Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬೆಂಗಳೂರು ವಿಮಾನ ನಿಲ್ದಾಣಕ್ಕೆ...

ಬೆಂಗಳೂರು ವಿಮಾನ ನಿಲ್ದಾಣಕ್ಕೆ ‘ಎಸಿಐ’ನಿಂದ ಪ್ರತಿಷ್ಠಿತ ಮಾನ್ಯತೆ

ವಾರ್ತಾಭಾರತಿವಾರ್ತಾಭಾರತಿ23 Jan 2025 9:51 PM IST
share
ಬೆಂಗಳೂರು ವಿಮಾನ ನಿಲ್ದಾಣಕ್ಕೆ ‘ಎಸಿಐ’ನಿಂದ ಪ್ರತಿಷ್ಠಿತ ಮಾನ್ಯತೆ

ಬೆಂಗಳೂರು : ಅಂತ್‍ರಾಷ್ಟ್ರೀಯ ವಿಮಾನ ನಿಲ್ದಾಣಗಳ ಮಂಡಳಿ(ಎಸಿಐ) ಕೊಡಮಾಡುವ ‘ಪ್ರವೇಶ ವರ್ಧಕ ಮಾನ್ಯತೆ’ (ಎಇಎ) ಕಾರ್ಯಕ್ರಮದ ಅಡಿಯಲ್ಲಿ 1ನೇ ಹಂತದ ಮಾನ್ಯತೆ ಪಡೆದ ದೇಶದ ಮೊದಲ ವಿಮಾನ ನಿಲ್ದಾಣ ಎಂಬ ಹೆಗ್ಗಳಿಕೆಗೆ ಬೆಂಗಳೂರಿನ ಕೆಂಪೇಗೌಡ ಅಂತರ್‍ರಾಷ್ಟ್ರೀಯ ವಿಮಾನ ನಿಲ್ದಾಣ ಪಾತ್ರವಾಗಿದೆ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ವಿಶೇಷ ಚೇತನರು ಹಾಗೂ ಹಿರಿಯ ನಾಗರಿಕರು ಸುಲಲಿತವಾಗಿ ಸಂಚರಿಸಲು ಹಾಗೂ ಇತರ ಸೌಲಭ್ಯಗಳನ್ನು ಸರಳವಾಗಿ ಬಳಸಿಕೊಳ್ಳಲು ಸೂಕ್ತ ವ್ಯವಸ್ಥೆ ನಿರ್ಮಿಸಲಾಗಿದೆ. ವಿಶೇಷ ಚೇತನರು ಹಾಗೂ ಹಿರಿಯ ನಾಗರಿಕ ಪ್ರಯಾಣಿಕರ ಅಗತ್ಯತೆಗಳನ್ನು ಪೂರೈಸುವ ಉದ್ದೇಶದಿಂದ ವಿಮಾನ ನಿಲ್ದಾಣದಲ್ಲಿ ಅಗತ್ಯ ಸೌಕರ್ಯ ಒದಗಿಸುವ ಎಇಎ ಕಾರ್ಯಕ್ರಮವನ್ನು ಜಾರಿಗೊಳಿಸಲಾಗಿದೆ. ಇದು ಕೆಂಪೇಗೌಡ ಅಂತರ್‌ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಎಇಎ ಮಾನ್ಯತೆ ಪಡೆಯಲು ಕಾರಣವಾಗಿದೆ.

ಎಇಎ ಮಾನ್ಯತೆಯು ಜಾಗತಿಕ ಬೇಡಿಕೆಗೆ ಅನುಗುಣವಾಗಿ ಸಾರ್ವತ್ರಿಕ ವಿನ್ಯಾಸ, ಲಭ್ಯವಿರುವ ಸೌಲಭ್ಯಗಳ ಮೌಲ್ಯಮಾಪನ, ಸುಧಾರಣೆಗಳನ್ನು ಕಾರ್ಯಗತಗೊಳಿಸುವುದು ಮತ್ತು ಅಂತರ್‌ ರಾಷ್ಟ್ರೀಯ ಗುಣಮಟ್ಟವನ್ನು ವಿಮಾನ ನಿಲ್ದಾಣದಲ್ಲಿ ರೂಢಿಗತಗೊಳಿಸಿಕೊಳ್ಳಲು ಅನುವು ಮಾಡಿಕೊಡುತ್ತದೆ. ಮೂರು ಪ್ರಗತಿಶೀಲ ಹಂತಗಳನ್ನು ಒಳಗೊಂಡಿರುವ ‘ಪ್ರವೇಶ ವರ್ಧಕ ಮಾನ್ಯತೆ’ ಕಾರ್ಯಕ್ರಮವು ವಿಮಾನ ನಿಲ್ದಾಣಗಳ ಕಾರ್ಯತಂತ್ರ, ನೀತಿ ನಿಯಮಗಳು ಮತ್ತು ಅವುಗಳಿಂದ ದೊರೆಯುವ ಫಲಿತಾಂಶಗಳನ್ನು ಮೌಲ್ಯಮಾಪನ ಮಾಡುತ್ತದೆ. ಪ್ರಯಾಣಿಕರು, ಸಂದರ್ಶಕರು ಮತ್ತು ಸಿಬ್ಬಂದಿ ಸೇರಿದಂತೆ ವಿಮಾನ ನಿಲ್ದಾಣದ ಎಲ್ಲ ಬಳಕೆದಾರರ ಪ್ರಯಾಣ ಅನುಭವದ ಅಭಿಪ್ರಾಯವನ್ನು ಆಧರಿಸಿ ಈ ಮಾನ್ಯತೆಯನ್ನು ನೀಡಲಾಗುತ್ತದೆ.

ಬೆಂಗಳೂರು ಅಂತರ್‌ ರಾಷ್ಟ್ರೀಯ ವಿಮಾನ ನಿಲ್ದಾಣದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತ್ಯಕಿ ರಘುನಾಥ್ ಈ ಕುರಿತು ಮಾತನಾಡಿ, ‘ಎಸಿಐನಿಂದ ಪ್ರವೇಶ ವರ್ಧಕ ಮಾನ್ಯತೆ ದೊರೆತಿರುವುದು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರತಿಯೊಬ್ಬರಿಗೂ ಸೂಕ್ತ ಸೌಲಭ್ಯ ಒದಗಿಸಲಾಗುತ್ತದೆ ಎಂಬುದನ್ನು ಪ್ರತಿಬಿಂಬಿಸುತ್ತದೆ ಎಂದು ತಿಳಿಸಿದರು.

ಎಲ್ಲ ಟರ್ಮಿನಲ್‍ಗಳಲ್ಲಿ ನಮ್ಮ ಸಿಬ್ಬಂದಿಯನ್ನು ಸಬಲೀಕರಣಗೊಳಿಸಲು ಮತ್ತು ವಿಮಾನ ನಿಲ್ದಾಣದಲ್ಲಿನ ಇತರ ಸಂಸ್ಥೆಗಳ ಜೊತೆ ನಿರಂತರ ಸಹಯೋಗ ಸಾಧಿಸಲು ಕಳೆದ ಕೆಲವು ವರ್ಷಗಳಿಂದ ಹಲವಾರು ಉಪಕ್ರಮಗಳನ್ನು ಪರಿಚಯಿಸಿದ್ದೇವೆ. ವಿಮಾನ ನಿಲ್ದಾಣಕ್ಕೆ ಪ್ರತಿಯೊಬ್ಬರನ್ನೂ ಆತ್ಮೀಯವಾಗಿ ಸತ್ಕರಿಸುವ ನಮ್ಮ ಪ್ರಯತ್ನ ನಿರಂತರವಾಗಿ ಮುಂದುವರೆಯಲಿದೆ ಎಂದು ಅವರು ಸಂತಸ ವ್ಯಕ್ತಪಡಿಸಿದರು.

ಇದೀಗ ಬೆಂಗಳೂರು ವಿಮಾನ ನಿಲ್ದಾಣ ಪಡೆದಿರುವ ಈ ಮಾನ್ಯತೆಯು ನಮ್ಮ ಇತರ ಕಾರ್ಯಕ್ರಮಗಳಾದ ‘ಬಿ-ಇನ್‍ಕ್ಲೂಡೆಡ್ ಮತ್ತು ‘ಸಹಾಯಕ ಸಾಧನ ನೀತಿ’ಗಳ ಮೂಲಕ ಮತ್ತಷ್ಟು ಬಲಗೊಳ್ಳಲಿದೆ. ಇದು ವೈವಿಧ್ಯಮಯ, ಎಲ್ಲರಿಗೂ ಸಮಾನ ಮತ್ತು ಎಲ್ಲರನ್ನೂ ಒಳಗೊಂಡ ಸಂಸ್ಥೆಯನ್ನು ರಚಿಸುವ ಮತ್ತು ಉಳಿಸಿಕೊಳ್ಳುವ ಗುರಿಯನ್ನು ಹೊಂದಿದೆ. ಬೆಂಗಳೂರು ವಿಮಾನ ನಿಲ್ದಾಣವು 2022 ರಲ್ಲಿ ಸನ್‍ಫ್ಲಾವರ್ ಲ್ಯಾನ್ಯಾರ್ಡ್ ಯೋಜನೆಯನ್ನು ಪರಿಚಯಿಸಿದ್ದು, ಇದು ಗೋಚರಿಸದ ಅಂಗವೈಕಲ್ಯ ಹೊಂದಿರುವವರಿಗೆ ಅಗತ್ಯ ಸೌಲಭ್ಯ ನೀಡುವ ಉದ್ದೇಶವನ್ನು ಹೊಂದಿದೆ ಎಂದು ಅವರು ತಿಳಿಸಿದರು.

ಈ ಪ್ರಯತ್ನಗಳು ಸಂಚಾರ ಸಮಸ್ಯೆ ಮತ್ತು ದಿವ್ಯಾಂಗ ಹೊಂದಿರುವ ವ್ಯಕ್ತಿಗಳಿಗೆ ಅಗತ್ಯವಿರುವ ಸೌಲಭ್ಯಗಳನ್ನು ಪ್ರಯಾಣದುದ್ದಕ್ಕೂ ಒದಗಿಸುವುದಾಗಿದೆ. ಜೊತೆಗೆ, ಬೆಂಗಳೂರು ವಿಮಾನ ನಿಲ್ದಾಣವು ವಿಮಾನಯಾನ ಕ್ಷೇತ್ರದಲ್ಲಿ ಸಂಚಾರ ಸಮಸ್ಯೆ ಮತ್ತು ದಿವ್ಯಾಂಗತೆ ಹೊಂದಿರುವ ವ್ಯಕ್ತಿಗಳ ಅನುಭವದ ಮಾನದಂಡವನ್ನು ಹೊಸ ಎತ್ತರಕ್ಕೆ ಏರಿಸುವ ಗುರಿಯನ್ನು ಹೊಂದಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X