Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಅವಾಚ್ಯ ಶಬ್ದಗಳಿಂದ ನಿಂದನೆ ಆರೋಪ :...

ಅವಾಚ್ಯ ಶಬ್ದಗಳಿಂದ ನಿಂದನೆ ಆರೋಪ : ವಿಪಕ್ಷ ನಾಯಕನ ವಿರುದ್ಧ ಹಕ್ಕುಚ್ಯುತಿ ಪ್ರಸ್ತಾವ ಮಂಡಿಸಿದ ಪ್ರದೀಪ್ ಈಶ್ವರ್

ವಾರ್ತಾಭಾರತಿವಾರ್ತಾಭಾರತಿ22 July 2024 10:15 PM IST
share
ಅವಾಚ್ಯ ಶಬ್ದಗಳಿಂದ ನಿಂದನೆ ಆರೋಪ : ವಿಪಕ್ಷ ನಾಯಕನ ವಿರುದ್ಧ ಹಕ್ಕುಚ್ಯುತಿ ಪ್ರಸ್ತಾವ ಮಂಡಿಸಿದ ಪ್ರದೀಪ್ ಈಶ್ವರ್

ಬೆಂಗಳೂರು : ತಮ್ಮನ್ನು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಲಾಗಿದೆ. ತಮ್ಮ ವಾಕ್ ಸ್ವಾತಂತ್ರ್ಯಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿ ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್ ವಿರುದ್ಧವೇ ಆಡಳಿತ ಪಕ್ಷದ ಸದಸ್ಯ ಪ್ರದೀಪ್ ಈಶ್ವರ್ ಹಕ್ಕುಚ್ಯುತಿ ಪ್ರಸ್ತಾವ ಮಂಡಿಸಿ ಗಮನ ಸೆಳೆದರು.

ಸೋಮವಾರ ವಿಧಾನಸಭೆಯಲ್ಲಿ ಸಂವಿಧಾನದ ಪೀಠಿಕೆಯನ್ನು ಉಲ್ಲೇಖಿಸಿದ ಪ್ರದೀಪ್ ಈಶ್ವರ್, ಪ್ರತಿಪಕ್ಷದ ನಾಯಕ ಅಶೋಕ್ ಅವರು, ಶುಕ್ರವಾರ(ಜು.19) ತಮ್ಮ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸಿದ್ದಾರೆ. ಇಂತಹ ಹೇಳಿಕೆಗಳಿಂದ ನಾನು ಎಂದೂ ಕುಗ್ಗುವುದಿಲ್ಲ ಎಂದು ತಿಳಿಸಿದರು.

ಈ ರೀತಿಯ ನಡುವಳಿಕೆಯಿಂದ ಹೊಸ ಶಾಸಕರ ಕನಸು ನನಸಾಗುವುದಿಲ್ಲ. ನಾನು ಬಡತನದಿಂದ ನೋವು ಅನುಭವಿಸಿ ಬಂದಿದ್ದೇನೆ. ಚಿಕ್ಕಬಳ್ಳಾಪುರದ ಪೆರೆಸಂದ್ರದಲ್ಲಿ ಟ್ರ್ಯಾಕ್ಟರ್ ಓಡಿಸಿದ್ದೇನೆ. ಎಪಿಎಂಸಿಯಲ್ಲಿ ಮೂಟೆ ಹೊತ್ತಿದ್ದೇನೆ. ನನ್ನ ಪೋಷಕರಿಗೆ ಅನಾರೋಗ್ಯ ಸಂದರ್ಭದಲ್ಲಿ ಸೂಕ್ತ ಚಿಕಿತ್ಸೆ ಸಿಗಲಿಲ್ಲ. ಆ ಕಾರಣಕ್ಕಾಗಿ ಅವರ ನೆನಪಿನಲ್ಲಿ 10 ಆಂಬ್ಯುಲೆನ್ಸ್ ವಾಹನಗಳನ್ನು ಬಿಟ್ಟಿದ್ದೇನೆ. ಡಿಜಿಟಲ್ ಕ್ರಾಂತಿಗೆ ಮುನ್ನುಡಿ ಬರೆದಿದ್ದೇನೆ ಎಂದು ತಿಳಿಸಿದರು.

ಆಗ ಮಧ್ಯಪ್ರವೇಶಿಸಿದ ಸ್ಪೀಕರ್ ಯು.ಟಿಖಾದರ್, ‘ವಿಧಾನಸಭೆಯಲ್ಲಿ ನಡೆದಿರುವ ವಿಚಾರಕ್ಕೆ ಸೀಮಿತವಾಗಿ ಮಾತನಾಡಿ ಸೂಚಿಸಿದರು. ಇದೇ ವೇಳೆ ಬಿಜೆಪಿ ಸದಸ್ಯ ಸುರೇಶ್ ಕುಮಾರ್, ‘ಸದನದಲ್ಲಿ ಮಾತನಾಡಲು ಸದಸ್ಯರು ಸ್ಪೀಕರ್ ಅನುಮತಿ ಕೇಳುವುದು ರೂಢಿ. ಆದರೆ ಸ್ಪೀಕರ್ ಅವರೇ ಅವಕಾಶ ಕೇಳುತ್ತಿದ್ದಾರೆ’ ಎಂದು ಉಲ್ಲೇಖಿಸಿದರು.

ಆಗ ಸ್ಪೀಕರ್, ‘ಸ್ಟೇಟಸ್ ಮುಖ್ಯವಲ್ಲ, ಪ್ರೀತಿಯಿಂದ ಸದನ ನಡೆಯಬೇಕು’ ಎಂದು ಉತ್ತರಿಸಿದರು. ಬಳಿಕ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿ, ‘ನಾವು ಧರಣಿ ನಡೆಸುವ ವೇಳೆ ಪ್ರದೀಪ್ ಈಶ್ವರ್ ಮಾತನಾಡಿದರು. ಆಗ ಅವಾಚ್ಯ ಶಬ್ದ ಬಳಕೆ ಮಾಡಿರುವುದಾಗಿ ಹೇಳಿದ್ದಾರೆ. ದಾಖಲೆಗಳಲ್ಲಿ ಆ ರೀತಿ ಪದಬಳಕೆ ಮಾಡಿರುವುದು ದಾಖಲಾಗಿಲ್ಲ ಎಂದು ನುಡಿದರು.

ಇನ್ನೂ, ಪ್ರದೀಪ್ ಈಶ್ವರ್ ಅವರು ರೋಷಾವೇಶದಲ್ಲಿ ದೊಡ್ಡ ಪದದ ಬಳಕೆ ಮಾಡಿದ್ದಾರೆ. ಒಂದು ವೇಳೆ ಆ ರೀತಿ ಪದಬಳಕೆ ಮಾಡಿದ್ದರೆ ಕಡತದಿಂದ ತೆಗೆಸಿ. ತಪ್ಪಾಗಿದ್ದರೆ ತಪ್ಪೇ? ಎಂದು ತಿಳಿಸಿದರು.

ಇದಕ್ಕೆ ಸ್ಪೀಕರ್ ಖಾದರ್, ‘ಆಡಿಯೊ, ವಿಡಿಯೊ ದಾಖಲೆ ಪರಿಶೀಲನೆ ಮಾಡಿ ಹಕ್ಕುಚ್ಯುತಿ ಮಂಡನೆ ವಿಚಾರದ ಬಗ್ಗೆ ರೂಲಿಂಗ್ ಕೊಡುವುದಾಗಿ ಸದನಕ್ಕೆ ತಿಳಿಸಿದರು. ಈ ವೇಳೆ ಮಧ್ಯಪ್ರವೇಶಿಸಿದ ಕಾನೂನು ಸಚಿವ ಎಚ್.ಕೆ.ಪಾಟೀಲ್, ‘ಈ ವಿಚಾರ ದೊಡ್ಡದು ಮಾಡುವ ಅಗತ್ಯವಿಲ್ಲ. ಇಲ್ಲಿಗೆ ಮುಕ್ತಾಯ ಮಾಡಿ’ ಎಂದು ಸಲಹೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X