ಯೋಜನಾ ಆಯೋಗದ ಉಪಾಧ್ಯಕ್ಷರಾಗಿ ಬಿ.ಆರ್.ಪಾಟೀಲ್ ಅಧಿಕಾರ ಸ್ವೀಕಾರ

ಬೆಂಗಳೂರು : ಆಳಂದ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಆರ್.ಪಾಟೀಲ್ ಮಂಗಳವಾರ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರಾಗಿ ವಿಧಾನ ಸೌಧದ ಮೂರನೇ ಮಹಡಿಯಲ್ಲಿರುವ ತಮ್ಮ ಕಚೇರಿ(ಕೊಠಡಿ ಸಂಖ್ಯೆ:303)ಯಲ್ಲಿ ಅಧಿಕಾರ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಬಿ.ಆರ್.ಪಾಟೀಲ್, ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಬಲವರ್ಧನೆಗಾಗಿ ಕ್ರಮಗಳನ್ನು ಕೈಗೊಳ್ಳಲು ಶ್ರಮಿಸಲಾಗುವುದು. ಕರ್ನಾಟಕದ ಹಿಂದುಳಿದ ಪ್ರದೇಶಗಳ ಅಭಿವೃದ್ಧಿಗಾಗಿ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಹಲವಾರು ಯೋಜನೆಗಳನ್ನು ರೂಪಿಸಲು ಕ್ರಮಕೈಗೊಳ್ಳುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಸಾಂಖ್ಯಿಕ ಮತ್ತು ಯೋಜನಾ ಇಲಾಖೆಯ ಕಾರ್ಯದರ್ಶಿ ವಿಶಾಲ್ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
Next Story





