Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಅಧಿವೇಶನ | ತುರ್ತುಪರಿಸ್ಥಿತಿ, ‘ಗೂಂಡಾ’...

ಅಧಿವೇಶನ | ತುರ್ತುಪರಿಸ್ಥಿತಿ, ‘ಗೂಂಡಾ’ ಗದ್ದಲ : ಕಲಾಪ ಮುಂದೂಡಿಕೆ

ವಾರ್ತಾಭಾರತಿವಾರ್ತಾಭಾರತಿ23 July 2024 10:36 PM IST
share
ಅಧಿವೇಶನ | ತುರ್ತುಪರಿಸ್ಥಿತಿ, ‘ಗೂಂಡಾ’ ಗದ್ದಲ : ಕಲಾಪ ಮುಂದೂಡಿಕೆ

ಬೆಂಗಳೂರು : ಬಿಜೆಪಿ ಸದಸ್ಯ ಹರೀಶ್ ಪೂಂಜ ಗೂಂಡಾ ಎಂದು ಆಡಳಿತ ಪಕ್ಷದ ಸದಸ್ಯ ಟಿ.ಡಿ.ರಾಜೇಗೌಡ ಅವರು ಕರೆದಿದ್ದು ಸದನದಲ್ಲಿ ಕೆಲ ತೀವ್ರ ಗದ್ದಲ, ಕೋಲಾಹಲಕ್ಕೆ ಕಾರಣವಾಗಿ, ಕಲಾಪವನ್ನೆ ಹತ್ತು ನಿಮಿಷಗಳ ಕಾಲ ಮುಂದೂಡಿಕೆ ಮಾಡಿದ ಪ್ರಸಂಗ ವಿಧಾನಸಭೆಯಲ್ಲಿ ಜರುಗಿತು.

ಮಂಗಳವಾರ ವಿಧಾನಸಭೆಯ ಸಭಾಂಗಣದಲ್ಲಿ ಸಂವಿಧಾನದ ಪೀಠಿಕೆ ಅಳವಡಿಸಿರುವ ಕುರಿತಾಗಿ ಆಡಳಿತ ಹಾಗೂ ವಿರೋಧ ಪಕ್ಷದ ಸದಸ್ಯರು ಸ್ಪೀಕರ್ ಯು.ಟಿ.ಖಾದರ್‌ಗೆ ಅಭಿನಂದನೆ ಸಲ್ಲಿಸುವ ಸಂದರ್ಭದಲ್ಲಿ ಸಂವಿಧಾನ ಪರ ಯಾರು, ವಿರೋಧಿಗಳು ಯಾರೆಂಬ ಬಗ್ಗೆ ಎರಡು ಕಡೆಯವರಿಂದ ಆರೋಪ-ಪ್ರತ್ಯಾರೋಪ ನಡೆಯಿತು.

ಈ ಚರ್ಚೆಯಲ್ಲಿ ಬಿಜೆಪಿ ಸದಸ್ಯರಾದ ಸುರೇಶ್ ಕುಮಾರ್, ಆರಗ ಜ್ಞಾನೇಂದ್ರ, ಸಚಿವ ಕೆ.ಜೆ.ಜಾರ್ಜ್ ಹಾಗೂ ಇತರರ ಪಾಲ್ಗೊಂಡರು. ಇದೇ ವೇಳೆ ತುರ್ತು ಪರಿಸ್ಥಿತಿ ಜಾರಿಗೊಳಿಸುವ ಮೂಲಕ ಸಂವಿಧಾನದ ಕಗ್ಗೊಲೆ ಮಾಡಿದ್ದು ಕಾಂಗ್ರೆಸ್ ಎಂದು ಬಿಜೆಪಿ ಆರೋಪ ಮಾಡಿದರೆ, ದೇಶದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಇದೆ ಎಂದು ಕಾಂಗ್ರೆಸ್ ಸದಸ್ಯರು ಟೀಕಿಸಿದರು.

ಬಳಿಕ ಈ ವೇಳೆ ಮಧ್ಯಪ್ರವೇಶಿಸಿದ ಸ್ಪೀಕರ್ ಖಾದರ್, ‘1975ನೆ ಸಾಲಿನಲ್ಲಿ ಗುಜರಾತ್‌ನಿಂದ ಕರ್ನಾಟಕದ ಕರಾವಳಿಯ ವರೆಗೆ ಸ್ಮಗ್ಲರ್‌ಗಳು ಆಳುತ್ತಿದ್ದರು. ಆದರೆ, ತುರ್ತುಪರಿಸ್ಥಿತಿಯ ಸಂದರ್ಭದಲ್ಲಿ ಕರೀಂ ಲಾಲ್, ಹಾಝಿ ಮಸ್ತಾನ್ ಸೇರಿದಂತೆ ಸ್ಮಗ್ಲರ್ ಗಳನ್ನು ಜೈಲಿಗೆ ಹಾಕಿದ್ದು ತುರ್ತುಪರಿಸ್ಥಿತಿ ಕಾಲದಲ್ಲಿ ಇಂದಿರಾ ಗಾಂಧಿ. ಈ ನಿಟ್ಟಿನಲ್ಲಿ ತುರ್ತು ಪರಿಸ್ಥಿತಿ ಸಾಧಕ-ಬಾಧಕ ಬಗ್ಗೆ ಚರ್ಚೆ ಆಗಲಿ’ ಎಂದು ನುಡಿದರು.

ಸ್ಪೀಕರ್ ಖಾದರ್ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ ಆರಗ ಜ್ಞಾನೇಂದ್ರ, ‘ಸಂವಿಧಾನದ ಮೇಲೆ ಅತ್ಯಾಚಾರ ಮಾಡಿದ್ದು ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ. ಹಾಗಾಗಿ ಸಮರ್ಥನೆ ಮಾಡಬಾರದು. ನಾವು ಜೈಲಿನಲ್ಲಿ ಇದ್ದೆವು. ಸಾಮಾನ್ಯ ಜನರಿಗೆ ಕಿರುಕುಳ ಆಗಿದೆ. ಎಳೆದುಕೊಂಡು ಹೋಗಿ ಫ್ಯಾಮಿಲಿ ಪ್ಲ್ಯಾನಿಂಗ್ ಮಾಡಿದರು ಎಂದರು.

ಆರ್.ಅಶೋಕ್ ಮಾತನಾಡಿ, ‘ತಾವು ಆ ಸ್ಥಾನದಲ್ಲಿ ಕುಳಿತುಕೊಂಡು ಈ ಹೇಳಿಕೆ ಕೊಟ್ಟರೆ ಅದು ಸಮರ್ಥನೆ ಮಾಡಿದಂತೆ ಆಗುತ್ತದೆ. ಸ್ಪೀಕರ್ ಸ್ಥಾನದಿಂದ ಕೆಳಗಿಳಿದು ವಾದ-ವಿವಾದ ಮಾಡಬಹುದು ಎಂದು ಹೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಕೆ.ಜೆ.ಜಾರ್ಜ್, ವಿರೋಧ ಪಕ್ಷದಲ್ಲಿದ್ದು ಸಂವಿಧಾನ ಬಾಹಿರ ಕೆಲಸ ಮಾಡಿದರೆ ಕ್ರಮ ಕೈಗೊಳ್ಳಬೇಕಲ್ಲ. ತುರ್ತುಪರಿಸ್ಥಿತಿ ಬಳಿಕವೂ ಇಂದಿರಾ ಗಾಂಧಿಯನ್ನು ಜನರು ಪ್ರಧಾನಿ ಮಾಡಿದರು. ನೀವು ಸಂವಿಧಾನ ಇರಲೇಬಾರದು ಎನ್ನುವವರು. ಇವಾಗ ಸಂವಿಧಾನದ ಬಗ್ಗೆ ಮಾತನಾಡುತ್ತೀರಾ? ನೀವು ಸಂವಿಧಾನದ ವಿರೋಧಿಗಳು ಎಂದು ತಿರುಗೇಟು ನೀಡಿದರು.

‘ಜನ ಸರಿಯಾದ ಬುದ್ಧಿ ಕಲಿಸಿದ್ದಾರೆ. ಅದಕ್ಕೆ ಇವಾಗ ಸುಮ್ಮನಿದ್ದೀರಿ. ಇಂದಿರಾಗಾಂಧಿ ವಿಚಾರ ಮಾತನಾಡಲು ಯಾವ ರೀತಿಯ ಯೋಗ್ಯತೆ ಇದೆ? ಅವರು ದೇಶಕ್ಕೆ ಪ್ರಾಣ ಕೊಟ್ಟವರು. ನಿಮ್ಮ ಕೈಯಿಂದ ಏನು ಮಾಡಲು ಆಗಲ್ಲ. ಜನ ನಿಮಗೆ ಬುದ್ಧಿ ಕಳಿಸಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಕಾಂಗ್ರೆಸ್ ಸದಸ್ಯ ಟಿ.ಡಿ.ರಾಜೇಗೌಡ, ಬಿಜೆಪಿ ಸದಸ್ಯರನ್ನು ವಿರೋಧಿಸುವ ಭರದಲ್ಲಿ ಸದಸ್ಯ ‘ಹರೀಶ್ ಪೂಂಜ ಗೂಂಡಾ’ ಎಂದರು. ಇದು ಸದನದಲ್ಲಿ ಕೋಲಾಹಲಕ್ಕೆ ಕಾರಣವಾಯಿತು. ಇದಕ್ಕೆ ಪ್ರತಿರೋಧ ವ್ಯಕ್ತಪಡಿಸಿದ ಬಿಜೆಪಿ ಸದಸ್ಯರು, ‘ರಾಜೂಗೌಡರು ಯಾವ ರೀತಿಯಲ್ಲಿ ಗೂಂಡಾ ಎನ್ನುತ್ತಾರೆ? ಎರಡು ಬಾರಿ ಶಾಸಕರಾದವರನ್ನು ಗೂಂಡಾ ಎನ್ನುತ್ತಾರೆ. ಅದಕ್ಕೆ ಕ್ಷಮೆ ಕೇಳಬೇಕು’ ಎಂದು ಪಟ್ಟುಹಿಡಿದರು.

ಗದ್ದಲ ಜಾಸ್ತಿಯಾದ ಹಿನ್ನೆಲೆಯಲ್ಲಿ ಸ್ಪೀಕರ್ ಖಾದರ್ ಅವರು ಸದನವನ್ನು ಕೆಲ ಕಾಲ ಮುಂದೂಡಿದರು. ಆನಂತರ ಸದನ ಆರಂಭವಾಗುತ್ತಿದ್ದಂತೆ ‘ಗೂಂಡಾ ಪದ’ ಕಡತದಿಂದ ತೆಗೆಯಲಾಗುವುದು ಎಂದು ಪ್ರಕಟಿಸಿ, ಪ್ರಶ್ನೋತ್ತರ ಕಲಾಪವನ್ನು ಕೈಗೆತ್ತಿಕೊಂಡ ಹಿನ್ನೆಲೆಯಲ್ಲಿ ಗದ್ದಲಕ್ಕೆ ತೆರೆಬಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X