ಬಿಲ್ ಪಾವತಿಯಲ್ಲಿ ಅವ್ಯವಹಾರ : ತನಿಖಾಧಿಕಾರಿಯಗಿ ಸುರಳ್ಕರ್ ವಿಕಾಸ್ ಕಿಶೋರ್ ನೇಮಕ

ಸುರಳ್ಕರ್ ವಿಕಾಸ್ ಕಿಶೋರ್
ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯ ಗಾಂಧಿನಗರ ವಿಭಾಗದಲ್ಲಿ ಘನತ್ಯಾಜ್ಯ ಸಂಗ್ರಹಣೆ ಮತ್ತು ಸಾಗಾಣೆಯ ಬಿಲ್ ಪಾವತಿಯಲ್ಲಿ ಅವ್ಯವಹಾರ ನಡೆದಿರುವ ದೂರುಗಳನ್ನು ಪರಿಗಣನೆಗೆ ತೆಗೆದುಕೊಂಡು, ತನಿಖೆ ನಡೆಸುವಂತೆ ಬಿಬಿಎಂಪಿ ವಿಶೇಷ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್ ರನ್ನು ತನಿಖಾಧಿಕಾರಿಯನ್ನಾಗಿ ನೇಮಿಸಲಾಗಿದೆ.
ಸೋಮವಾರ ಈ ಕುರಿತು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಆದೇಶ ಹೊರಡಿಸಿದ್ದು, ಸಲ್ಲಿಕೆಯಾಗಿರುವ ದೂರುಗಳನ್ನು ಕುಲಂಕೂಷವಾಗಿ ಪರಿಶೀಲಿಸಿ, ಸಮಗ್ರ ತನಿಖೆಯನ್ನು ಕೈಗೊಂಡು ನೈಜ ವಸ್ತು ಸ್ಥಿತಿಯನ್ನು ಅವಲೋಕಿಸಿ ವಿವರವಾದ ವರದಿಯನ್ನು ಸಲ್ಲಿಸಲು ಸುರಳ್ಕರ್ ವಿಕಾಸ್ ಕಿಶೋರ್ ಅವರನ್ನು ತನಿಖಾಧಿಕಾರಿಯಾಗಿ ನೇಮಿಸಲಾಗಿದೆ. ತನಿಖಾಧಿಕಾರಿಯು ಅಗತ್ಯ ಅಧಿಕಾರಿ/ಸಿಬ್ಬಂದಿಗಳನ್ನು ನಿಯೋಜಿಸಿಕೊಂಡು ಒಂದು ವಾರದೊಳಗೆ ವಿವರವಾದ ವರದಿಯನ್ನು ಬಿಬಿಎಂಪಿ ಕೇಂದ್ರ ಕಚೇರಿಗೆ ಸಲ್ಲಿಸುವಂತೆ ಸೂಚಿಸಲಾಗಿದೆ.
Next Story





