Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಕೆಎಎಸ್ ಪರೀಕ್ಷೆ ಗೊಂದಲ | ಓಎಂಆರ್...

ಕೆಎಎಸ್ ಪರೀಕ್ಷೆ ಗೊಂದಲ | ಓಎಂಆರ್ ಶೀಟ್‍ನಲ್ಲಿ ತಪ್ಪಾಗಿ ನಮೂದಾದ ನೋಂದಣಿ ಸಂಖ್ಯೆ

ವಾರ್ತಾಭಾರತಿವಾರ್ತಾಭಾರತಿ29 Dec 2024 9:38 PM IST
share
ಕೆಎಎಸ್ ಪರೀಕ್ಷೆ ಗೊಂದಲ | ಓಎಂಆರ್ ಶೀಟ್‍ನಲ್ಲಿ ತಪ್ಪಾಗಿ ನಮೂದಾದ ನೋಂದಣಿ ಸಂಖ್ಯೆ

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗವು(ಕೆಪಿಎಸ್‍ಸಿ) ರವಿವಾರದಂದು ನಡೆಸಿದ ಕೆಎಎಸ್ ಗ್ರೂಪ್ ಎ ಮತ್ತು ಬಿ ಪರೀಕ್ಷೆಯಲ್ಲಿ ಗೊಂದಲ ಉಂಟಾಗಿದ್ದು, ವಿಜಯಪುರ ಮತ್ತು ಕೋಲಾರ ಪರೀಕ್ಷಾ ಕೇಂದ್ರಗಳಲ್ಲಿ ಓಎಂಆರ್ ಶೀಟ್‍ನಲ್ಲಿ ನೋಂದಣಿ ಸಂಖ್ಯೆಗಳ ತಪ್ಪುಗಳು ಕಂಡುಬಂದಿದೆ.

ಪರೀಕ್ಷೆಯಲ್ಲಿ ಗೊಂದಲ ಉಂಟಾದ ಬೆನ್ನಲ್ಲೇ ಅಭ್ಯರ್ಥಿಗಳು ಪರೀಕ್ಷೆ ಬರೆಯಲು ನಿರಾಕರಿಸಿದ್ದರು. ಈ ನಡುವೆ ಅಧಿಕಾರಿಗಳು ಸಮಸ್ಯೆ ಬಗೆಹರಿಸಲು ಪ್ರಯತ್ನಿಸಿದ್ದು, ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಹೆಚ್ಚುವರಿ ಸಮಯ ನೀಡುವ ಭರವಸೆ ನೀಡಿದ್ದರು ಎಂದು ವರದಿಯಾಗಿದೆ.

ಓಎಂಆರ್ ಶೀಟ್‍ನಲ್ಲಿ ನೊಂದಣಿ ಸಂಖ್ಯೆ ಅದಲು-ಬದಲು ಆರೋಪ ಕೇಳಿಬಂದಿದ್ದು, ಪರೀಕ್ಷೆ ಬರೆಯದೆ ಪರೀಕ್ಷಾರ್ಥಿಗಳು ಹೊರ ಬಂದಿದ್ದಾರೆ. ಈಗಾಗಲೇ ಪ್ರಶ್ನೆ ಪತ್ರಿಕೆಯಲ್ಲಿನ ಗೊಂದಲ ಆಗಿದ್ದರಿಂದ ಕೆಪಿಎಎಸ್ ಮತ್ತೊಮ್ಮೆ ಪರೀಕ್ಷೆ ನಡೆಸಿದೆ. ಆದರೆ ಇದೀಗ ಅಂತಹ ಎಡವಟ್ಟು ಮಾಡಿದ್ದು, ಅಭ್ಯರ್ಥಿಗಳು ಪ್ರತಿಭಟನೆ ಮಾಡಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ 32 ಪರೀಕ್ಷಾ ಕೇಂದ್ರಗಳಲ್ಲಿ 12,741 ಪರೀಕ್ಷಾರ್ಥಿಗಳು ಗೆಜೆಟೆಡ್ ಪ್ರೊಬೇಷನರಿ ಗ್ರೂಪ್ ಎ ಹಾಗೂ ಬಿ ಹುದ್ದೆಗಳಿಗಾಗಿ ಪರೀಕ್ಷೆ ಬರೆಯುತ್ತಿದ್ದರು. ಈ ಪೈಕಿ ನಗರದ ಸಿಕ್ಯಾಬ್ ಶಿಕ್ಷಣ ಸಂಸ್ಥೆಯ ಎರಡು ಪರೀಕ್ಷಾ ಕೇಂದ್ರಗಳು ಮರಾಠಿ ಮಹಾವಿದ್ಯಾಲಯ ಹಾಗೂ ವಿಕಾಸ ಮಹಾವಿದ್ಯಾಲಯದ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾರ್ಥಿಗಳ ನೋಂದಣಿ ಸಂಖ್ಯೆ ಹಾಗೂ ಓಎಂಆರ್ ಶೀಟ್‍ನಲ್ಲಿನ ನಂಬರ್ ಅದಲು ಬದಲಾಗಿರುವುದು ಕಂಡು ಬಂದಿದೆ. ಇದನ್ನು ವಿರೋಧಿಸಿ ಸಿಕ್ಯಾಬ್ ಸಂಸ್ಥೆಯ ಪರೀಕ್ಷಾ ಕೇಂದ್ರಗಳಲ್ಲಿನ ಹಲವಾರು ಪರೀಕ್ಷಾರ್ಥಿಗಳು ಪರೀಕ್ಷೆ ಬರೆಯದೆ ಹೊರ ಬಂದಿದ್ದಾರೆ ಎಂದು ವರದಿಯಾಗಿದೆ.

ಸ್ಥಳಕ್ಕೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಹಾಗೂ ಜಿಲ್ಲಾ ಪಂಚಾಯತಿ ಸಿಇಓ ರಿಶಿ ಆನಂದ ಆಗಮಿಸಿ, ಪರೀಕ್ಷಾರ್ಥಿಗಳ ಸಮಸ್ಯೆಗಳನ್ನು ಆಲಿಸಿದರು. ಪರೀಕ್ಷಾರ್ಥಿಗಳ ನೋಂದಣಿ ನಂಬರ್ ಹಾಗೂ ಓಎಂಆರ್ ಶೀಟ್‍ನಲ್ಲಿನ ನಂಬರ್ ಬದಲಾಗಿದೆ ಎಂದು ಕೆಪಿಎಸ್‍ಸಿ ಅಧಿಕಾರಿಗಳ ಜೊತೆಗೆ ಅವರು ಮಾತನಾಡಿದರು.

ಈ ವಿಚಾರವಾಗಿ ಪರೀಕ್ಷಾರ್ಥಿಗಳ ನೋಂದಣಿ ನಂಬರನ್ನು ಓಎಂಆರ್ ಶೀಟ್‍ನಲ್ಲಿ ಪ್ರತ್ಯೇಕವಾಗಿ ನೋಂದಾಯಿಸಲು ಕೆಪಿಎಸ್‍ಸಿ ಅಧಿಕಾರಿಗಳು ಸಲಹೆ ನೀಡಿದರು. ಓಎಂಆರ್ ಶೀಟ್‍ನಲ್ಲಿ ಪರೀಕ್ಷಾರ್ಥಿಗಳ ನೋಂದಣಿ ನಂಬರ್ ನಮೂದಿಸಲು ಸೂಚನೆ ನೀಡಿ ಪರೀಕ್ಷೆ ಬರೆಯುವಂತೆ ಅಭ್ಯರ್ಥಿಗಳ ಮನವೊಲಿಕೆ ಮಾಡಿದ್ದಾರೆ.

ಇನ್ನು ಕೋಲಾರದ ಪರೀಕ್ಷಾ ಕೇಂದ್ರದಲ್ಲೂ ಇದೇ ಎಡವಟ್ಟಾಗಿದೆ. ಪ್ರವೇಶ ಪತ್ರದ ಸಂಖ್ಯೆ, ಓಎಂಆರ್ ಸಂಖ್ಯೆ ಹೊಂದಾಣಿಕೆ ಆಗಿರಲಿಲ್ಲ. ಹೀಗಾಗಿ ಪರೀಕ್ಷಾ ಕೇಂದ್ರದಿಂದ ಹೊರಬಂದ ಅಭ್ಯರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು. ಪ್ರವೇಶ ಪತ್ರ, ಓಎಂಆರ್ ಶೀಟ್‍ನಲ್ಲಿ ಬೇರೆ ರಿಜಿಸ್ಟರ್ ನಂಬರ್ ಇದೆ. ಬೇರೆ ಬೇರೆ ರಿಜಿಸ್ಟರ್ ಸಂಖ್ಯೆಯಲ್ಲಿ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಇದನ್ನು ಪ್ರಶ್ನೆ ಮಾಡಿದ್ದಕ್ಕೆ ಪರೀಕ್ಷೆ ಬರೆಯಿರಿ ಇಲ್ಲವಾದರೆ ಬಿಡಿ ಎಂದು ಅಧಿಕಾರಿಗಳು, ಸಿಬ್ಬಂದಿ ವಿರುದ್ಧ ಪರೀಕ್ಷಾರ್ಥಿಗಳಿಗೆ ಧಮ್ಕಿ ಹಾಕಿದ ಆರೋಪ ಮಾಡಲಾಗಿದೆ ಎಂದು ವರದಿಯಾಗಿದೆ.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X