಯಿಂದ ಸಂವಿಧಾನವನ್ನು ತುಳಿಯುವ ಪ್ರಯತ್ನಗಳಾಗಿವೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಬಿಜೆಪಿ ಆಡಳಿತದಲ್ಲಿದ್ದಾಗ ಯಾವ ಯಾವ ನಿಗಮಗಳಲ್ಲಿ ಏನೆಲ್ಲಾ ನುಂಗಿದ್ದಾರೆ ಎಂಬುದರ ಬಗ್ಗೆ ಚರ್ಚೆ ನಡೆಯುತ್ತಿದೆ. ನುಂಗುವುದರಲ್ಲಿ ಜಾಣರಾಗಿರುವ ಬಿಜೆಪಿಯವರು ಭ್ರಷ್ಟಾಚಾರದ ಬಗ್ಗೆ ಮಾತನಾಡಿದ್ದಾರೆ. ಇದಕ್ಕಿಂತ ದುರಂತ ಬೇರೆ ಇಲ್ಲ. ವಿರೋಧ ಪಕ್ಷದವರು ತಮ್ಮ ಅಜೆಂಡಾ ಸಾಧಿಸಿಕೊಳ್ಳಲು ಯಾವ ಸುಳ್ಳನ್ನು ಬೇಕಾದರೂ ಹೇಳಬಲ್ಲರು ಎಂಬುದು ಸಾಬೀತಾಗಿದೆ ಎಂದು ಸಿದ್ದರಾಮಯ್ಯ ಹರಿಹಾಯ್ದರು.

ಸರಕಾರವು ಸಿಬಿಐನವರು ಎಫ್‍ಐಆರ್ ದಾಖಲಿಸಿದ ಮೇಲೆ ಸಿಟ್ ರಚಿಸಿದೆ ಎಂದು ವಿಜಯೇಂದ್ರ ಸುಳ್ಳು ಹೇಳಿಕೆ ನೀಡಿದ್ದಾರೆ. ವಾಸ್ತವವಾಗಿ ನಮ್ಮಲ್ಲಿ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ 2024ರ ಮೇ 28ರಂದು ಕ್ರೈಂ ನಂ. 118/2024 ರಂತೆ ಎಫ್‍ಐಆರ್ ದಾಖಲಾಗಿದೆ. ರಾಜ್ಯ ಸರಕಾರವು ಮೇ 31ರಂದು ಆದೇಶ ಹೊರಡಿಸಿ ಸಿಟ್ ರಚಿಸಿದೆ. ಸಿಬಿಐ ಜೂನ್ 3ರಂದು ಎಫ್‍ಐಆರ್ ದಾಖಲಿಸಿದೆ ಎಂದು ಸಿದ್ದರಾಮಯ್ಯ ತಿರುಗೇಟು ನೀಡಿದರು.

ಈ ಹಗರಣವನ್ನು ಎಸ್‍ಐಟಿ ಜೊತೆಗೆ ಸಿಬಿಐ ಹಾಗೂ ಈಡಿ ಸಂಸ್ಥೆಗಳೂ ತನಿಖೆಯನ್ನು ನಡೆಸುತ್ತಿವೆ. ಈ ಹಗರಣದಲ್ಲಿ ಯಾರು ಯಾರು ಭಾಗಿಯಾಗಿದ್ದಾರೆ ಹಾಗೂ ನಿಗಮದ ಖಾತೆಯಿಂದ ಯಾರ ಖಾತೆಗಳಿಗೆ ಹಣ ವರ್ಗಾವಣೆಯಾಗಿರುತ್ತದೆ ಹಾಗೂ ಇದರ ಮೂಲ ಫಲಾನುಭವಿಗಳು ಯಾರು ಎಂಬುದು ತನಿಖೆಯು ಪೂರ್ಣಗೊಂಡ ನಂತರವೇ ತಿಳಿಯುತ್ತದೆ. ಪ್ರಕರಣದಲ್ಲಿ ಯಾರೇ ಇದ್ದರೂ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು.

ಸರಕಾರಕ್ಕೆ ಬೆದರಿಕೆ: ‘ದೇಶದಲ್ಲೇ ಮೊದಲ ಬಾರಿಗೆ ಎಸ್‍ಸಿಪಿ/ಟಿಎಸ್‍ಪಿ ಕಾಯ್ದೆ ಜಾರಿಗೆ ತರುವ ಮೂಲಕ ಪರಿಶಿಷ್ಟರ ಕಲ್ಯಾಣಕ್ಕೆ ಸರಕಾರ ಹಣ ಮೀಸಲಿಟ್ಟಿದೆ. ಅಲ್ಲದೆ, ಪರಿಶಿಷ್ಟರಿಗೆ ಗುತ್ತಿಗೆಯಲ್ಲಿ ಮೀಸಲಾತಿ ಕಲ್ಪಿಸಿದ್ದು, ಭಡ್ತಿಯಲ್ಲಿಯೂ ಮೀಸಲಾತಿ ನೀಡಲಾಗಿದೆ. ನಮ್ಮ ಸರಕಾರ ಯಾವುದೇ ಜಾತಿ, ಧರ್ಮವನ್ನು ನೋಡದೆ ಎಲ್ಲ ವರ್ಗದವರ ಒಳಿತಿಗೆ ಗ್ಯಾರಂಟಿ ಯೋಜನೆಗಳನ್ನು ಅನುಷ್ಟಾನಗೊಳಿಸುತ್ತಿದೆ. ನಮ್ಮ ಒಳ್ಳೆಯ ಕಾರ್ಯವನ್ನು ಸಹಿಸಲು ಆಗದೆ ಈಡಿ ಸೇರಿ ಕೇಂದ್ರ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ಬೆದರಿಕೆ ಹಾಕಲಾಗುತ್ತಿದೆ. ಬಿಜೆಪಿಗೆ ಎಸ್‍ಸಿ, ಎಸ್‍ಟಿ, ಒಬಿಸಿ, ಮಹಿಳೆಯರು ಮತ್ತು ಅಲ್ಪಸಂಖ್ಯಾತರ ಪರ ಯಾವುದೇ ಬದ್ಧತೆ ಇಲ್ಲ’ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X