Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಶುದ್ಧ ಇಂಧನಕ್ಕೆ ಒತ್ತು: ಆಸ್ಟ್ರೇಲಿಯಾದ...

ಶುದ್ಧ ಇಂಧನಕ್ಕೆ ಒತ್ತು: ಆಸ್ಟ್ರೇಲಿಯಾದ ಸ್ಮಾರ್ಟ್ ಎನರ್ಜಿ ಕೌನ್ಸಿಲ್ ಜತೆ ಇಲಾಖೆ ಒಪ್ಪಂದ

ವಾರ್ತಾಭಾರತಿವಾರ್ತಾಭಾರತಿ19 Oct 2024 9:29 PM IST
share
ಶುದ್ಧ ಇಂಧನಕ್ಕೆ ಒತ್ತು: ಆಸ್ಟ್ರೇಲಿಯಾದ ಸ್ಮಾರ್ಟ್ ಎನರ್ಜಿ ಕೌನ್ಸಿಲ್ ಜತೆ ಇಲಾಖೆ ಒಪ್ಪಂದ

ಕ್ಯಾನ್‍ಬೆರಾ (ಆಸ್ಟ್ರೇಲಿಯಾ): ಶುದ್ಧ ಇಂಧನಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತವು (ಕ್ರೆಡಲ್) ಆಸ್ಟ್ರೇಲಿಯಾದ ಸ್ಮಾರ್ಟ್ ಎನರ್ಜಿ ಕೌನ್ಸಿಲ್ ಜತೆಗಿನ ಒಪ್ಪಂದಕ್ಕೆ ಶುಕ್ರವಾರ ಸಹಿ ಹಾಕಿದೆ.

ಈ ಒಪ್ಪಂದವು ಶುದ್ಧ ಇಂಧನ, ನವೀಕರಿಸಬಹುದಾದ ಇಂಧನ, ಗ್ರೀನ್ ಹೈಡ್ರೋಜನ್, ಬ್ಯಾಟರಿ ಪವರ್ ಸ್ಟೋರೇಜ್ ವ್ಯವಸ್ಥೆಗಳು ಮತ್ತು ಸಂಬಂಧಿತ ವಲಯಗಳಲ್ಲಿ ಸಹಕಾರ ಹೆಚ್ಚಿಸುವ ಗುರಿ ಹೊಂದಿದೆ. ಮುಂದಿನ ಮೂರು ವರ್ಷಗಳವರೆಗೆ ಜಾರಿಯಲ್ಲಿರುವ ಒಪ್ಪಂದವನ್ನು ಪರಸ್ಪರ ಒಪ್ಪಿಗೆ ಮೇರೆಗೆ ವಿಸ್ತರಿಸಲು ಅವಕಾಶವಿದೆ.

ರಾಜ್ಯ ಇಂಧನ ಇಲಾಖೆಯ ಪ್ರತಿನಿಧಿಯಾಗಿ ಕ್ರೆಡಲ್‍ನ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ರುದ್ರಪ್ಪಯ್ಯ ಹಾಗೂ ಸ್ಮಾರ್ಟ್ ಎನರ್ಜಿ ಕೌನ್ಸಿಲ್ ಪರವಾಗಿ ಅದರ ಮುಖ್ಯ ಕಾರ್ಯನಿರ್ವಾಹಕ ಜಾನ್ ಗ್ರಿಮ್ಸ್ ಮತ್ತು ಒಪ್ಪಂದಕ್ಕೆ ಸಹಿ ಹಾಕಿದರು.

ಶುದ್ಧ ಇಂಧನ, ಗ್ರೀನ್ ಹೈಡ್ರೋಜನ್, ಬ್ಯಾಟರಿ ಪವರ್ ಸ್ಟೋರೇಜ್ ಮತ್ತು ಸಂಬಂಧಿತ ವಲಯಗಳಲ್ಲಿ ಪರಸ್ಪರ ಸಹಕಾರವನ್ನು ಬಲಪಡಿಸಲು ಆಸ್ಟ್ರೇಲಿಯಾದ ಸ್ಮಾರ್ಟ್ ಎನರ್ಜಿ ಕೌನ್ಸಿಲ್ ಜತೆಗಿನ ಒಪ್ಪಂದಕ್ಕೆ ಸಹಿ ಹಾಕಿದ್ದೇವೆ. ನೂತನ ತಂತ್ರಜ್ಞಾನಗಳನ್ನು ಸದುಪಯೋಗಪಡಿಸಿಕೊಳ್ಳುವುದು, ಪಾಲುದಾರಿಕೆಯನ್ನು ಸುಲಲಿತಗೊಳಿಸುವ ಜತೆಗೆ ಹೂಡಿಕೆ ಅವಕಾಶಗಳನ್ನು ಅನ್ವೇಷಿಸುವುದು ಈ ಒಪ್ಪಂದದ ಗುರಿಯಾಗಿದೆ ಎಂದು ಕೆ.ಪಿ. ರುದ್ರಪ್ಪಯ್ಯ ಹೇಳಿದರು.

ಒಪ್ಪಂದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಇಂಧನ ಇಲಾಖೆಯ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಶುದ್ಧ ಇಂಧನಕ್ಕೆ ಒತ್ತು ನೀಡುವ ಈ ಒಪ್ಪಂದ ಗಮನಾರ್ಹವಾದುದು. ನವೀಕರಿಸಬಹುದಾದ ಇಂಧನ ಮತ್ತು ಗ್ರೀನ್ ಹೈಡ್ರೋಜನ್‍ಗೆ ಸಂಬಂಧಿಸಿದ ಆಸ್ಟ್ರೇಲಿಯಾದ ತಂತ್ರಜ್ಞಾನಗಳ ಬಳಕೆ ಕುರಿತು ಸ್ಮಾರ್ಟ್ ಎನರ್ಜಿ ಕೌನ್ಸಿಲ್ ಜತೆಗೆ ಕ್ರೆಡಲ್ ಸಮಾಲೋಚನೆ ನಡೆಸಲಿದೆ ಎಂದರು.

ಈ ಪಾಲುದಾರಿಕೆಯು ತಂತ್ರಜ್ಞಾನ ವಿನಿಮಯವನ್ನು ಸುಗಮಗೊಳಿಸುವುದಲ್ಲದೇ, ಈ ವಲಯಗಳಲ್ಲಿ ಪರಸ್ಪರ ಹಿತಾಸಕ್ತಿಯನ್ನು ಬೆಂಬಲಿಸುವ ದ್ವಿಪಕ್ಷೀಯ ಹೂಡಿಕೆ ಅವಕಾಶಗಳನ್ನು ಅನ್ವೇಷಿಸಲಿದೆ ಎಂದು ಗೌರವ್ ಗುಪ್ತಾ ಅಭಿಪ್ರಾಯಪಟ್ಟರು. ಸಭೆಯಲ್ಲಿ ಶಾಸಕ ಹಾಗೂ ಕ್ರೆಡಲ್ ಅಧ್ಯಕ್ಷ ಟಿ.ಡಿ.ರಾಜೇಗೌಡ, ಇಂಧನ ಸಚಿವರ ಆಪ್ತ ಕಾರ್ಯದರ್ಶಿ ಸತೀಶ್ ಸೇರಿದಂತೆ ಇನ್ನಿತರು ಉಪಸ್ಥಿತರಿದ್ದರು.

‘ಶುದ್ಧ ಇಂಧನ ಮತ್ತು ಹಸಿರು ಹೈಡ್ರೋಜನ್ ಉಪಕ್ರಮಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಮತ್ತು ಆಸ್ಟ್ರೇಲಿಯಾ ಒಟ್ಟಾಗಿ ಕೆಲಸ ಮಾಡಲು ಬದ್ಧವಾಗಿ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಈ ಮೂಲಕ ಆಸ್ಟ್ರೇಲಿಯಾದ ಕಂಪನಿಗಳ ಜತೆಗಿನ ಕರ್ನಾಟಕದ ಸಂಪರ್ಕ ಸಲಭವಾಗುವ ಜತೆಗೆ ಹೂಡಿಕೆ ಅವಕಾಶಗಳು ಹೆಚ್ಚಲಿವೆ. ನವೀಕರಿಸಬಹುದಾದ ಇಂಧನ ಉತ್ಪಾದನೆ ಮತ್ತು ಉತ್ತೇಜನದಲ್ಲಿ ರಾಜ್ಯ ಮುಂಚೂಣಿಯಲ್ಲಿದ್ದು, ರಾಜ್ಯದ ಕೈಗಾರಿಕಾ ನೀತಿಗೆ ಅನುಗುಣವಾಗಿ ಯೋಜನೆಗಳಿಗೆ ಪ್ರೊತ್ಸಾಹಕಗಳನ್ನು ಒದಗಿಸಿದ್ದೇವೆ. ಈ ಕ್ರಮಗಳಿಂದಾಗಿ ಕರ್ನಾಟಕವು ಹೂಡಿಕೆಗೆ ಆದ್ಯತೆಯ ತಾಣವಾಗಿದೆ’

-ಕೆ.ಜೆ.ಜಾರ್ಜ್, ಇಂಧನ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X