Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಎಲ್ಲ ಸಿರಿಧಾನ್ಯಗಳನ್ನು ಎಂಎಸ್‍ಪಿ...

ಎಲ್ಲ ಸಿರಿಧಾನ್ಯಗಳನ್ನು ಎಂಎಸ್‍ಪಿ ವ್ಯಾಪ್ತಿಗೆ ತರಲು ಕೇಂದ್ರಕ್ಕೆ ಮನವಿ

ವಾರ್ತಾಭಾರತಿವಾರ್ತಾಭಾರತಿ4 Jan 2025 9:40 PM IST
share
ಎಲ್ಲ ಸಿರಿಧಾನ್ಯಗಳನ್ನು ಎಂಎಸ್‍ಪಿ ವ್ಯಾಪ್ತಿಗೆ ತರಲು ಕೇಂದ್ರಕ್ಕೆ ಮನವಿ

ಬೆಂಗಳೂರು : ರಾಗಿ, ಜೋಳಗಳಂತೆ ಇತರೆ ಸಿರಿಧಾನ್ಯಗಳನ್ನೂ (ತೃಣ ಧಾನ್ಯಗಳು) ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಸೇರ್ಪಡೆಗೊಳಿಸುವುದು ಸೇರಿದಂತೆ ರೈತರಿಗೆ ವಿವಿಧ ರೀತಿಯಲ್ಲಿ ನೆರವು ಒದಗಿಸಲು ಕೃಷಿ ಕ್ಷೇತ್ರಕ್ಕೆ ಇನ್ನಷ್ಟು ಹೆಚ್ಚಿನ ಅನುದಾನ ಮತ್ತು ಆದ್ಯತೆ ನೀಡುವಂತೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ, ಕೇಂದ್ರ ಸರಕಾರಕ್ಕೆ ಮನವಿ ಮಾಡಿದ್ದಾರೆ.

ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್‍ಸಿಂಗ್ ಚೌವ್ಹಾಣ್ ಶನಿವಾರ ದೇಶದ ಎಲ್ಲ ರಾಜ್ಯಗಳ ಕೃಷಿ ಸಚಿವರೊಂದಿಗೆ ವಿಡಿಯೋ ಸಂವಾದ ನಡೆಸಿದ ಸಂದರ್ಭದಲ್ಲಿ ಮಾತನಾಡಿದ ಚಲುವರಾಯಸ್ವಾಮಿ, ಕರ್ನಾಟಕದ ಪರವಾಗಿ ಹಲವು ಬೇಡಿಕೆಗಳನ್ನು ಮುಂದಿಟ್ಟರು.

ರಾಜ್ಯದಲ್ಲಿ ಸರಕಾರಿ ಬೀಜೋತ್ಪಾದನಾ ಕೇಂದ್ರಗಳು ಮತ್ತು ಗುಣಮಟ್ಟ ನಿಯಂತ್ರಣ ಪ್ರಯೋಗಾಲಯಗಳನ್ನು ಬಲಪಡಿಸಲು ಹೊಸ ಯೋಜನೆಗಳನ್ನು ರೂಪಿಸಿ ನೆರವು ನೀಡಬೇಕು. ಜೋಳ(ಮಾಲ್ದಂಡಿ)ಕ್ಕೆ ಹಿಂಗಾರು ಹಂಗಾಮಿಗೆ ಕನಿಷ್ಠ ಬೆಂಬಲ ಬೆಲೆ ಘೋಷಣೆ ಮಾಡುವಂತೆಯೂ ಕೇಂದ್ರ ಸಚಿವರಲ್ಲಿ ಅವರು ಮನವಿ ಮಾಡಿದರು.

ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿಯಲ್ಲಿ ರಾಜ್ಯದ ಕೃಷಿ ಹಾಗೂ ವಿವಿಧ ಮೂಲಭೂತ ಸೌಕರ್ಯ ಅಭಿವೃದ್ಧಿ ಯೋಜನೆಗಳಿಗೂ ಹೆಚ್ಚಿನ ಅನುದಾನ ಒದಗಿಸಬೇಕು. ಅಲ್ಲದೇ, ಸಿರಿಧಾನ್ಯಗಳ ಮೌಲ್ಯವರ್ಧಿತ ಉತ್ಪನ್ನಗಳ ಮೇಲಿನ ಜಿಎಸ್‍ಟಿಯನ್ನು ಶೇ.18 ರಿಂದ 5ಕ್ಕೆ ಇಳಿಸುವಂತೆ ಚಲುವರಾಯಸ್ವಾಮಿ ಕೋರಿದರು.

ಬೆಂಗಳೂರು ಜಿಲ್ಲೆಯ ಆನೇಕಲ್‍ನಲ್ಲಿರುವ ಸರಕಾರಿ ಭೂಮಿಯಲ್ಲಿ ಇನ್‍ಸ್ಟಿಟ್ಯೂಟ್ ಆಫ್ ಪೆಸ್ಟಿಸೈಡ್ ಫಾರ್ಮುಲೇಶನ್ ಟೆಕ್ನಾಲಜಿಯ ಸ್ಥಾಪನೆಗೂ ಧನಸಹಾಯ ಒದಗಿಸುವಂತೆ ಕೋರಿದ ಅವರು, ಕೃಷಿ ವಿಶ್ವವಿದ್ಯಾಲಯಗಳ ಕ್ಷೇತ್ರ ಬೆಳೆಗಳ ವಿಶೇಷವಾಗಿ ಎಣ್ಣೆಕಾಳು ಬೆಳೆಗಳ ತಳಿವರ್ಧನೆಗೆ ಕೇಂದ್ರೀಯ ಕೃಷಿ ಸಂಶೋಧನೆ ಹಾಗೂ ವಿಸ್ತರಣೆ ಇಲಾಖೆ ಮೂಲಕ ಹೆಚ್ಚಿನ ಹಣವನ್ನು ಮಂಜೂರು ಮಾಡುವಂತೆ ವಿನಂತಿಸಿದರು.

ರಾಜ್ಯದಲ್ಲಿ ಸವಳು ಮತ್ತು ಜವಳು ಮಣ್ಣು ಸುಧಾರಣೆಗೆ ಹೊಸ ಯೋಜನೆಯನ್ನು ಪ್ರಾರಂಭಿಸಬಹುದಾಗಿದೆ ಎಂದು ಕೇಂದ್ರ ಸಚಿವರ ಗಮನ ಸೆಳೆದ ಚಲುವರಾಯಸ್ವಾಮಿ, ರೈತರ ಹೊಲಗಳಲ್ಲಿ ಕೃಷಿ ಅರಣ್ಯೀಕರಣ ಪ್ರದೇಶ ವಿಸ್ತರಣೆಗೆ ಧನಸಹಾಯ ಹೆಚ್ಚಿಸಲು ಕೋರಿದರು.

ಕರ್ನಾಟಕದಲ್ಲಿ ಕ್ಲಸ್ಟರ್ ಆಧಾರದ ಮೇಲೆ ರೈತ ಉತ್ಪಾದಕ ಸಂಸ್ಥೆಗಳು ಮತ್ತು ಅಗ್ರಿ-ಟೆಕ್ ಸ್ಟಾರ್ಟ್‍ಅಪ್‍ಗಳ ಮೂಲಕ ಕೋಲ್ಡ್ ಚೈನ್ ಅಭಿವೃದ್ಧಿ ಮಾಡಿ ಸಂಸ್ಕರಣೆ, ಪ್ಯಾಕೇಜಿಂಗ್, ಬ್ರ್ಯಾಂಡಿಂಗ್, ಮಾರ್ಕೆಟಿಂಗ್, ರಫ್ತು ಮುಂತಾದ ತಂತ್ರಜ್ಞಾನಗಳನ್ನು ಉತ್ತೇಜಿಸಲು ಯೋಜನೆಯನ್ನು ಪ್ರಾರಂಭಿಸುವಂತೆ ಅವರು ಮನವಿ ಮಾಡಿದರು.

ಇದೇ ವೇಳೆ ಕೇಂದ್ರ ಕೃಷಿ ಸಚಿವ ಶಿವರಾಜ್‍ಸಿಂಗ್ ಚೌವ್ಹಾಣ್, ವಿವಿಧ ರಾಜ್ಯಗಳ ಕೃಷಿ ಸಚಿವರು ಮತ್ತು ಹಿರಿಯ ಅಧಿಕಾರಿಗಳನ್ನು ಇದೇ ತಿಂಗಳು ಬೆಂಗಳೂರಿನಲ್ಲಿ ನಡೆಯುವ ಅಂತರ್‍ರಾಷ್ಟ್ರೀಯ ಸಾವಯವ, ಸಿರಿಧಾನ್ಯ ವಾಣಿಜ್ಯ ಮೇಳ-2025ಕ್ಕೆ ಆಗಮಿಸುವಂತೆ ಚಲುವರಾಯಸ್ವಾಮಿ ಆಹ್ವಾನಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X