ಅಲ್ಪಸಂಖ್ಯಾತ ಸಮುದಾಯದ ಜನಪ್ರತಿನಿಧಿಗಳ ಜೊತೆ ಮುಖ್ಯಮಂತ್ರಿ ಸಭೆ

ಬೆಂಗಳೂರು : 2025-26ನೇ ಸಾಲಿನ ಬಜೆಟ್ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ತಮ್ಮ ಸರಕಾರಿ ನಿವಾಸ ‘ಕಾವೇರಿ’ಯಲ್ಲಿ ಅಲ್ಪಸಂಖ್ಯಾತರ ಸಮುದಾಯದ ಜನ ಪ್ರತಿನಿಧಿಗಳ ಜೊತೆ ಸಭೆ ನಡೆಸಿದರು.
ಸಭೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಝಮೀರ್ ಅಹ್ಮದ್ ಖಾನ್, ಪೌರಾಡಳಿತ ಸಚಿವ ರಹೀಮ್ ಖಾನ್, ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿಗಳಾದ ನಸೀರ್ ಅಹ್ಮದ್, ಗೋವಿಂದರಾಜು, ಆರ್ಥಿಕ ಸಲಹೆಗಾರ ಬಸವರಾಜರಾಯರೆಡ್ಡಿ, ಮಾಜಿ ಸಚಿವ ತನ್ವಿರ್ ಸೇಠ್, ವಿಧಾನಪರಿಷತ್ತಿನ ಮುಖ್ಯ ಸಚೇತಕ ಸಲೀಮ್ ಅಹ್ಮದ್, ವಿಧಾನಪರಿಷತ್ ಸದಸ್ಯರಾದ ಅಬ್ದುಲ್ ಜಬ್ಬಾರ್, ಬಲ್ಕೀಸ್ ಬಾನು, ಶಾಸಕ ರಿಝ್ವಾನ್ ಅರ್ಶದ್ ಸೇರಿದಂತೆ ಇನ್ನಿತರ ಶಾಸಕರು ಪಾಲ್ಗೊಂಡಿದ್ದರು.
Next Story





