Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಕೇಂದ್ರ ಸಚಿವ ಕುಮಾರಸ್ವಾಮಿ ರಾಜೀನಾಮೆಗೆ...

ಕೇಂದ್ರ ಸಚಿವ ಕುಮಾರಸ್ವಾಮಿ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ27 Feb 2025 9:14 PM IST
share
ಕೇಂದ್ರ ಸಚಿವ ಕುಮಾರಸ್ವಾಮಿ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ

ಬೆಂಗಳೂರು : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಈ ಹಿಂದೆ ಸಿಎಂ ಆಗಿದ್ದ ಅವಧಿಯಲ್ಲಿ ಡಿನೋಟಿಫಿಕೇಶನ್ ಹಾಗೂ ಅಕ್ರಮ ಗಣಿಗಾರಿಕೆಗೆ ಅನುಮತಿ ನೀಡಿರುವ ಪ್ರಕರಣಗಳಲ್ಲಿ ಅವರ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿ, ತನಿಖೆಗೆ ಆದೇಶ ನೀಡಿರುವ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಕುಮಾರಸ್ವಾಮಿ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್ ಆಗ್ರಹಿಸಿದ್ದಾರೆ.

ಗುರುವಾರ ರೇಸ್‍ಕೋರ್ಸ್ ರಸ್ತೆಯಲ್ಲಿ ಕೆಪಿಸಿಸಿ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಶ್ರೀಸಾಯಿ ವೆಂಕಟೇಶ್ವರ ಮಿನರಲ್ಸ್ ಕಂಪೆನಿಗೆ ಕಾನೂನು ಬಾಹಿರವಾಗಿ ಗಣಿಗಾರಿಕೆಗೆ ಅವಕಾಶ ನೀಡಿರುವ ಬಗ್ಗೆ ಲೋಕಾಯುಕ್ತರು ತನಿಖೆ ನಡೆಸಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದಾರೆ. ಬಿಡಿಎ ವ್ಯಾಪ್ತಿಗೆ ಬರುವ ಹಲಗೆ ವಡೇರಹಳ್ಳಿ ಡಿನೋಟಿಫಿಕೇಶನ್ ಪ್ರಕರಣ ಮತ್ತು ರಾಮನಗರ ಜಿಲ್ಲೆಯ ಕೇತಗಾನಹಳ್ಳಿಯಲ್ಲೂ ಭೂ ಒತ್ತುವರಿ ಪ್ರಕರಣದಲ್ಲಿ ಕುಮಾರಸ್ವಾಮಿ ಸಿಲುಕಿಕೊಂಡಿದ್ದಾರೆ ಎಂದು ತಿಳಿಸಿದರು.

ಕುಮಾರಸ್ವಾಮಿ ಕೇಂದ್ರ ಸಚಿವರಾಗಿ ಮುಂದುವರೆಯುವ ನೈತಿಕತೆ ಕಳೆದುಕೊಂಡಿದ್ದಾರೆ. ಬಿಜೆಪಿ ನಾಯಕರು ಮೂಡ ಪ್ರಕರಣದಲ್ಲಿ ಬೆಂಗಳೂರಿನಿಂದ ಮೈಸೂರಿನವರೆಗೂ ಪಾದಯಾತ್ರೆ ಮಾಡಿದ್ದರು. ಈಗ ಮಂಡ್ಯದಿಂದ ರಾಜಭವನದವರೆಗೂ ಪಾದಯಾತ್ರೆ ನಡೆಸಿ ಕುಮಾರಸ್ವಾಮಿ ರಾಜೀನಾಮೆಗೆ ಒತ್ತಾಯಪಡಿಸಬೇಕು. ಭ್ರಷ್ಟಾಚಾರದ ವಿರುದ್ಧ ಕಿಂಚೆತ್ತಾದರೂ ಹೋರಾಟದ ಮನೋಭಾವ ಇದ್ದರೆ ಹಾಗೂ ಭ್ರಷ್ಟಾಚಾರವನ್ನು ಟೀಕಿಸುವ ನೈತಿಕತೆ ಹೊಂದಿದ್ದರೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ರಾಜ್ಯಪಾಲರಿಗೆ ಮನವಿ ಸಲ್ಲಿಸಬೇಕು ಎಂದು ಅವರು ತಿಳಿಸಿದರು.

ರಾಜ್ಯಪಾಲರು ಈ ಪ್ರಕರಣಗಳನ್ನು ಅತ್ಯಂತ ಜರೂರಾಗಿ ತನಿಖೆ ನಡೆಸಲು ವಿಶೇಷ ತನಿಖಾ ತಂಡಕ್ಕೆ ಸೂಚಿಸಬೇಕು ಹಾಗೂ ಈ ಭ್ರಷ್ಟಾಚಾರದ ಪ್ರಕರಣದಲ್ಲಿ ತುರ್ತು ತನಿಖೆಗೆ ಸೂಚನೆ ನೀಡಬೇಕು ಎಂದು ಮನೋಹರ್ ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರಾದ ಎ.ಆನಂದ್, ಹೇಮರಾಜು, ಕುಶಾಲ್ ಹರುವೇಗೌಡ, ಸುಂಕದಕಟ್ಟೆ ನವೀನ್ ಸೇರಿದಂತೆ ಹಲವರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X